ಚಿಕ್ಕಮಗಳೂರು | ಕಾಂಗ್ರೆಸ್‌ಗೆ ಮತ ಹಾಕಿ ಎಂದ ಜೆಡಿಎಸ್‌ ಬೋಜೆಗೌಡ; ವಿಡಿಯೋ ವೈರಲ್‌

Date:

  • ಜೆಡಿಎಸ್‌ಗೆ ಮುಜುಗರ ತರಿಸಿದ ಎಂಎಲ್‌ಸಿ ಬೋಜೆಗೌಡ ಹೇಳಿಕೆ
  • ಜೆಡಿಎಸ್‌ ತೊರೆದು ಕಾಂಗ್ರೇಸ್ ಸೇರಿದ್ದ ಬಿ ಎಚ್ ಹರೀಶ್

ಕರ್ನಾಟಕ ವಿಧಾನಸಭಾ ಚುನಾವಣೆ ಕಾವು ಏರುತ್ತಿರುವ ಸಂದರ್ಭದಲ್ಲಿ ಚಿಕ್ಕಮಗಳೂರಿನಲ್ಲಿ ಜೆಡಿಎಸ್‌ ಮುಖಂಡ, ವಿಧಾನಪರಿಷತ್ ಸದಸ್ಯ ಎಸ್ ಎಲ್ ಬೋಜೆಗೌಡ ತಮ್ಮ ಬೆಂಬಲಿಗರೊಂದಿಗೆ ಮಾತನಾಡಿರುವ ವಿಡಿಯೋ ವೈರಲ್ ಆಗಿದ್ದು, ಜೆಡಿಎಸ್‌ ನಾಯಕರನ್ನು ಪೇಚಿಗೆ ಸಿಲುಕಿಸಿದೆ.

ಎಸ್ ಎಲ್ ಬೋಜೆಗೌಡ ಚಿಕ್ಕಮಗಳೂರಿನ ತಮ್ಮ ನಿವಾಸದಲ್ಲಿ ಒಂದಷ್ಟು ಮಂದಿ ಕಾರ್ಯಕರ್ತರನ್ನು ಸುತ್ತಲೂ ಸೇರಿಸಿಕೊಂಡು ಮಾತನಾಡಿರುವ ವಿಡಿಯೋ ವೈರಲ್‌ ಆಗಿದೆ. ಆ ವಿಡಿಯೋದಲ್ಲಿ ಬೋಜೆಗೌಡ ತಮ್ಮ ಎದುರಿಗಿದ್ದವರೊಂದಿಗೆ ಮಾತನಾಡುತ್ತಾ. “ಈ ಬಾರಿ ನೀವೆಲ್ಲಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್ ಡಿ ತಮ್ಮಯ್ಯ ಅವರಿಗೆ ಬೆಂಬಲ ನೀಡಬೇಕು” ಎಂದು ಹೇಳುತ್ತಿದ್ದಾರೆ.

ಇದಕ್ಕೆ ಕೆಲ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದಾಗ ಬೋಜೆಗೌಡ ಅದೆಲ್ಲಾ ಗೊತ್ತಿಲ್ಲ ಈ ಸರ್ತಿ ನೀವೆಲ್ಲಾ ಸೇರಿ ಕಾಂಗ್ರೆಸ್‌ಗೆ ಓಟ್ ಹಾಕಬೇಕು. ಕಾಂಗ್ರೆಸ್ ಗೆಲ್ಸಿ ಬಾಕಿದು ಆಮೇಲೆ ನೋಡ್ಕೊಳ್ಳೋಣ ಎಂದು ನೇರವಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಾತನಾಡಿದ್ದಾರೆ.

ವಿಶೇಷ ಎಂದರೆ ಈ ಸಂದರ್ಭದಲ್ಲಿ ಕಳೆದ ಚುನಾವಣೆಯಲ್ಲಿ ಚಿಕ್ಕಮಗಳೂರು ಜೆಡಿಎಸ್‌ ಅಭ್ಯರ್ಥಿಯಾಗಿದ್ದ ನಂತರ ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರಿ ಈ ಬಾರಿ ಕಾಂಗ್ರೆಸ್ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿ ಎಚ್ ಹರೀಶ್ ಅವರು ಬೋಜೆಗೌಡ ಪಕ್ಕದಲ್ಲಿಯೇ ಕುಳಿತಿರುವುದು ವಿಡಿಯೋದಲ್ಲಿ ರೆಕಾರ್ಡ್ ಆಗಿದೆ.

