ಬೀದರ್‌ | ಜೆಜೆಎಂ ಕಾಮಗಾರಿ ಕಳಪೆ ಆರೋಪ : ಗ್ರಾ.ಪಂ. ಸದಸ್ಯನಿಂದ ಏಕಾಂಗಿ ಪ್ರತಿಭಟನೆ

Date:

ಕಮಲನಗರ ತಾಲೂಕಿನ ಮುಧೋಳ (ಬಿ) ಗ್ರಾಮದಲ್ಲಿ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಜೆಜೆಎಂ ಕಾಮಗಾರಿ ನಡೆಸದೆ ಕಳಪೆ ಕಾಮಗಾರಿ ನಡೆಸುತ್ತಿದ್ದು, ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಮಧೋಳ (ಬಿ) ಗ್ರಾಮ ಪಂಚಾಯತ್‌ ಸದಸ್ಯ ಸೋಮನಾಥ ಸ್ವಾಮಿ ಒತ್ತಾಯಿಸಿದ್ದಾರೆ.

- Advertisement -

ಬೀದರ ಜಿಲ್ಲಾ ಪಂಚಾಯತ ಆವರಣದಲ್ಲಿ ಒಂದು ದಿನ ಏಕಾಂಗಿ ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ದೇಶದ ಪ್ರತಿಯೊಬ್ಬ ನಾಗರಿಕನಿಗೂ ಶುದ್ಧ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಲಜೀವನ ಮಿಷನ್‌ ಎಂಬ ಮಹತ್ವದ ಯೋಜನೆ ಜಾರಿಗೊಳಿಸಿದೆ. ಆದರೆ ಕಮಲನಗರ ತಾಲೂಕಿನ ಮುಧೋಳ (ಬಿ) ಗ್ರಾಮದಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ನಡೆಸುತ್ತಿರುವ ಜೆಜೆಎಂ ಕಾಮಗಾರಿ ಗುತ್ತಿಗೆದಾರರು ಸರ್ಕಾರದ ಮಾರ್ಗಸೂಚಿಯ ಪ್ರಕಾರ ನಡೆಸದೆ ಬೇಕಾಬಿಟ್ಟಿಯಾಗಿ ನಡೆಸುತ್ತಿದ್ದಾರೆ. ಗ್ರಾಮದಲ್ಲಿ ರಸ್ತೆ ಅಗೆದು ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಮಾಡುತ್ತಿದ್ದಾರೆ. ನೀರಿನ ಪೈಪಲೈನ್ ಅಳವಡಿಸುವ ವೇಳೆ ಇತರೆ ನೀರಿನ ಸರಬರಾಜು ಪೈಪ್‌ ಗಳು ಗುಂಡಿಗಳಲ್ಲಿ ಮುಚ್ಚಿ ಹೋಗುತ್ತಿವೆ. ಈ ಬಗ್ಗೆ ಗುತ್ತಿಗೆದಾರರಿಗೆ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಸಲ ಮನವಿ ಸಲ್ಲಿಸಿದರೂ ಯಾವುದೇ ಕ್ರಮಗೊಂಡಿಲ್ಲ” ಆರೋಪಿಸಿದ್ದಾರೆ.

“ಜೆಜೆಎಂ ಕಾಮಗಾರಿ ವೇಳೆ ರಸ್ತೆ ಅಗೆದ ಮಣ್ಣು ಗ್ರಾಮದ ಮಧ್ಯೆ ಭಾಗದಲ್ಲಿ ಎಸೆಯುತ್ತಿರುವ ಬಗ್ಗೆ ಅ.21 ರಂದು ಜಿ.ಪಂ.ಗೆ ದೂರು ಸಲ್ಲಿಸಲಾಗಿತ್ತು. ಆದರೂ ಇಲ್ಲಿಯವರೆಗೆ ದೂರಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ತಮ್ಮ ಕಚೇರಿಯ ಆವರಣದಲ್ಲಿ ಏಕವ್ಯಕ್ತಿ ಧರಣಿ ಮುಖಾಂತರ ಮತ್ತೊಮ್ಮೆ ಮನವಿ ಸಲ್ಲಿಸುತ್ತಿದ್ದು, ಕೂಡಲೇ ಮುಧೋಳ (ಬಿ) ಗ್ರಾಮದಲ್ಲಿ ನಡೆಯುತ್ತಿರುವ ಕಳಪೆಮಟ್ಟದ ಜೆಜೆಎಂ ಕಾಮಗಾರಿ ಕುರಿತು ಸೂಕ್ತ ತನಿಖೆ ನಡೆಸಿ ಕಾಮಗಾರಿಯ ಅನುದಾನ ತಡೆ ಹಿಡಿಯಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ವಾಸ್ತವ ಕುಮಾರಸ್ವಾಮಿ ನಿದ್ದೆಗೆಡಿಸಿದೆ: ಸಿದ್ದರಾಮಯ್ಯ

“ಈ ಬೇಡಿಕೆ ಅತಿ ಶೀಘ್ರದಲ್ಲಿ ಈಡೇರಿಸದಿದ್ದರೆ ನ.20 ರಿಂದ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ” ಎಂದು ಎಚ್ಚರಿಸದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....