ಬಾಗೇಪಲ್ಲಿ | ಜನಸ್ಪಂದನಾ ಕಾರ್ಯಕ್ರಮ; 600ಕ್ಕೂ ಅಧಿಕ ಅರ್ಜಿ ಸಲ್ಲಿಕೆ

Date:

ಸರಕಾರಿ ಸೌಲಭ್ಯಗಳು ಹಾಗೂ ಹಲವಾರು ಆಡಳಿತಾತ್ಮಕ ಸಮಸ್ಯೆಗಳ ಪರಿಹಾರಕ್ಕೆ ಜನಸ್ಪಂದನಾ ಕಾರ್ಯಕ್ರಮ ಸಹಕಾರಿಯಾಗಿದ್ದು, ನಾಗರೀಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.

- Advertisement -

ಬಾಗೇಪಲ್ಲಿ ತಾಲೂಕಿನ ಪೈಪಾಳ್ಯ ಗ್ರಾಮದಲ್ಲಿ ಕಂದಾಯ ಇಲಾಖೆ, ತಾಲೂಕು ಪಂಚಾಯತಿ ಸಂಯುಕ್ತಾಶ್ರಯದಲ್ಲಿ ಬುಧವಾರ ಆಯೋಜಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಜನಸ್ಪಂದನಾ ಕಾರ್ಯಕ್ರಮದ ಮೂಲಕ ತಾಲೂಕು ಮಟ್ಟದ ನಾನಾ ಇಲಾಖೆಗಳ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಲ್ಪಿಸುತ್ತಾರೆ. ಹಾಗಾಗಿ ಸಾರ್ವಜನಿಕರು ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದರು.

600 ಕ್ಕೂ ಹೆಚ್ಚು ಅರ್ಜಿಗಳ ಸಲ್ಲಿಕೆ :

ಜನಸ್ಪಂದನಾ ಕಾರ್ಯಕ್ರಮದಲ್ಲಿ ಪೋಲನಾಯಕನಹಳ್ಳಿ ಮತ್ತು ಜೂಲಪಾಳ್ಯ ಗ್ರಾಪಂ ವ್ಯಾಪ್ತಿಯ ಸಾವಿರಾರು ಜನರು ಭಾಗವಹಿಸಿದ್ದು, 600ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾದವು. ಗ್ಯಾರಂಟಿ ಯೋಜನೆಗಳು, ರಸ್ತೆ, ನಿವೇಶನ, ವಸತಿ, ಪಡಿತರ ಚೀಟಿ, ಸಾರಿಗೆ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಇನ್ನಿತರ ಮೂಲಭೂತ ಸಮಸ್ಯೆಗಳ ಕುರಿತು ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಸಿದರು.

ನಾನಾ ಸೌಲಭ್ಯಗಳ 1130 ಆದೇಶ ಪತ್ರಗಳ ವಿತರಣೆ :

ಇದೇ ವೇಳೆ ಕಂದಾಯ ಇಲಾಖೆ ವ್ಯಾಪ್ತಿಯ 300 ಕ್ಕೂ ಹೆಚ್ಚು ಪಿಂಚಣಿ, ಭಾಗ್ಯಲಕ್ಷ್ಮಿ ಬಾಂಡ್ , 90 ಮಂದಿಗೆ ಹಕ್ಕು ಪತ್ರ, 21 ಗ್ರಾಮಗಳಿಗೆ ಸ್ಮಶಾನ ಮಂಜುರಾತಿ ಪತ್ರಗಳು, ಸಾಗುವಳಿ ಚೀಟಿ, ಖಾತೆಗಳು, ಮನೆ ಹಾನಿ, ಆಕಸ್ಮಿಕವಾಗಿ ಮರಣ ಹೊಂದಿದವರ ಕುಟುಂಬಸ್ಥರಿಗೆ ಪರಿಹಾರದ ಚೆಕ್ ಗಳು, ತಾಲೂಕು ಪಂಚಾಯತಿ ವತಿಯಿಂದ ನರೇಗಾ ಜಾಬ್ ಕಾರ್ಡ್, ಎನ್ಆರ್ ಎಲ್ಎಮ್ ಯೋಜನೆ ಸೇರಿದಂತೆ ನಾನಾ ಯೋಜನೆಗಳ 1130 ಫಲಾನುಭವಿಗಳಿಗೆ ಸೌಲಭ್ಯಗಳ ಆದೇಶ ಪತ್ರಗಳನ್ನು ವಿತರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಂದು ದೇಶ ಒಂದು ಚುನಾವಣೆ- ಒಕ್ಕೂಟ ವ್ಯವಸ್ಥೆ ಧ್ವಂಸಕ್ಕೆ ಅಡಿಗಲ್ಲು

‌ಈ ಸಂದರ್ಭದಲ್ಲಿ ಕೋಚಿಮುಲ್ ನಿರ್ದೇಶಕ ಮಂಜುನಾಥ ರೆಡ್ಡಿ, ತಹಶೀಲ್ದಾರ್ ಮನಿಷಾ ಮಹೇಶ್.ಎಸ್.ಪತ್ರಿ, ಇಓ ರಮೇಶ್, ಬಿಇಓ ಎನ್.ವೆಂಕಟೇಶಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ಸತ್ಯನಾರಾಯಣರೆಡ್ಡಿ, ಸಹಾಯಕ ಕೃಷಿ ನಿರ್ದೇಶಕಿ ಲಕ್ಷ್ಮೀ, ಸರ್ಕಲ್ ಇನ್ಸ್ ಪೆಕ್ಟರ್ ಪ್ರಶಾಂತ್ ಆರ್ ವರ್ಣಿ, ಸಿಡಿಪಿಓ ರಾಮಚಂದ್ರ, ಮುಖಂಡರಾದ ಬೂರಗಮಡುಗು ನರಸಿಂಹಪ್ಪ, ಪಿ.ಮಂಜುನಾಥರೆಡ್ಡಿ, ಜೂಲಪಾಳ್ಯ ಮತ್ತು ಪೋಲನಾಯಕನಹಳ್ಳಿ ಗ್ರಾಮ ಪಂಚಾಯತಿಗಳ ಪಿಡಿಓ, ಜನಪ್ರತಿನಿಧಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...