ಚಿಕ್ಕಮಗಳೂರಿನಲ್ಲಿ ತಿಮ್ಮಾಶೆಟ್ಟಿ ಜೆಡಿಎಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದು, ಕಳೆದ ಎರಡು ವರ್ಷಗಳಿಂದ ಕ್ಷೇತ್ರದಲ್ಲಿ ಜೆಡಿಎಸ್ ಸಂಘಟನೆಗೆ ಸಾಕಷ್ಟು ಶ್ರಮ ವಹಿಸುತ್ತಿದ್ದಾರೆ. ಅವರನ್ನು ಕ್ಷೇತ್ರದಲ್ಲಿ ಅಭ್ಯರ್ಥಿಯನ್ನಾಗಿಸಲು ಬೋಜೆಗೌಡ ಪ್ರಮುಖ ಕಾರಣಕರ್ತರು ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ ಚಿಂಚನಸೂರ ಆರೋಗ್ಯದಲ್ಲಿ ಚೇತರಿಕೆ

ಇದೀಗ ಬೋಜೆಗೌಡ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಬೆಂಬಲಿಗರಿಗೆ ಹೇಳುತ್ತಿರುವುದು ಗಮನಿಸಿದರೆ ಕ್ಷೇತ್ರದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಒಳ ಒಪ್ಪಂದವೇನಾದರೂ ನಡೆದಿದೆಯಾ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ಎಚ್ ಡಿ ಕುಮಾರಸ್ವಾಮಿ ಅವರು ಬಲಗೈ ಬಂಟನಂತೆ ಸದಾ ಅವರ ಜೊತೆಗಿರುವ ಎಸ್ ಎಲ್ ಬೋಜೆಗೌಡರ ಈ ಮಾತುಗಳು ರಾಜ್ಯಮಟ್ಟದಲ್ಲಿಯೂ ಜೆಡಿಎಸ್ ವರಿಷ್ಠರಿಗೆ ಮುಜುಗರಕ್ಕೀಡಾಗುವಂತೆ ಮಾಡಿದೆ. ಮಾತ್ರವಲ್ಲ ಕ್ಷೇತ್ರದಲ್ಲಿ ಮತ್ತು ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರನ್ನು ಗೊಂದಲಕ್ಕೆ ಸಿಲುಕಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೀತಾಫಲ ಹಣ್ಣಿಗೆ ಭಾರೀ ಬೇಡಿಕೆ; ಬೇಕಿದೆ ಮಾರುಕಟ್ಟೆ ಸೌಲಭ್ಯ

ಸೀತಾಫಲ ಹಣ್ಣು ತಿನ್ನಲು ತುಂಬಾ ರುಚಿಕರ ಹಾಗೂ ಅಷ್ಟೇ ಸ್ವಾದಿಷ್ಟ, ರೋಗ...

ಕಾವೇರಿ ವಿವಾದ | ತಮಿಳು ನಟ ಸಿದ್ಧಾರ್ಥ್‌ ಕ್ಷಮೆ ಕೇಳಿದ ನಟ ಶಿವರಾಜ್‌ಕುಮಾರ್

ತಮಿಳು ನಟ ಸಿದ್ಧಾರ್ಥ್‌ ಅವರ ಸುದ್ದಿಗೋಷ್ಠಿಗೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ...

ಕರ್ನಾಟಕ ಬಂದ್ | ದಾವಣಗೆರೆ: ತಮಿಳುನಾಡಿ ನೀರು ಹರಿಸದಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ರಾಜ್ಯ ಸರ್ಕಾರ ಮತ್ತು ಕಾವೇರಿ ನಿರ್ವಹಣಾ...

ಹಾವೇರಿ | ಕಾವೇರಿ ನೀರು ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸಲಿ

ರಾಜ್ಯ ಸರ್ಕಾರ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯ ವಿವಿಧ ಸಂಘಟನೆಗಳ...