ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ನಗರಸಭೆ ಜೆಡಿಎಸ್ ಪಾಲು

Date:

Advertisements

ಭಾರೀ ರಾಜಕೀಯ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ನಗರಸಭಾ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್ ಮೇಲುಗೈ ಸಾಧಿಸಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಕಾರಣವಾಗಿದ್ದ ಮಂಡ್ಯ ನಗರಸಭಾ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಆ. 28(ಇಂದು) ಚುನಾವಣೆ ನಡೆದಿದ್ದು, ಎರಡೂ ಸ್ಥಾನಗಳು ಜೆಡಿಎಸ್‌ಗೆ ಪಾಲಾಗಿದೆ.

ಕಾಂಗ್ರೆಸ್‌ನ ಚಲುವರಾಯಸ್ವಾಮಿ ಹಾಗೂ ಜೆಡಿಎಸ್‌ನ ನಾಯಕ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌ನ ನಾಗೇಶ್ ಆಯ್ಕೆಯಾದರೆ, ಉಪಾಧ್ಕಕ್ಷರಾಗಿ ಅರುಣ್ ಕುಮಾರ್ ಅವರು ಆಯ್ಕೆಯಾಗಿದ್ದಾರೆ.

ಚುನಾವಣೆಗೆ ಮುನ್ನ ಆಪರೇಷನ್ ಹಸ್ತ ಮಾಡಿದ್ದ ಕಾಂಗ್ರೆಸ್ ಮುಖಂಡರು, ಜೆಡಿಎಸ್‌ನ ಎರಡು ಸದಸ್ಯರನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡಿದ್ದರು. ಇದಕ್ಕೆ ಪ್ರತಿತಂತ್ರ ರೂಪಿಸಿದ ಕುಮಾರಸ್ವಾಮಿ, ‘ರಿವರ್ಸ್ ಆಪರೇಷನ್’ ಮಾಡಿ ಕಾಂಗ್ರೆಸ್ಸಿನ ಒಬ್ಬ ಪ್ರಭಾವಿ ನಾಯಕರನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡಿದ್ದಲ್ಲದೇ, ಮಂಡ್ಯ ನಗರಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisements

ಮಂಡ್ಯ ನಗರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ನಗರಸಭೆಯಲ್ಲಿ ಜೆಡಿಎಸ್ ನ 18 ಶಾಸಕರಿದ್ದರೆ, ಕಾಂಗ್ರೆಸ್‌ನಿಂದ 10, ಪಕ್ಷೇತರರು 5 ಹಾಗೂ ಬಿಜೆಪಿಯಿಂದ 5 ಸದಸ್ಯರು ಸೇರಿ ಒಟ್ಟು 35 ಸದಸ್ಯರಿದ್ದಾರೆ. ಇವರಲ್ಲಿ ಕಾಂಗ್ರೆಸ್ಸಿನಿಂದ ನಗರಸಭೆಯ ಮಾಜಿ ಅಧ್ಯಕ್ಷರಾದ ಎಚ್.ಎಸ್. ಮಂಜು ಅವರು ಮತ್ತೊಮ್ಮೆ ಅಧ್ಯಕ್ಷ ಸ್ಥಾನವನ್ನು ಬಯಸಿ ಚುನಾವಣೆಗೆ ನಿಂತಿದ್ದರು. ಇದೇ ಸ್ಥಾನಕ್ಕೆ ಜೆಡಿಎಸ್‌ನಿಂದ ನಾಗೇಶ್ ಅವರು ನಾಮಪತ್ರ ಸಲ್ಲಿಸಿದ್ದರು. ಇನ್ನು, ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌ನಿಂದ ಅರುಣ್ ಕುಮಾರ್ ಹಾಗೂ ಕಾಂಗ್ರೆಸ್ಸಿನಿಂದ ಝಾಕಿರ್ ಅವರು ನಾಮಪತ್ರ ಸಲ್ಲಿಸಿದ್ದರು.

ಜೆಡಿಎಸ್ 5

ಒಟ್ಟು ಮೂವತ್ತೈದು ಸದಸ್ಯರ ಮತಗಳು ಸೇರಿ, ಸಂಸದ ಕುಮಾರಸ್ವಾಮಿ ಅವರ ಒಂದು ಮತ ಹಾಗೂ ಮಂಡ್ಯ ನಗರ ಶಾಸಕ ಪಿ.ರವಿಕುಮಾರ್ ಅವರ ಒಂದು ಮತ ಸೇರಿ ಒಟ್ಟು 37 ಮತಗಳು ಚಲಾವಣೆಯಾದವು. ಅದರಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ತಲಾ 19 ಮತಗಳು ಬಂದಿವೆ.

