ಹಾಸನದಲ್ಲಿ ಜೆಡಿಎಸ್‌ ರೋಡ್‌ ಶೋ; ಸ್ವರೂಪ್‌ ಗೆಲ್ಲಿಸುವಂತೆ ಮನವಿ ಮಾಡಿದ ಭವಾನಿ ರೇವಣ್ಣ

Date:

ಹಾಸನದಲ್ಲಿ ಸ್ವರೂಪ್‌ ಗೆಲ್ಲಬೇಕು. ಚುನಾವಣೆ ಮುಖಾಂತರ ಬಿಜೆಪಿ ಶಾಸಕ ಪ್ರೀತಂ ಗೌಡರಿಗೆ ಸರಿಯಾದ ಪಾಠ ಕಲಿಸಬೇಕು ಎಂದು ಹಾಸನ ಕ್ಷೇತ್ರದ ಮತದಾರರಲ್ಲಿ ಭವಾನಿ ರೇವಣ್ಣ ಮನವಿ ಮಾಡಿದ್ದಾರೆ.

- Advertisement -

ಹಾಸನದಲ್ಲಿ ನಡೆದ ಜೆಡಿಎಸ್‌ ರೋಡ್‌ ಶೋನಲ್ಲಿ ಮಾತನಾಡಿದ ಅವರು, “ಸ್ವರೂಪ್‌ನನ್ನು ಗೆಲ್ಲಿಸಿ ಕೊಡುವ ಮೂಲಕ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಹುಟ್ಟು ಹಬ್ಬಕ್ಕೆ ಗಿಫ್ಟ್ ನೀಡಿ” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ನಮ್ಮ ಮೇಲಿನ ಪ್ರೀತಿಗೆ ಬೆಳಿಗ್ಗೆಯಿಂದ ಸಾವಿರಾರು ಜನ ಸೇರಿದ್ದೀರಿ. ರೇವಣ್ಣ ಅವರು ಹಾಸನದಲ್ಲಿ ಮೂರು ತಲೆಮಾರಿಗಾಗುವಷ್ಟು ಅಭಿವೃದ್ಧಿ ಮಾಡಿದ್ದಾರೆ. ಆದರೆ, ಬಿಜೆಪಿ ಶಾಸಕರು ಗಾಳಿಮಳೆಗೆ ಬಿದ್ದು ಹೋಗೋ ಶೆಡ್ ನಿರ್ಮಾಣ ಮಾಡಿದ್ದಾರೆ. ಇದು ಪ್ರೀತಂಗೌಡ ಅವರ ಅಭಿವೃದ್ಧಿನಾ?” ಎಂದು ವ್ಯಂಗ್ಯವಾಡಿದ್ದಾರೆ.

“ದೇವೇಗೌಡರ ಸೂಚನೆಯಂತೆ ನಾವು ಪ್ರಚಾರ ನಡೆಸುತ್ತಿದ್ದೇವೆ. ಕುಮಾರಣ್ಣ ಸೂಚಿಸಿದ ಅಭ್ಯರ್ಥಿಗೆ ನಾವು ಕೆಲಸ ಮಾಡಬೇಕು. ಹೆಣ್ಣು ಮಕ್ಕಳಪರ ಹಾಸನ ಶಾಸಕರು ಎಷ್ಟು ಕೆಟ್ಟದಾಗಿ ಮಾತನಾಡಿದ್ದಾರೆ ಎಂಬುದನ್ನು ನೀವೆ ನೋಡಿದ್ದೀರಿ. ನಮ್ಮ ರಾಲಿಯಲ್ಲಿ ಜನರನ್ನ ನೋಡಿ ಹೆದರಿ ಇಂದು ಹೊಳೆನರಸೀಪುರಕ್ಕೆ ಹೋಗುವ ಮಾತಾಡಿದ್ದಾರೆ” ಎಂದು ಟೀಕಿಸಿದ್ದಾರೆ.

