ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ, “ಪಂಚಮಸಾಲಿ ಸಮುದಾಯದ ಪ್ರಥಮ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಬಾಗಲಕೋಟೆ | ಪಂಚಮಸಾಲಿ ಸಮಾಜದ ಹಿಡಿತಕ್ಕೆ ಎರಡು ಗುಂಪುಗಳ ನಡುವೆ ಸಂಘರ್ಷ
ಲಿಂಗಾಯತ ಧರ್ಮ ವಿರೋಧಿ ಹೇಳಿಕೆ ನೀಡಿದ, ಅಕ್ರಮ ಆಸ್ತಿ ಗಳಿಕೆ ಮಾಡಿದ ಆರೋಪ ಇರುವ ಕಾರಣದಿಂದಾಗಿ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಅಸೂಟಿ ಹೇಳಿದ್ದಾರೆ.
ಭಾನುವಾರ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಸಭೆ ನಡೆದಿದ್ದು ಈ ಸಭೆಯಲ್ಲಿ ಸ್ವಾಮೀಜಿಯನ್ನು ಉಚ್ಛಾಟಿಸುವ ನಿರ್ಣಯ ತೆಗೆದುಕೊಳ್ಳಲಾಗಿದೆ.
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ವಿಜಯಾನಂದ ಕಾಶಪ್ಪನವರ, “ಸ್ವಾಮೀಜಿ ವೈಯಕ್ತಿಕವಾಗಿ ಯಾವುದೇ ಆಸ್ತಿ ಮಾಡಿಕೊಳ್ಳಬಾರದು. ಆದರೆ ಜಯಮೃತ್ಯುಂಜಯ ಸ್ವಾಮೀಜಿ ಅವರು ಹುಬ್ಬಳ್ಳಿ, ಬೆಳಗಾವಿ, ಬೆಂಗಳೂರಿನಲ್ಲಿ ಮನೆ ಮಾಡಿಕೊಂಡಿದ್ದಾರೆ” ಎಂದು ಹೇಳಿದರು.
