ಐಎಎಸ್ – ಐಪಿಎಸ್ ಸಂಘರ್ಷ; ಡಿ ರೂಪಾಗೆ ಸಮನ್ಸ್ ಜಾರಿ ಮಾಡಿದ ಜೆಎಂಎಫ್‌ಸಿ ಕೋರ್ಟ್

Date:

  • ಕಳೆದ ತಿಂಗಳು ರೂಹಿಣಿ-ರೂಪ ನಡುವೆ ಸಂಘರ್ಷ ನಡೆದಿತ್ತು
  • ರೂಪ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದ ರೂಹಿಣಿ

ಕಳೆದ ತಿಂಗಳು ರಾಜ್ಯದ ಹೆಸರಾಂತ ಐಎಎಸ್ ಮತ್ತು ಐಪಿಎಸ್‌ ಅಧಿಕಾರಿಗಳಾದ ರೋಹಿಣಿ ಸಿಂದೂರಿ ಮತ್ತು ಡಿ ರೂಪ ನಡುವೆ ಸಾಮಾಜಿಕ ಜಾಲಾತಾಣದಲ್ಲಿ ನಡೆದಿದ್ದ ಸಂಘರ್ಷಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಷಯವಾಗಿ ಐಪಿಎಸ್ ಅಧಿಕಾರಿ ಡಿ ರೂಪಾ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

- Advertisement -

ಐಎಎಸ್‌ ಅಧಿಕಾರಿ ರೋಹಿಣಿ ಸಿಂದೂರಿ ಅವರು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ “ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ತಮ್ಮ ಫೇಸ್‌ಬುಕ್‌ ಖಾತೆಯಿಂದ ಫೆ. 14 ಮತ್ತು 19 ರಂದು ನನ್ನ ವಿರುದ್ಧ ಕೀಳಾಗಿ ಬರೆದು ಆರೋಪ ಮಾಡಿದ್ದಾರೆ. ಇದರಿಂದ ಹಲವು ಮಾಧ್ಯಮಗಳು ನನ್ನ ಚಾರಿತ್ಯಕ್ಕೆ ವಿರುದ್ಧವಾದ ವಿಷಯಗಳನ್ನು ಪ್ರಸಾರ ಮಾಡಿರುವ ಕಾರಣ ನನ್ನ ವ್ಯಕ್ತಿತ್ವಕ್ಕೆ ಧಕ್ಕೆಯುಂಟು ಮಾಡಿದೆ” ಎಂದು ದೂರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

“ನನ್ನ ತೇಜೋವಧೆ ಮಾಡುವ ಉದ್ದೇಶದಿಂದ ಡಿ ರೂಪಾ ಅವರು ಈ ಕೃತ್ಯವೆಸಗಿದ್ದಾರೆ. ಇದರಿಂದ ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದ್ದಲ್ಲದೇ ಮಾನಸಿಕವಾಗಿ ನೋವುಂಟಾಗಿದೆ” ಎಂದು ಆರೋಪಿಸಿ 1 ಕೋಟಿ ರೂ. ಪರಿಹಾರ ಹಾಗೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಪ್ರಕರಣ ದಾಖಲಿಸಿದ್ದರು.

ಇದರ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯವು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್‌ಗೆ ಸಮನ್ಸ್ ಜಾರಿ ಮಾಡಿ ಆದೇಶ ಹೊರಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...