ಜೇವರ್ಗಿ | ಪಿಡಿಒ ವಿರುದ್ಧ ಆಕ್ರೋಶ: ಗ್ರಾಮ ಪಂಚಾಯತಿಗೆ ಬೀಗ‌ ಜಡಿದ ಸದಸ್ಯೆ

Date:

ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸರಿಯಾಗಿ ಗ್ರಾಮ ಪಂಚಾಯತಿಗೆ ಬರುತ್ತಿಲ್ಲ. ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ, ಪಂಚಾಯತಿ ಸದಸ್ಯೆಯೊಬ್ಬರು ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದಲ್ಲಿ ಘಟನೆ ನಡೆದಿದೆ.

- Advertisement -

ಸೊನ್ನ ಗ್ರಾಮ ಪಂಚಾಯತಿಯ ಪಿಡಿಒ ಸಲೀಮ್ ಪಟೇಲ ಅವರು ಕಳೆದ ತಿಂಗಳು ಸರಿಯಾಗಿ ಪಂಚಾಯತಿಗೆ ಬಂದಿಲ್ಲ. ಪರಿಣಾಮವಾಗಿ, ಪಂಚಾಯತಿಯ ಕಲಸಗಳನ್ನು ಬಾಕಿ ಉಳಿದಿವೆ ಎಂದು ಗ್ರಾಮ ಪಂಚಾಯತಿ ಸದಸ್ಯೆ ಸಾಬಮ್ಮ ಮಲ್ಲಪ್ಪ ಹೆಗಡಿ ಆರೋಪಿಸಿದ್ದಾರೆ. ಪಂಚಾಯತಿ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ಬೀದಿ ದೀಪ, ಆಸ್ತಿ‌ ನೊಂದಣಿ, ರಸ್ತೆ, ಚರಂಡಿ, ಸ್ವಚ್ಚತೆ ಸೇರಿದಂತೆ ನಾನಾ ಸಮಸ್ಯೆಗಳಿವೆ. ಗ್ರಾಮಸ್ಥರು ತಮ್ಮ ಸಮಸ್ಯೆಗಳ ಬಗ್ಗೆ ದೂರು ನೀಡುತ್ತಿದ್ದಾರೆ. ಆದರೆ, ಪಿಡಿಒ ಸರಿಯಾಗಿ ಕಚೇರಿಗೆ ಬಾರದ ಕಾರಣ, ಸಮಸ್ಯೆಗಳಿಗೆ ಪರಿಹಾರ ದೊರೆಯದಂತಾಗಿದೆ” ಎಂದು ಸಾಬಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಜೂನ್-ಜುಲೈ ತಿಂಗಳಿನಲ್ಲಿ ಪಿಡಿಒ ಸರಿಯಾಗಿ ಕಚೇರಿಗೆ ಬಂದಿಲ್ಲ. ಫೋನ್‌ ಮೂಲಕ ಸಂಪರ್ಕಿಸಿದರೂ, ಸಂಪರ್ಕಕ್ಕೆ ಸಿಗುತಿಲ್ಲ. ತಾಲೂ(ಕು ಪಂಚಾಯತಿ ಕಾರ್ಯನಿರ್ವಹಣಾ ಅಧಿಕಾರಿಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಪಿಡಿಒ ಕಾರ್ಯವೈಖರಿ ವಿರುದ್ದ ಜಿಲ್ಲಾ ಪಂಚಾಯತಿ ಸಿಇಒ ಭನ್ವರಸಿಂಗ್ ಮೀನಾ ಅವರಿಗೂ ದೂರು ನೀಡಲು ನಿರ್ಧರಿಸಿದ್ದೇವೆ” ಎಂದು ಹೇಳಿರುವುದಾಗಿ ಪ್ರಜಾವಾಣಿ ವರದಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...