ರಾಜ್ಯದ ಖಾಸಗಿ ಶಾಲೆ-ಕಾಲೇಜುಗಳ ದಂಧೆ ಕಡಿವಾಣಕ್ಕೆ ಆಗ್ರಹ

Date:

ರಾಜ್ಯಾದ್ಯಂತ ಬಹುತೇಕ ಖಾಸಗಿ ಶಾಲಾ-ಕಾಲೇಜುಗಳಲ್ಲಿ ದಂಧೆ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಂಡು ತಪ್ಪಿತಸ್ಥರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಟಿ.ಅಸ್ಕರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.

- Advertisement -

“ಶಾಲಾ- ಕಾಲೇಜುಗಳಲ್ಲಿ ನೋಟ್‌ಬುಕ್, ಪೆನ್, ಪೆನ್ಸಿಲ್ ಸೇರಿದಂತೆ ಇತರೆ ಲೇಖನಿ ಸಾಮಗ್ರಿ ಹಾಗೂ ಶಾಲಾ ಸಮವಸ್ತ್ರ ಶೂಗಳನ್ನು ತಮ್ಮ ಶಾಲೆಯಲ್ಲಿಯೇ ಮಾರಾಟ ಮಾಡುತ್ತಿದ್ದಾರೆ. ಈ ನಡೆ ನಿಯಮ ಬಾಹಿರವಾಗಿದ್ದರೂ ಇತ್ತೀಚಿನ ವರ್ಷಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ. ಖಾಸಗಿ ಶಾಲೆ ದಂಧೆ ನಿಯಂತ್ರಿಸುವ ನಿಟ್ಟಿನಲ್ಲಿ ಅಧಿಕಾರಿಗಳೂ ಅಗತ್ಯ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

“ಖಾಸಗಿ ಶಾಲೆಗಳು ವ್ಯಾಪಾರಸ್ಥರೊಂದಿಗೆ ಒಪ್ಪಂದ ಮಾಡಿಕೊಂಡು, ಪೋಷಕರಿಗೆ ಒತ್ತಡ ಹೇರಿ ಪ್ರವೇಶಾತಿ ಸಂದರ್ಭದಲ್ಲೇ ಲೇಖನಿ ಸಾಮಗ್ರಿ ಒದಗಿಸುವುದನ್ನು ರೂಢಿಸಿಕೊಂಡಿವೆ. ನೋಟ್ ಪುಸ್ತಕ, ಬೈಂಡ್ ಕಾಗದ, ಬಣ್ಣದ ಪೆನ್ಸಿಲ್, ನಕ್ಷೆ ಮೊದಲಾದವುಗಳನ್ನು ನೀಡುತ್ತಾರೆ. ಹಣ ಪಾವತಿಸಿ ಶಾಲೆಯಲ್ಲೇ ಅವುಗಳನ್ನು ಖರೀದಿಸುವಂತೆ ಪೋಷಕರ ಮೇಲೆ ಒತ್ತಡ ಹೇರಲಾಗುತ್ತಿದೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಕೆಆರ್ ಆಸ್ಪತ್ರೆ ವಿರುದ್ಧ ಸುಮೊಟೊ ಪ್ರಕರಣ

ಮಾರುಕಟ್ಟೆಗಿಂತ ಹೆಚ್ಚಿನ ದರಗಳಲ್ಲಿ ಇವುಗಳನ್ನು ಮಾರಾಟ ಮಾಡಲಾಗುತ್ತಿದ್ದು, ಬಡ ಪೋಷಕರ ಜೇಬಿಗೆ ಹೊರೆಯಾಗಿದೆ. ಆದ್ದರಿಂದ ಖಾಸಗಿ ಶಾಲಾ ಕಾಲೇಜುಗಳಲ್ಲಿ ನಡೆಯುವ ಈ ಅಕ್ರಮ ದಂಧೆಯನ್ನು ಕೂಡಲೇ ನಿಲ್ಲಿಸಬೇಕು ಹಾಗೂ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮನವಿ ಸ್ವೀಕರಿಸಿದ್ದು, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಜಬೀವುಲ್ಲಾ, ಮುತ್ತೂಭಾಯಿ, ಉಸ್ಮಾನ್ ಗನ್ನಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...

ಬಾಗಲಕೋಟೆ | ಪ್ರಜಾಪ್ರಭುತ್ವದ ಕರಾಳ ದಿನ: ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ಸಂಕಲ್ಪದೊಂದಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ...