ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಅವರ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ರೈತರ ಜಮೀನುಗಳಿಗೆ ತೆರಳಿ ಬರ ಅಧ್ಯಯನ ನಡೆಸಿದ್ದಾರೆ.
ಸೇಡಂ ತಾಲೂಕಿನ ಕೊಡ್ಲಾ, ಸೇಡಂ, ಮೊತಕಪಲ್ಲಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ್ದ ಜೆಡಿಎಸ್ ಮುಖಂಡರು ಮಳೆ ಕೊರತೆಯಿಂದ ಹಾಳಾದ ತೊಗರಿ ಸೇರಿದಂತೆ ವಿವಿಧ ಬೆಳೆಗಳನ್ನು ವೀಕ್ಷಿಸಿ, ರೈತರೊಂದಿಗೆ ಚರ್ಚಿಸಿದ್ದಾರೆ.
ಬೆಳೆ ವೀಕ್ಷಣೆ ನಡೆಸಿ ಮಾತನಾಡಿದ ಬಾಲರಾಜ್ ಗುತ್ತೇದಾರ, “ಮಳೆಯ ಕೊರತೆಯಿಂದಾಗಿ ಬಹುತೇಕ ರೈತರು ಬೆಳೆ ಕಳೆದುಕೊಂಡಿದ್ದಾರೆ. ಬಿತ್ತನೆ ಮಾಡಿದ ಬೆಳೆ ಚನ್ನಾಗಿ ಮೊಳಕೆ ಬಂದಿದೆಯಾದರು ಸರಿಯಾದ ಸಮಯಕ್ಕೆ ಮಳೆ ಬಾರದ ಕಾರಣ ಫಲಕ್ಕೆ ಬರಬೇಕಾದ ಬೆಳೆ ಕೈಕೊಟ್ಟಿದೆ” ಎಂದು ಬೇಸರ ವ್ಯಕ್ತಪಡಿಸಿದರು.
ನಾನು ಈಗಾಗಲೇ ಸೇಡಂ ಮತಕ್ಷೇತ್ರದ ರೈತರೊಂದಿಗೆ ಚರ್ಚಿಸಿದೆನೆ . ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಬಹುತೇಕ ರೈತರು ದುಃಖ ವ್ಯಕ್ತಪಡಿಸಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಬೆಳೆ ವಿಮೆ ಕೂಡ ಸರಿಯಾಗಿ ತಲುಪುತ್ತಿಲ್ಲ. ಎಲ್ಲಾ ರೀತಿಯಿಂದಲೂ ರೈತರು ಸಂಕಷ್ಟದಲ್ಲಿದ್ದೇವೆ. ಸರ್ಕಾರದ ನೆರವು ಅಗತ್ಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಬಾಲರಾಜ್ ಗುತ್ತೇದಾರ ಹೇಳಿದರು.
ರೈತರೊಂದಿಗೆ ಸಂವಾದ ನಡೆಸಿ ಬರ ಅಧ್ಯಯನದ ವೇಳೆಯಲ್ಲಿ ವಿವಿಧೆಡೆ ರೈತರ ಹೊಲಗಳಿಗೆ ತೆರಳಿ ರೈತರೊಂದಿಗೆ ಸಂವಾದ ನಡೆಸಿದರು. ರೈತರು ಎದುರಿಸುತ್ತಿರುವ ಸಮಸ್ಯೆಗಳು, ಅವರ ಬೆಳೆಗಳ ಸ್ಥಿತಿಗತಿಯ ಬಗ್ಗೆ ರೈತರಿಂದಲೇ ಮಾಹಿತಿ ಪಡೆದಿದ್ದಾರೆ.