ವಿಜಯಪುರ| ಜೆಜೆಎಂ ಕಳಪೆ ಕಾಮಗಾರಿ ಆರೋಪ : ತನಿಖೆಗೆ ದಸಂಸ ಆಗ್ರಹ

Date:

Advertisements

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೈಗೊಂಡ ಜೆಜೆಎಂ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದಿಂದ ಕೂಡಿದ್ದು, ಕೂಡಲೇ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ ಸಿಂದಗಿ ತಾಲೂಕು ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಿಂದಗಿ ದಸಂಸ ತಾಲೂಕು ಸಮಿತಿಯಿಂದ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ಮೆರವಣಿಗೆ ನಡೆಸಿ ಜಿ.ಪಂ. ಅಧಿಕಾರಿಗಳ ಹಾಗೂ ಗುತ್ತಿಗೆದಾರರ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್ ಅವರಿಗೆ ಸಲ್ಲಿಸಿದರು.

ಮುಖಂಡ ಶರಣು ಶಿಂಧೆ ಮಮಾತನಾಡಿ, ʼಗ್ರಾಮೀಣ ಪ್ರದೇಶಗಳಲ್ಲಿ ಜೆಜೆಎಂ ಕಾಮಗಾರಿ ಕಳಪೆ ಮಟ್ಟದಿಂದ ನಡೆಸಲಾಗಿದೆ, ಕೂಡಲೇ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕುʼ ಎಂದು ಆಗ್ರಹಿಸಿದರು.

Advertisements

WhatsApp Image 2024 07 11 at 9.01.54 PM

ಮುಖಂಡ ಪ್ರಕಾಶ ಗುಡಿಮನಿ ಮಾತನಾಡಿ, ʼಪತಿ ಕುಟುಂಬಕ್ಕೆ ಶುದ್ಧ ಕುಡಿಯುವ ನೀರು ಕಲ್ಪಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಅದಕ್ಕಾಗಿಯೇ ಸರ್ಕಾರ ಜಲ ಜೀವನ ಮಿಷನ್ ಯೋಜನೆಯಡಿ ಸಿಂದಗಿ ತಾಲೂಕಿನ ಗ್ರಾಮಗಳಾದ ಕೇರುಟಗಿ, ತಿಳಗೋಳ, ಆಲಗೂರ, ಬೆಕಿನಾಳ, ಬೂದಿಹಾಳ, ಕಲಕೇರಿ, ಗುತ್ತರಗಿ ಸೇರಿದಂತೆ ಹಲವು ತಾಂಡಾಗಳಲ್ಲಿ ಕಾಮಗಾರಿ ನಡೆಸಲಾಗಿದೆ. ಆದರೆ, ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದಿಂದ ನಡೆಸಿ ಸರ್ಕಾರದ ಹಣ ಪೋಲು ಮಾಡುವ ಜೊತೆಗೆ ಜನರಿಗೆ ಮೋಸ ಮಾಡಿದ್ದಾರೆʼ ಎಂದು ಆರೋಪಿಸಿದರು.

ʼಜೆಜೆಎಂ ಅನುಷ್ಠಾನ ಅಧಿಕಾರಿಗಳಾದ ಎಚ್.ಎಸ್.ಸಾರವಾಡ ಹಾಗೂ ಮಲ್ಲಿಕಾರ್ಜುನ ಕಲಶೆಟ್ಟಿ ಅವರು ನಿರ್ಲಕ್ಷ ವಹಿಸಿದ ಕಾರಣಕ್ಕೆ ಗುತ್ತಿಗೆದಾರರು ಗುಣಮಟ್ಟ ಕಾಮಗಾರಿ ನಡೆಸದೆ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಿ, ಅವ್ಯವಹಾರದಲ್ಲಿ ಶಾಮೀಲಾದ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಿ ಅಮಾನತುಗೊಳಿಸಬೇಕುʼ ಎಂದು ಒತ್ತಾಯಿಸಿದರು.

ʼಕಳಪೆ ಮಟ್ಟದಿಂದ ನಡೆದ ಜೆಜೆಎಂ ಯೋಜನೆಯ ಎಲ್ಲಾ ಕಾಮಗಾರಿ ಸಮಗ್ರವಾಗಿ ತನಿಖೆ ನಡೆಸುವವರೆಗೂ ಕಾಮಗಾರಿ ತಡೆ ಹಿಡಿಯಬೇಕುʼ ಎಂದು ದಸಂಸ ಮುಖಂಡ ಪ್ರಕಾಶ ಬಡಿಗೇರ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ಪ್ರತಿಭಟನೆಯಲ್ಲಿ ದಸಂಸ ಮುಖಂಡರಾದ ಅಶೋಕ ಚಲವಾದಿ, ದೇವು ಕಲ್ಲೋರು, ಮಲಕಪ್ಪ ಗಡಗನವರ, ಶಿವು ರಾಂಪುರ, ಮೋಹನ ಬರಗಲ್, ರಮೇಶ ಹೊಸಮನಿ, ವಿಕಾಸ ಕಾಳೆ, ರಾಜಕುಮಾರ ಹೊಸಮನಿ, ಸಿದ್ದಪ್ಪ ದೊಡ್ಡಮನಿ, ಪರಶುರಾಮ ಬಡೆಗೇರ, ಮಹಾದೇವ ಲಿಂಗದೇವನಹಳ್ಳಿ, ಸಾಗರ ಹೊಸಮನಿ, ಮುತ್ತು ಸುಲ್ಪಿ, ಬಸವರಾಜ ಹೊಸಮನಿ, ಉಮೇಶ ಕಮತಗಿ, ಚಂದ್ರಕಾಂತ ಕಲಕೇರಿ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X