ಜಮಖಂಡಿ | ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನಿಗದಿಗೆ ರೈತರ ಆಗ್ರಹ: ಬೃಹತ್‌ ಪ್ರತಿಭಟನೆ

Date:

ಸಕ್ಕರೆ ಕಾರ್ಖಾನೆಗಳಿಗೆ ಪೂರೈಕೆಯಾಗುವ ಪ್ರತಿ ಟನ್ ಕಬ್ಬಿಗೆ ವೈಜ್ಞಾನಿಕ ದರ ನಿಗದಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಕ್ರಾಸ್ ಬಳಿ ಬೃಹತ್ ಮಟ್ಟದ ಪ್ರತಿಭಟನೆ ನಡೆಸಲಾಯಿತು.

- Advertisement -

ಯುವ ಮುಖಂಡ ರಾಜು ನದಾಫ್ ಮಾತನಾಡಿ, “ಕೃಷಿ ಖರ್ಚು ತುಂಬಾ ಹೆಚ್ಚಾಗಿದ್ದು, ಒಂದು ಎಕರೆಯಲ್ಲಿ ಕಬ್ಬು ಬೆಳೆಯಲು ಸಾವಿರಾರು ರೂಪಾಯಿ ಖರ್ಚು ಬರುತ್ತದೆ. ಆದ್ದರಿಂದ ಪ್ರತಿ ಟನ್ ಕಬ್ಬಿಗೆ ₹3500 ದರ ನಿಗದಿಗೊಳಿಸಬೇಕು. ಈ ಬೇಡಿಕೆ ಈಡೇರುವವರೆಗೂ ಹೋರಾಟ ಕೈ ಬಿಡುವುದಿಲ್ಲ. ಸದ್ಯ ನಿಗದಿಯಾಗಿರುವ ಎಫ್‌ಆರ್‌ಪಿ ದರವನ್ನು ರೈತರು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಅಕ್ಟೋಬರ್‌ 25ರೊಳೆಗೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದು ಎಫ್‌ಆರ್‌ಪಿ ಹೊರತುಪಡಿಸಿ ದರ ಘೋಷಣೆ ಮಾಡುವಂತೆ ಒತ್ತಾಯಿಸಲಾಗಿತ್ತು. ಆದರೆ ಈವರೆಗೆ ಯಾವುದೇ ರೀತಿಯ ಕ್ರಮವಾಗಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರೈತ ಯುವ ಮುಖಂಡ ಯಲ್ಲಪ್ಪ ಹೆಗಡೆ ಮಾತನಾಡಿ, “ಒಂದು ಟನ್ ಕಬ್ಬಿನಿಂದ ಸಕ್ಕರೆ ಜತೆಗೆ ಸ್ಪಿರಿಟ್ ಮೊಲ್ಯಸಿಸ್, ಬಗಾಸ್ ಮೊದಲಾದ ಉಪ ಉತ್ಪನ್ನಗಳಿಂದಲೂ ಸಕ್ಕರೆ ಕಾರ್ಖಾನೆಗಳು ಲಾಭ ಪಡೆಯುತ್ತವೆ. ಆದರೂ, ರೈತರಿಗೆ ಬಿಲ್ ನೀಡುವಲ್ಲಿ ಸತಾಯಿಸುತ್ತವೆ. ಜತೆಗೆ ರೈತರನ್ನು ಸುಲಿಗೆ, ಮೋಸ ಮಾಡುವುದು ತಪ್ಪುತ್ತಿಲ್ಲ. ಇದಲ್ಲದೆ, ಅಕ್ಕಪಕ್ಕದ ರಾಜ್ಯ ಹಾಗೂ ಜಿಲ್ಲೆಯಲ್ಲಿ ಒಂದು ಬೆಲೆಯಾದರೆ, ನಮ್ಮ ಜಿಲ್ಲೆಯಲ್ಲೇ ಒಂದು ಬೆಲೆಯಾಗಿದೆ. ಇದು ಈ ಭಾಗದ ರೈತರ ದುರಾದೃಷ್ಟ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ರೈತ ಸಂಘದ ಜಿಲ್ಲಾ ನಾಯಕಿ ಶ್ರೀಶೈಲ ಭೂಮಾರ, ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ರೈತ ಮುಖಂಡರು, ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ವಕೀಲರ ಸಂಘ, ಸಾಧು ಸಂತರ ಸಂಘ, ಭಾರತೀಯ ಕಿಸಾನ್ ಸಂಘ, ಜಿಲ್ಲೆಯ ಪ್ರಗತಿಪರ ಹೋರಾಟಗಾರರೆಲ್ಲರೂ ಕಬ್ಬು ಬೆಳೆಗಾರರ ಹೋರಾಟಕ್ಕೆ ನೈತಿಕವಾಗಿ ಬೆಂಬಲ ಸೂಚಿಸಿ ಮಾತನಾಡಿದರು.

ಈ ಹೋರಾಟದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಬ್ಬು ಬೆಳೆಗಾರರ ಹೋರಾಟ ಸಮಿತಿಯ ಮುಂಚೂಣಿ ನಾಯಕರಾದ ಸಿದ್ದಪ್ಪ ಬಣಗಾನವರ, ಬಾಹುಬಲಿ ನ್ಯಾಮಗೌಡ, ಪರಸು ಸಾಟೆ, ಶಿವಾಜಿ ಕದಂ ಹಾಗೂ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...