ಬೆಂ. ಗ್ರಾಮಾಂತರ | ಸೆ.13 ರಂದು ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳ‌ : ಜಿಲ್ಲಾಧಿಕಾರಿ ಶಿವಶಂಕರ್‌

Date:

Advertisements

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆ.13ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಆಸಕ್ತ ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರು ನೋಂದಣಿ ಮಾಡಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್‌ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ಆಹಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರ ಮಹಾತ್ವಾಕಾಂಕ್ಷಿ ಆಶಯದೊಂದಿಗೆ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಜಿಲ್ಲೆಯಲ್ಲಿ ಹೆಚ್ಚಿನ ಕೈಗಾರಿಕಾ ಪ್ರದೇಶವಿದ್ದು ಉದ್ಯೋಗಾವಕಾಶಗಳು ಕೂಡ ಸೃಷ್ಟಿ ಆಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಉದ್ಯೋಗ ಮೇಳದಲ್ಲಿ 100 ಕ್ಕಿಂತ ಹೆಚ್ಚು ವಿವಿಧ ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಖಾಸಗಿ ಕಂಪನಿಗಳು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ವಿವಿಧ ಜಿಲ್ಲೆಗಳ ಉದ್ಯೋಗಾಂಕ್ಷಿಗಳು ಕೂಡ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಹೇಳಿದರು.

Advertisements

ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು https://bangalorerural.nic.in/en/job-fair/ ಜಾಲತಾಣದಲ್ಲಿ ಸ್ವ-ವಿವರದೊಂದಿಗೆ ನೊಂದಾಯಿಸಿಕೊಳ್ಳಬಹುದಾಗಿದೆ. ಎಸ್.ಎಸ್.ಎಲ್.ಸಿ , ಪಿಯುಸಿ, ಐಟಿಐ, ಡಿಪ್ಲೋಮೋ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು, ಆಸಕ್ತ ಉದ್ಯೋಕಾಂಕ್ಷಿಗಳು ಸ್ವವಿವರ ದಾಖಲಾತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಉಚಿತ ಪ್ರವೇಶವಿದ್ದು, ಸಂದರ್ಶನಕ್ಕೆ ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ ಎಂದರು.

job fair QR code
ಉದ್ಯೋಗ ಮೇಳ ನೋಂದಣಿಗೆ ಕ್ಯೂ.ಆರ್‌ ಕೋಡ್‌

ಇದುವರೆಗೆ 523 ಉದ್ಯೋಗಾಂಕ್ಷಿಗಳು ನೋಂದಾಯಿಸಿಕೊಂಡಿದ್ದು, ಉದ್ಯೋಗ ಮೇಳದಲ್ಲಿ 5000 ಕ್ಕೂ ಹೆಚ್ಚು ಉದ್ಯೋಗಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ. ಆನ್ಲೈನ್ ನಲ್ಲಿ ನೋಂದಾಯಿಸದ ಅಭ್ಯರ್ಥಿಗಳು ಉದ್ಯೋಗ ಮೇಳದ ದಿನದಂದು, ಸ್ಥಳದಲ್ಲಿ ಸ್ಥಾಪಿಸಲಾಗಿರುವ ನೋಂದಣಿ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಮೇಳದ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದೆ. ಉದ್ಯೋಗಾಂಕ್ಷಿಗಳು ಹತ್ತಿರದ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿಗಳಲ್ಲಿಯೂ ಕೂಡ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಮುಖ್ಯ ನಿರ್ಧಾರಗಳಿಂದ ಹಿಂದೆ ಸರಿದ ಮೋದಿ, ಇದು ಪ್ರಜಾಸತ್ತೆಯ ಗೆಲುವು

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ನರೇಂದ್ರ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗನ್ನಾಥ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ವಾರ್ತಾ ಇಲಾಖೆ ಸಹಾಯಕಿ ನಿರ್ದೇಶಕಿ ಹೇಮಾವತಿ ಜೆ ಸೇರಿದಂತೆ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X