ಉಡುಪಿ | ಮಾದಕ ವ್ಯಸನ ತಡೆಯಲು ಸಮಾಜ ಒಗ್ಗೂಡಬೇಕು : ಮಂಜುನಾಥ್ ಬಡಿಗಾರ್

Date:

ಜಮೀಯ್ಯತುಲ್ ಫಲಾಹ್ ದ.ಕ., ಉಡುಪಿ ಜಿಲ್ಲೆ ಉಡುಪಿ ತಾಲೂಕು ಘಟಕದ ವತಿಯಿಂದ ಇಂದು ಉಡುಪಿಯ ಜಾಮಿಯಾ ಮಸೀದಿಯಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಹಾಗೂ ಮಾದಕ ವ್ಯಸನ ವಿರುದ್ಧ ಜಾಗೃತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.

- Advertisement -

ಉಡುಪಿ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ್ ಬಡಿಗಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಇಂದಿನ ಸಮಾಜದಲ್ಲಿ ಯುವಜನತೆ ಮಾದಕ ವ್ಯಸನದ ಬಲೆಗೆ ಸಿಲುಕುತ್ತಿರುವುದು ಗಂಭೀರ ವಿಷಯ. ಶಿಕ್ಷಣ, ಕುಟುಂಬ ಮತ್ತು ಧಾರ್ಮಿಕ ಸಂಸ್ಥೆಗಳು ಈ ಕುರಿತು ಜಾಗೃತಿ ಮೂಡಿಸಲು ಕೈಜೋಡಿಸಬೇಕು. ನಶಾ ವಸ್ತುಗಳಿಂದ ದೂರವಿದ್ದು ಸಕಾರಾತ್ಮಕ ಬದುಕು ಕಟ್ಟಿಕೊಳ್ಳುವುದು ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ. ಮಾದಕ ವ್ಯಸನ ತಡೆಯಲು ಸಮಾಜ ಒಗ್ಗೂಡಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...
ರಸಗ

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ ಅವರು ಮಾತನಾಡಿ, ಅಂಕಗಳನ್ನು ಪಡೆಯುವುದು ಕೇವಲ ಪರೀಕ್ಷೆ ಪಾಸಾಗುವುದಕ್ಕಷ್ಟೇ ಅಲ್ಲ, ಶಿಕ್ಷಣವು ವ್ಯಕ್ತಿಯ ಭವಿಷ್ಯವನ್ನು ರೂಪಿಸುವ ಶಕ್ತಿಯಾಗಿದೆ. ಅದನ್ನು ಬಳಸಿಕೊಂಡು ಸಮಾಜದ ಒಳಿತಿಗೆ ಸೇವೆ ಸಲ್ಲಿಸುವ ಮಾನವೀಯ ಮೌಲ್ಯಗಳು ನಮ್ಮೊಳಗೆ ಬೆಳೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಮೀಯ್ಯತುಲ್ ಫಲಾಹ್ ಉಡುಪಿ ತಾಲೂಕು ಅಧ್ಯಕ್ಷ ಖತೀಬ್ ಅಬ್ದುಲ್ ರಶೀದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಮೀಯ್ಯತುಲ್ ಫಲಾಹ್ ಕೋಶಾಧಿಕಾರಿ ನಜೀರ್‌ ನೇಜಾರ್‌ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಕಾರ್ಯದರ್ಶಿ ಸಮೀರ್ ಧನ್ಯವಾದ ಸಲ್ಲಿಸಿದರು. ಫಾಜೀಲ್ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಸುಮಾರು 58 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಯಿತು.

WhatsApp Image 2025 11 09 at 5.15.51 AM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...