ಉಡುಪಿ | ಪ್ರೀತಿ ತಿಳಿಸಲು ಯೇಸು ಹುಟ್ಟಿಬಂದರು: ಡಾ. ಜೆರಾಲ್ಡ್ ಐಸಾಕ್ ಲೋಬೊ

Date:

Advertisements

ಹಿಂಸೆಗೆ ಉತ್ತರವಾಗಿ ಪ್ರೀತಿಯನ್ನು ತಿಳಿಸಲು ಯೇಸು ಕ್ರಿಸ್ತರು ಧರೆಯಲ್ಲಿ ಹುಟ್ಟಿಬಂದರು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.

ಉಡುಪಿಯಲ್ಲಿ ಧರ್ಮಪ್ರಾಂತ್ಯದ ವತಿಯಿಂದ ಆಯೋಜಿಸಿದ್ದ ‘ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟ’ದಲ್ಲಿ ಅವರು ಮಾತನಾಡಿದರು. “ಇಡೀ ಮನುಕುಲ ಜಾತಿ ಮತಗ ಬೇಧವಿಲ್ಲದೆ ಆಚರಿಸುವ ಹಬ್ಬ ಕ್ರಿಸ್ತ ಜಯಂತಿ. ಇದರ ಕೇಂದ್ರ ವ್ಯಕ್ತಿ ಯೇಸು ಆಗಿದ್ದಾರೆ. ಯೇಸು ಅವರು ಈ ಜಗತ್ತಿಗೆ ನೀಡಿದ ಕಾಣಿಕೆ ಶಾಂತಿ ಸಮಾಧಾನ. ಆದರೆ ಇಂದು ಸಮಾಜದಲ್ಲಿ ಅಶಾಂತಿ, ಅಸಮಾನತೆ, ಅನ್ಯಾಯ, ಬಡತನ, ನಿರುದ್ಯೋಗ, ಹಿಂಸೆ ಶೋಷಣೆ, ರೋಗರುಜಿ, ದ್ವೇಷ ಯುದ್ದ, ಅತ್ಯಾಚಾರ, ಮತಾಂದತೆ, ಪರಮತ ಅಸಹಿಷ್ಣುತೆ ಇತ್ಯಾದಿಗಳನ್ನು ಕಾಣುತ್ತಿದ್ದು ಇವುಗಳನ್ನು ಗೆಲ್ಲಲು ಪ್ರೀತಿಯಿಂದ ಮಾತ್ರ ಸಾಧ್ಯ. ಶಾಂತಿ ಇದ್ದಲ್ಲಿ ಮಾತ್ರ ಭಾವೈಕ್ಯತೆ ಸಾಮರಸ್ಯ, ಸಹಬಾಳ್ವೆ, ಸಮಾಧಾನ ಸಾಧ್ಯ ಪ್ರತಿಯೋಬ್ಬರು ಶಾಂತಿಯ ದೂತರಾದಾಗ ಶಾಂತಿ ಪ್ರೀತಿಯ ಭಾರತವನ್ನು ಕಟ್ಟಲು ಸಾಧ್ಯ” ಎಂದರು.

ಕಾರ್ಯಕ್ರಮದಲ್ಲಿ ರಾಘವೇಂದ್ರ ನಾಯಕ್, ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಹೆಚ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಅಲೆವೂರು ಶುಭ ಹಾರೈಸಿದರು. 2023ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಪತ್ರಕರ್ತ ಹರೀಶ್ ಸುವರ್ಣ ಬಲಾಯಿಪಾದೆ ಅವರಿಗೆ ಗೌರವಿಸಲಾಯಿತು.

Advertisements

ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಲಪತಿ ಡಾ|ರೋಶನ್ ಡಿಸೋಜಾ, ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ, ಧರ್ಮಗುರುಗಳಾದ ವಂ|ವಲೇರಿಯನ್ ಮೆಂಡೊನ್ಸಾ, ವಂ|ಚಾರ್ಲ್ಸ್ ಮಿನೇಜಸ್, ಅನುಗ್ರಹ ಪಾಲನಾ ಕೇಂದ್ರದ ನಿರ್ದೇಶಕ ವಂ|ವಿನ್ಸೆಂಟ್ ಕ್ರಾಸ್ತಾ ಉಪಸ್ಥಿತರಿದ್ದರು. ಉಜ್ವಾಡ್ ಪತ್ರಿಕೆಯ ಸಂಪಾದಕರಾದ ವಂ|ಆಲ್ವಿನ್ ಸಿಕ್ವೇರಾ ಸ್ವಾಗತಿಸಿ, ಮಾಧ್ಯಮ ಸಂಯೋಜಕರಾದ ಮೈಕಲ್ ರೊಡ್ರಿಗಸ್ ವಂದಿಸಿದರು. ವಂ|ಸಿರಿಲ್ ಲೋಬೊ ಕಾರ್ಯಕ್ರಮ ನಿರೂಪಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X