ಜಮಖಂಡಿ | ಭೀಕರ ಅಪಘಾತ; ನಾಲ್ವರು ಯುವಕರು ಸಾವು

Date:

ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್​​ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ.

- Advertisement -

ಮೃತಪಟ್ಟ ಯುವಕರನ್ನು ವಿಶ್ವನಾಥ್ (17), ಪ್ರವೀಣ್ (22), ಗಣೇಶ (20) ಹಾಗೂ ಪ್ರಜ್ವಲ್ (17) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸಿದ್ದಾಪುರ ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಸಿದ್ದಾಪುರ ಬಳಿಯಿರುವ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುವ ಟ್ರ್ಯಾಕ್ಟರ​ನ್ನು ಬಿಜಾಪುರ-ಬೆಳಗಾವಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಅತಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ ಕೆಳಗಡೆ ಕಾರು ಸಿಲುಕಿದ್ದು, ಅದರಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಕೊನೆಯುಸಿರೆಳೆದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ | ಕಬ್ಬು ಬೆಳೆಗಾರ ಜೊತೆಗಿನ ಸಂಧಾನ ಯಶಸ್ವಿ, ಪ್ರತಿ ಟನ್‌ ಕಬ್ಬಿಗೆ 3,300 ರೂ. ನಿಗದಿ

ಸ್ಥಳಕ್ಕೆ ಆಗಮಿಸಿದ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು, ಟ್ರ್ಯಾಕ್ಟರ್ ಕೆಳಗಡೆ ಸಿಲುಕಿಕೊಂಡಿದ್ದ ಕಾರಿನಲ್ಲಿದ್ದ ಮೃತದೇಹಗಳನ್ನು ಸ್ಥಳೀಯರ ಸಹಾಯದಿಂದ ಹೊರತೆಗೆದಿದ್ದಾರೆ. ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಉಡುಪಿ ಜಿಲ್ಲೆಯಲ್ಲಿ 47 ಮಂದಿ ವಿದೇಶಿ ಪೌರತ್ವ ಹೊಂದಿರುವವರು ಪತ್ತೆ

ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)-2026...

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...

ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಿರಲಿ: ಅಶೋಕ್ ಕುಮಾರ್ ಕೊಡವೂರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು....