ಕಾರವಾರ-ಅಂಕೋಲಾ ಕ್ಷೇತ್ರ ಜೆಡಿಎಸ್ ಪಾಲಾಗದು: ಮೈತ್ರಿ ವದಂತಿಗಳಿಗೆ ಬಿಜೆಪಿ ವಕ್ತಾರ ಮೊಗಟಾ ತಿರುಗೇಟು

Date:

ಮುಂಬರುವ ಚುನಾವಣಾ ಮೈತ್ರಿಯ ನಡುವೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಜನತಾದಳ (ಸೆಕ್ಯುಲರ್) ಪಕ್ಷಕ್ಕೆ ಸೀಟು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ವಕ್ತಾರ ಜಗದೀಶ್ ಮೊಗಟಾ ಅವರು ನೇರ ಎಚ್ಚರಿಕೆ ನೀಡಿದ್ದಾರೆ.

- Advertisement -

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈತ್ರಿ ಹಿನ್ನೆಲೆಯಲ್ಲಿ ಈ ಬಾರಿ ಕಾರವಾರ ಕ್ಷೇತ್ರ ಜೆಡಿಎಸ್ ಪಾಲಾಗಲಿದೆ ಎಂಬ ವದಂತಿಗಳನ್ನು ಕಡಾಖಂಡಿತವಾಗಿ ತಳ್ಳಿಹಾಕಿದರು.“ಈ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಟಿಕೆಟ್ ನೀಡುವುದಿಲ್ಲ; ಬೇಕಿದ್ದರೆ ಇದನ್ನು ಬರೆದಿಟ್ಟುಕೊಳ್ಳಿ,” ಎಂದು ಅವರು ಸವಾಲು ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಳೆದ ಚುನಾವಣೆಯಲ್ಲಿ ಜೆಡಿಎಸ್‌ಗೆ ಸರಿಯಾದ ಅಭ್ಯರ್ಥಿಯೇ ಇರಲಿಲ್ಲ; ಅಂತಹ ಪರಿಸ್ಥಿತಿಯಲ್ಲಿ ಈ ಬಾರಿ ಅವರಿಗೆ ಸೀಟು ಬಿಟ್ಟುಕೊಡಲು ಸಾಧ್ಯವೇ ಇಲ್ಲ ಎಂದು ಅವರು ಹೇಳಿದರು.

ಇದೇ ವೇಳೆ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರ ಹೆಸರನ್ನು ಉಲ್ಲೇಖಿಸಿ ತೀವ್ರ ವಾಗ್ದಾಳಿ ನಡೆಸಿದ ಮೊಗಟಾ, “ಹಿಂದಿನ ಚುನಾವಣೆಯಲ್ಲಿ ಜೆಡಿಎಸ್ ಹೆಸರಿನಲ್ಲಿದ್ದ ಅಸ್ನೋಟಿಕರ್ ಎಲ್ಲಿದ್ದರು? ಅವರು ಕಾಂಗ್ರೆಸ್‌ಗೆ ಪರೋಕ್ಷವಾಗಿ ಬೆಂಬಲ ನೀಡಿದವರಲ್ಲವೇ? ಅಲೆಮಾರಿ ಜನಾಂಗದಂತೆ ವರ್ತಿಸಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡವರಿಗೆ ಈ ಕ್ಷೇತ್ರದಲ್ಲಿ ಅವಕಾಶ ನೀಡುವ ಪ್ರಶ್ನೆಯೇ ಇಲ್ಲ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಟಿಬೆಟಿಯನ್ ಕ್ಯಾಂಪ್‌ಗಳಲ್ಲಿ ಹೊಸ ವರ್ಷ ‘ಲೋಸಾರ್’ ಆಚರಣೆ ಆರಂಭ

ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಬಿಜೆಪಿ ಮುಖಂಡ ಸುನಿಲ್ ಹೆಗಡೆ ಮಾತನಾಡಿ, ಸೀಟು ಹಂಚಿಕೆ ಕುರಿತ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲು ಉನ್ನತ ಮಟ್ಟದ ಸಮಿತಿ ಇದೆ ಎಂದು ಹೇಳಿದರು.

ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ದೇವೇಗೌಡರು ಹಾಗೂ ಬಿಜೆಪಿಯ ಹಿರಿಯ ನಾಯಕರು ಒಳಗೊಂಡ ಸಮನ್ವಯ ಸಮಿತಿಯೇ ಜಿಲ್ಲೆಯ ಸೀಟುಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಕುಮಾರಸ್ವಾಮಿಯವರು ಜವಾಬ್ದಾರಿಯುತ ನಾಯಕರು ಅವರು ಎಲ್ಲಾ ಮಗ್ಗಲುಗಳಿಂದ ಯೋಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ, ಎಂದು ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಮುಖಂಡರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...