“ಮುಂದೆ ಬಿಜೆಪಿಯನ್ನ ಸೋಲಿಸಿ, ವಿಧಾನಸೌಧದಲ್ಲಿ ಕುಮಾರಣ್ಣನ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು. ಕುಮಾರಣ್ಣನ ಮಡಿಲಿಗೆ ಅಧಿಕಾರ ಹಾಕೋಣ” ಎಂದು ಕರೆ ನೀಡಿದ್ದಾರೆ.

“ಹಾಸನದಿಂದಲೂ ಸ್ವರೂಪ್‌ರನ್ನ ನಾವು ಗೆಲ್ಲಿಸುತ್ತೇವೆ. ನಮ್ಮ ಕಾರ್ಯಕರ್ತರು ಇನ್ನು ಹದಿನೈದು ದಿನ ಹೋರಾಡಬೇಕು. ನಿದ್ರೆ ಮಾಡದ ರೀತಿ ಕೆಲಸ ಮಾಡಿ. ಸ್ವರೂಪ್‌ರನ್ನ ಗೆಲ್ಲಿಸಿ ಕೊಡಿ” ಎಂದು ಮನವಿ ಮಾಡಿದ್ದಾರೆ.

ಜೆಡಿಎಸ್‌ ಜನಸ್ತೋಮ

ಜೆಡಿಎಸ್ ರಾಲಿಯಲ್ಲಿ ಅಧಿಕ ಜನಸ್ತೋಮ ಹರಿದು ಬಂದಿತ್ತು. ಆರಂಭದಲ್ಲಿ ಬಿಸಿಲು, ನಂತರದಲ್ಲಿ ಮಳೆ ಶುರುವಾದರೂ ಸಹಸ್ರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಜನರು, ಯಕಶ್ಚಿತ್ ಕದಲದೆ ತಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹೊಳೆನರಸೀಪುರ | ರೇವಣ್ಣ ವಿರುದ್ಧ ಸ್ಪರ್ಧಿಸುತ್ತೇನೆಂದು, ನಾಮಪತ್ರವನ್ನೇ ಸಲ್ಲಿಸದ ಪ್ರೀತಂ ಗೌಡ

ಇಡೀ ರಾಜ್ಯವನ್ನೇ ಕುತೂಹಲಕ್ಕೆ ಎಡೆ ಮಾಡಿ ಕೊಟ್ಟಿದ್ದ ಹಾಸನಾ ವಿಧಾನಸಭಾ ಕ್ಷೇತ್ರದಲ್ಲಿ ಸ್ವರೂಪ್‌ಗೆ ಟಿಕೆಟ್‌ ಕೊಡುವುದರ ಮೂಲಕ ಭವಾನಿ ಮತ್ತು ರೇವಣ್ಣ ಅವರಿಗೆ ತೀವ್ರ ಮುಖಭಂಗವಾಗಿತ್ತು. ಟಿಕೆಟ್‌ ಕೈ ತಪ್ಪಿದರೂ ಕೂಡ ʼಸ್ವರೂಪ್‌ ಹಾಸನದಲ್ಲಿ ಜೆಡಿಎಸ್‌ ಕೋಟೆ ಭದ್ರಪಡಿಸುವುದಕ್ಕಾಗಿ ಭವಾನಿ ರೇವಣ್ಣ ಸ್ಟಾರ್‌ ಪ್ರಚಾರಕರಾಗಿ ನಿಂತಿದ್ದಾರೆ.

ಜೆಡಿಎಸ್‌ ಭರ್ಜರಿ ರೋಡ್ ಶೋನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎ.ಮಂಜು, ಸಂಸದ ಪ್ರಜ್ವಲ್ ರೇವಣ್ಣ, ಎಂಎಲ್‌ಸಿ ಡಾ.ಸೂರಜ್ ರೇವಣ್ಣ, ಭವಾನಿ ರೇವಣ್ಣ ಹಾಗೂ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ.ಸ್ವರೂಪ್ ಪ್ರಕಾಶ್‌ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...