ಇದನ್ನು ಓದಿದ್ದೀರಾ? ಕಾರ್ಕಳ ಯುವತಿಯ ಅತ್ಯಾಚಾರ | 3ನೇ ಆರೋಪಿ ಬಿಜೆಪಿ ಕಾರ್ಯಕರ್ತ : ಕಾಂಗ್ರೆಸ್‌ನಿಂದ ಫೋಟೋ ಬಿಡುಗಡೆ

ಮತದಾನಕ್ಕೆ ಇನ್ನು ಕೆಲವೇ ದಿನಗಳು ಇರುವಾಗ, ಜೆಡಿಎಸ್ ನ ಮೂವರು ನಾಯಕರನ್ನು ತಮ್ಮ ತೆಕ್ಕೆಗೆ ಹಾಕಿಕೊಂಡಿದ್ದ ಕಾಂಗ್ರೆಸ್, ಆ ಮೂವರು ಮತದಾನದ ದಿನದಂದು ತಟಸ್ಥವಾಗುವಂತೆ ಮಾಡಿತ್ತು. ಅದಕ್ಕೆ ಪ್ರತಿಯಾಗಿ ತಂತ್ರ ಹೂಡಿದ ಜೆಡಿಎಸ್, ಕಾಂಗ್ರೆಸ್ಸಿನಲ್ಲಿ ತಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಹಿರಿಯ ನಾಯಕ ಟಿ.ಕೆ. ರಾಮಲಿಂಗು ಅವರನ್ನು ತಮ್ಮನ್ನ ಸೆಳೆಯುವ ಮೂಲಕ ಅಧ್ಯಕ್ಷ, ಉಪಾಧ್ಯಕ್ಷ ಗದ್ದುಗೆಯನ್ನು ಪಡೆಯಲು ಕಡೆಗೂ ಯಶಸ್ವಿಯಾಗಿದೆ.

ಮಂಡ್ಯ ನಗರಸಭೆ ಕಚೇರಿಯ ಆವರಣದಲ್ಲಿ ನೂಕು ನುಗ್ಗಲು

ಮತದಾನಕ್ಕೂ ಮುನ್ನ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಂಡ್ಯ ನಗರಸಭೆ ಕಚೇರಿಯ ಆವರಣದಲ್ಲಿ ನೂಕು ನುಗ್ಗಲು ನಡೆದ ಘಟನೆ ಕೂಡ ನಡೆಯಿತು. ಎರಡೂ ಬಣದವರು ಪ್ರತ್ಯೇಕ ವಾಹನಗಳಲ್ಲಿ ನಗರಸಭೆ ಆವರಣಕ್ಕೆ ಬಂದ ಸಂದರ್ಭ ತೀವ್ರ ನೂಕುನುಗ್ಗಲು ಉಂಟಾಯಿತು. ಕಾಂಗ್ರೆಸ್ ಸದಸ್ಯರ ವಾಹನವನ್ನು ಶಾಸಕ ರವಿಕುಮಾರ್ ಅವರ ನೇತೃತ್ವದಲ್ಲಿ ಆವರಣದೊಳಕ್ಕೆ ಕರೆತರಲಾಯಿತು.

ನಂತರ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಸರ್ಕಾರಿ ಕಾರಿನಲ್ಲಿ ಆಗಮಿಸಿದರು. ಅವರ ಹಿಂದೆಯೇ ಬರುತ್ತಿದ್ದ ಜೆಡಿಎಸ್ ಸದಸ್ಯರ ವಾಹನವನ್ನು ಗೇಟಿನ ಬಳಿ ತಡೆ ಹಿಡಿಯಲಾಯಿತು. ಇದರಿಂದ ಕೆಲಕಾಲ ಪೊಲೀಸರು ಮತ್ತು ಜೆಡಿಎಸ್ ಬೆಂಬಲಿಗರ ನಡುವೆ ವಾಗ್ವಾದ ಮತ್ತು ನೂಕುನುಗ್ಗಲು ಉಂಟಾಯಿತು. ಇದರಿಂದ ಬೇಸತ್ತ ಕುಮಾರಸ್ವಾಮಿ ಸ್ವತಃ ಗೇಟಿನ ಬಳಿ ತೆರಳಿ, ಸದಸ್ಯರ ವಾಹನವನ್ನು ಪೊಲೀಸರ ಭದ್ರತೆಯಲ್ಲಿ ಆವರಣದೊಳಕ್ಕೆ ಕರೆ ತಂದರು. ಈ ವೇಳೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X