ಜಮಖಂಡಿ | ಕನಕದಾಸರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ: ಶಾಸಕ ಜಗದೀಶ ಗುಡಗುಂಟಿ

Date:

16ನೇ ಶತವಾನದಲ್ಲಿ ಅವತರಿಸಿದ ಕನಕದಾಸರು ಸಮಾಜ ಸುಧಾರಣೆಗೆ ಶ್ರಮಿಸಿದರು. ಅವರ ಅನೇಕ ಕೃತಿಗಳಲ್ಲಿ ಸಮಾಜದ ಓರೇ ಕೋರೆಗಳನ್ನು ತಿದ್ದುವ, ಸಾಮಾನ್ಯರೂ ಉತ್ತಮರಾಗಿ ಬದುಕುವ ಸಂದೇಶ ಸಾರಿದರು. ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ಹೇಳಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ದಾಸಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

“ಕನಕದಾಸರು ಹರಿದಾಸ ಪರಂಪರೆಯಲ್ಲಿ ಸರ್ವಶ್ರೇಷ್ಠರಾಗಿದ್ದರು. ಅವರ ʼಮೋಹನ ತರಂಗಿಣಿʼ ಸೇರಿದಂತೆ ಮೊದಲಾದ ಕೃತಿಗಳಲ್ಲಿ ಭಕ್ತಿ ಪ್ರಧಾನ ಮಾರ್ಗ ತಿಳಿಸಿಕೊಟ್ಟಿದ್ದಾರೆ. ಆಗಿನ ಕಾಲದಲ್ಲಿ ಅತ್ಯಂತ ಶ್ರೀಮಂತ ಹಾಗೂ ನಾಯಕರಾಗಿದ್ದ ಅವರು ದೇವರನ್ನು ಒಲಿಸಿಕೊಂಡು ಇಹಲೋಕದ ಐಶ್ವರ್ಯಕ್ಕಿಂತ ದೇವರ ಭಕ್ತಿ, ಧ್ಯಾನವೇ ದೊಡ್ಡದು ಎಂಬುದನ್ನು ತೋರಿಸಿಕೊಟ್ಟರು. ಸಮಾಜದಲ್ಲಿನ ಅಂಕು ಡೊಂಕು ತಿದ್ದಲು ಪ್ರಯತ್ನಿಸಿದರು. ಕುಲ-ಕುಲವೆಂದು ಬಡಿದಾಡದಿರಿ ಎಂದು ಎಚ್ಚರಿಸಿದರು” ಎಂದು ಹೇಳಿದರು.

ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, “ಜಾತಿವಾದವನ್ನು 16ನೇ ಶತಮಾನದಲ್ಲಿ ವಿರೋಧಿಸಿ ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಕನಕದಾಸರು ಎಲ್ಲರಿಗೂ ಆದರ್ಶ ಪ್ರಾಯರಾಗಿದ್ದಾರೆ” ಎಂದರು.

ಇದನ್ನೂ ಓದಿ: ಈ ದಿನ ಸಂಪಾದಕೀಯ | ʼವಂದೇ ಮಾತರಂ’ವಿವಾದ; ಪರಿವಾರ- ಪ್ರಧಾನಿ ಪೋಣಿಸಿದ ಸುಳ್ಳುಗಳ ಬೊಂತೆ

ಮಾಜಿ ಶಾಸಕ ಆನಂದ ನ್ಯಾಮಗೌಡ ಮಾತನಾಡಿ, “ಕನಕದಾಸರು ತತ್ವಜ್ಞಾನಿಗಳು, ವಿಜ್ಞಾನಿಗಳು, ಸಮಾಜ ಸುಧಾರಕರು, ಸರ್ವಶ್ರೇಷ್ಠವಾದ ಭಕ್ತಿ ಮಾರ್ಗ ತೋರಿಸಿದವರು. ಅವರ ಗೌರವಾರ್ಥವಾಗಿ ನಗರದ ಎಸ್‌ಆರ್‌ಎ ಕ್ಲಬ್‌ನ ರಸ್ತೆಯಲ್ಲಿ ಕನಕದಾಸರ ವೃತ್ತ ನಿರ್ಮಿಸಲಾಗುವುದು” ಎಂದು ಭರವಸೆ ನೀಡಿದರು.

ಸಮಾಜದ ಮುಖಂಡ ಮಲ್ಲು ಮೇಳಿ ಮಾತನಾಡಿದರು. ನಗರಸಭೆ ಅಧ್ಯಕ್ಷ ಈಶ್ವರ ವಾಳೆಣ್ಣವರ, ಶ್ರೀಶೈಲ ದಳವಾಯಿ, ಅರ್ಜುನ ದಳವಾಯಿ, ಸಂಗಮೇಶ ದಳವಾಯಿ, ನಾಗಪ್ಪ ಸನದಿ, ಶಾಮರಾವ ಘಾಟಗೆ, ನಗರಸಭೆ ಸದಸ್ಯ ಪರಮಾನಂದ ಗೌರೋಜಿ, ಪೌರಾಯುಕ್ತ ಜ್ಯೋತಿ ಗಿರೀಶ, ಬಸವರಾಜ ಸಿಂಧೂರ, ತಾಪಂ ಇಒ ಸಚಿನ ಮಾಚಕನೂರು, ತಹಶೀಲ್ದಾರ್ ಅನೀಲ ಬಡಗೇರ್‌ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...