ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಕರ್ನಾಟಕ ಸರ್ಕಾರದಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಇದೇ ಸೆಪ್ಟೆಂಬರ್ 29ರ ಸಂಜೆ 5ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಯ ವಿವರಗಳು
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ(ಕೆಎಂಎಫ್ ಶಿಮುಲ್)ನಲ್ಲಿ 27 ಸಹಾಯಕ ವ್ಯವಸ್ಥಾಪಕ ಹುದ್ದೆಗಳು ಖಾಲಿಯಿದ್ದು, ತಿಂಗಳಿಗೆ ₹34,100–₹99,400ರ ವರೆಗೆ ವೇತನ ಇರಲಿದೆ.
ಅರ್ಹತಾ ವಿವರಗಳು
ಶಿಕ್ಷಣ ಅರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ಬಿಎಸ್‌ಸಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಸಹಾಯಕ ವ್ಯವಸ್ಥಾಪಕ ಹುದ್ದೆಯ ಅಧಿಸೂಚನೆ 2025ರಂತೆ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳು. 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು SC/ST ಅಭ್ಯರ್ಥಿಗಳಿಗೆ 05 ವರ್ಷಗಳು ಸಡಿಲಿಕೆಯಿದೆ.
ಅರ್ಜಿ ಶುಲ್ಕ: 2A, 2B, 3A ಮತ್ತು 3B ಅಭ್ಯರ್ಥಿಗಳು ₹500 ಮತ್ತು ಇತರ ಅಭ್ಯರ್ಥಿಗಳು ₹1000 ಪಾವತಿಸಬೇಕು.
ಕೆಎಂಎಫ್ ಶಿಮುಲ್ ಉದ್ಯೋಗಾಂಕ್ಷಿಗಳು ಅರ್ಜಿ ಸಲ್ಲಿಸುವುದು ಹೇಗೆ?
ಸೆಪ್ಟೆಂಬರ್‌ನಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ಸಹಾಯಕ ವ್ಯವಸ್ಥಾಪಕರ ನೇಮಕಾತಿಗೆ ಎಲ್ಲ ಅರ್ಹ ಅಭ್ಯರ್ಥಿಗಳು ಕೆಳಕಂಡಂತೆ ಅರ್ಜಿ ಸಲ್ಲಿಸಬಹುದು.
ಹಂತ-1: ಮೊದಲನೆಯದಾಗಿ KMF ಶಿಮುಲ್ ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
ಈ ಸುದ್ದಿ ಓದಿದ್ದೀರಾ? ರಾಯಚೂರು | ನವರಾತ್ರಿ ಹಬ್ಬದ ವೇಳೆ ದಲಿತರ ದೇವಾಲಯ ಪ್ರವೇಶ ತಡೆ – ಸ್ಥಳದಲ್ಲೇ ವಾಗ್ವಾದ
ಹಂತ-2: ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಿ. ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಛಾಯಾಚಿತ್ರ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಹಂತ-3: ಆನ್‌ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಿ
ಹಂತ-4: ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದರೆ ಮಾತ್ರ)
ಹಂತ-5: ಎಲ್ಲ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ
ಹಂತ-6: ಕೊನೆಯದಾಗಿ ಕೊನೆಯ ದಿನಾಂಕ ಸೆಪ್ಟೆಂಬರ್ 29ರ ಮದ್ಯಾಹ್ನ 12ರೊಳಗೆ ಮೊದಲು ಅಗತ್ಯವಿರುವ ಪೋಷಕ ದಾಖಲೆಗಳೊಂದಿಗೆ ಫಾರ್ಮ್‌ನಿಂದ ಅರ್ಜಿಯನ್ನು ಸಲ್ಲಿಸಿ.