ಬೀದರ್‌ | ಜನವರಿ 26ಕ್ಕೆ ಸಂವಿಧಾನದ ರಕ್ಷಣೆಗೆ ಜನಜಾಗೃತಿ ಸಮಾವೇಶ

Date:

Advertisements

ವಿವಿಧ ದಲಿತ ಸಂಘಟನೆಗಳ ಒಕ್ಕೂಟದಿಂದ ಜನವರಿ 26 ರಂದು ಹಮ್ಮಿಕೊಂಡಿರುವ ಸಂವಿಧಾನ ಸಂರಕ್ಷಣೆ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಬೃಹತ್ ಸಮಾವೇಶದ ಕರಪತ್ರವನ್ನು ಬೀದರ್ ನಗರದ  ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬಿಡುಗಡೆ ಮಾಡಲಾಯಿತು.

ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಉಪಾಧ್ಯಕ್ಷ ಚಂದ್ರಕಾಂತ ನಿರಾಟೆ ಮಾತನಾಡಿ, “ಭಾರತೀಯ ಸಂವಿಧಾನ ದೇಶದ ಎಲ್ಲಾ ಪ್ರಜೆಗಳಿಗೆ ಸಮಾನ ಅವಕಾಶ, ಸಮಾನ ಪ್ರಗತಿಗೆ ಅನುವು ನೀಡಿದೆ, ಆದರೆ ದೇಶದಲ್ಲಿ ಸಂವಿಧಾನ ಪ್ರಕಾರ ಆಡಳಿತ ನಡೆಯುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಒಕ್ಕೂಟದ ಖಜಾಂಚಿ ನಸಿಂಗ ಸಾಮ್ರಾಟ್ ಮಾತನಾಡಿ, “ಸಂವಿಧಾನದ ಅಂಶಗಳು ದೇಶದ ಸರ್ವ ಪ್ರಜೆಗಳ ಹಿತ ಬಯಸುತ್ತವೆ , ಆದರೆ ಆಡಳಿತ ನಡೆಸುವುವವರು ಕೆಟ್ಟ ಆಡಳಿತ ನಡೆಸುತ್ತಿದ್ದಾರೆ” ಎಂದರು.

Advertisements

ಈ ಸುದ್ದಿಓದಿದ್ದೀರಾ? ಬೀದರ್‌ | ಬಿಎಸ್‌ಎಸ್‌ಕೆ ಆಡಳಿತ ಮಂಡಳಿ ವಜಾಕ್ಕೆ ಆಗ್ರಹ

ಈ ಸಂದರ್ಭದಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಅಂಬೇಡ್ಕರ್ ಸಾಗರ, ಜಿಲ್ಲಾ ಗೌರವಾಧ್ಯಕ್ಷ ಸಂಜಯ ಭೋಸ್ಲೆ, ಕಾರ್ಯಧ್ಯಕ್ಷ ರಾಜಕುಮಾರ ಗುನ್ನಳ್ಳಿ, ಕಾರ್ಯದರ್ಶಿ ರಾಜಕುಮಾರ ಭಾವಿಕಟ್ಟಿ ಹಾಗೂ ಪದಾಧಿಕಾರಿಗಳಾದ ರಾಘವೇಂದ್ರ ಮೀನಕೇರಾ, ಜಗನ್ನಾಥ ಹೊನ್ನಾ ಅಂಬಾದಾಸ ಸೋನಿ ಅಭಿಲಾಸ ಶಿಂಧೆ, ಗೌತಮ ಭೋಸ್ಲೆ, ಅರವಿಂದ ದಯಾಳ, ಮುಕೇಶ ಶಾಹಗಂಜ್, ಅಂಬಾದಾಸ ಸೈನೆ, ಸಾಹಿತಿ ಸುಬ್ಬಣ್ಣ ಕರಕನಳ್ಳಿ, ನಿತೀನ ಉಪ್ಪೆ, ಲಕ್ಷ್ಮಣ ಚಕ್ರವರ್ತಿ, ತುಕರಾಮ ಬೌದ್ದೆ, ಸ್ವರೂಪ ಸಿಂಧೆ  ರಮೇಶ ಮಂದಕನಳ್ಳಿ ಕುಮಾರ ಕಾಂತೆ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X