ರಾಯಚೂರು | ಬಸ್‌ ನಿಲುಗಡೆಗೆ ಆಗ್ರಹಿಸಿ ಜವಳಗೇರಾ ಗ್ರಾಮಸ್ಥರ ಪ್ರತಿಭಟನೆ

Date:

ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ಸಾರಿಗೆ ಇಲಾಖೆಯ ಎಲ್ಲ ಬಸ್‌ಗಳ ನಿಲುಗಡೆಗೆ ಮಾಡುವಂತೆ ಗ್ರಾಮಸ್ಥರು ರಸ್ತೆ ತಡೆ ನಡೆಸಿದರು.

ಗ್ರಾಮದ ಬಸ್ ನಿಲ್ದಾಣದ ಮುಂಭಾಗದ ರಸ್ತೆ ಮೇಲೆ ಧರಣಿ ಕುಳಿತ ಗ್ರಾಮಸ್ಥರು ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿದರು. ಸುಮಾರು ಒಂದು ಗಂಟೆಯವರೆಗೆ ಪ್ರತಿಭಟನೆ ನಡೆಯಿತು. ಇದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾದ ಪರಿಣಾಮ ದೂರದ ಊರುಗಳಿಗೆ ತೆರಳುವ ಪ್ರಯಾಣಿಕರು ಕೆಲಕಾಲ ಪರದಾಡಿದರು.

“ಸಾರಿಗೆ ಇಲಾಖೆಯ ವೇಗಧೂತ ಬಸ್‌ಗಳು ನಿಲುಗಡೆ ಮಾಡದಿರುವುದರಿದ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ, ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗುತ್ತಿದೆ. ಕೂಡಲೇ ಜವಳಗೇರಾ ಗ್ರಾಮದಲ್ಲಿ ವೇಗದೂತ ಬಸ್‌ ಸೇರಿದಂತೆ ಎಲ್ಲ ಬಸ್‌ಗಳ ನಿಲುಗಡೆಗೆ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಐಪಿಎಲ್ ಬೆಟ್ಟಿಂಗ್ | ಸಾಲಕ್ಕೆ ತುತ್ತಾಗಿ ರಾಯಚೂರಿನ ಯುವಕ ಆತ್ಮಹತ್ಯೆ

ಪ್ರತಿಭಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರ ಮನವೋಲಿಸಿ ರಸ್ತೆ ತಡೆ ತೆರವುಗೊಳಿಸಿದರು. ಪ್ರತಿಭಟನೆಯಲ್ಲಿ ಜವಳಗೇರಾ ಗ್ರಾಮಸ್ಥರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ; ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನ

ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ...

2028ರೊಳಗೆ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯಲ್ಲಿ ರಾಮನ ಹೆಸರಿದೆ. ಭೂಮಿ ಇರುವವರೆಗೂ ರಾಮನಗರ ಹೆಸರನ್ನು ತೆಗೆಯಲು...

ಹುಣಸೂರು | ಸೋರುತ್ತಿದೆ ಆರ್‌ಟಿಓ ಕಚೇರಿ ಮಾಳಿಗೆ; ಅಧಿಕಾರಿಗಳಿಗೇ ಇಲ್ಲ ಮೂಲ ಸೌಕರ್ಯ!

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಓ ಕಚೇರಿ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು,...

ಬೆಂಗಳೂರು | 2 ವರ್ಷಗಳ ಬಳಿಕ ಪೀಣ್ಯ ಫ್ಲೈಓವರ್‌ನಲ್ಲಿ ಭಾರೀ ವಾಹನ ಸಂಚಾರ ಅವಕಾಶ; ಷರತ್ತೂ ಅನ್ವಯ

ಬೆಂಗಳೂರಿನಿಂದ ಕರ್ನಾಟಕದ ಉತ್ತರ ಭಾಗಕ್ಕೆ ಸಂಪರ್ಕ ಒದಗಿರುವ ತುಮಕೂರು ರಸ್ತೆಯಲ್ಲಿರುವ ಪೀಣ್ಯ...