ಉದ್ಯೋಗ ಮಾಹಿತಿ | ಕೆಎಂಎಫ್‌ ಶಿಮುಲ್‌ನಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ

Date:

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಕರ್ನಾಟಕ ಸರ್ಕಾರದಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಇದೇ ಸೆಪ್ಟೆಂಬರ್ 29ರ ಸಂಜೆ 5ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

- Advertisement -

ಹುದ್ದೆಯ ವಿವರಗಳು
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ(ಕೆಎಂಎಫ್‌ ಶಿಮುಲ್‌)ನಲ್ಲಿ 27 ಸಹಾಯಕ ವ್ಯವಸ್ಥಾಪಕ ಹುದ್ದೆಗಳು ಖಾಲಿಯಿದ್ದು, ತಿಂಗಳಿಗೆ ₹34,100–₹99,400ರ ವರೆಗೆ ವೇತನ ಇರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅರ್ಹತಾ ವಿವರಗಳು
ಶಿಕ್ಷಣ ಅರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ಬಿಎಸ್‌ಸಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಸಹಾಯಕ ವ್ಯವಸ್ಥಾಪಕ ಹುದ್ದೆಯ ಅಧಿಸೂಚನೆ 2025ರಂತೆ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳು. 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು SC/ST ಅಭ್ಯರ್ಥಿಗಳಿಗೆ 05 ವರ್ಷಗಳು ಸಡಿಲಿಕೆಯಿದೆ.

ಅರ್ಜಿ ಶುಲ್ಕ: 2A, 2B, 3A ಮತ್ತು 3B ಅಭ್ಯರ್ಥಿಗಳು ₹500 ಮತ್ತು ಇತರ ಅಭ್ಯರ್ಥಿಗಳು ₹1000 ಪಾವತಿಸಬೇಕು.

ಕೆಎಂಎಫ್ ಶಿಮುಲ್ ಉದ್ಯೋಗಾಂಕ್ಷಿಗಳು ಅರ್ಜಿ ಸಲ್ಲಿಸುವುದು ಹೇಗೆ?

ಸೆಪ್ಟೆಂಬರ್‌ನಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ಸಹಾಯಕ ವ್ಯವಸ್ಥಾಪಕರ ನೇಮಕಾತಿಗೆ ಎಲ್ಲ ಅರ್ಹ ಅಭ್ಯರ್ಥಿಗಳು ಕೆಳಕಂಡಂತೆ ಅರ್ಜಿ ಸಲ್ಲಿಸಬಹುದು.

ಹಂತ-1: ಮೊದಲನೆಯದಾಗಿ KMF ಶಿಮುಲ್ ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

ಈ ಸುದ್ದಿ ಓದಿದ್ದೀರಾ? ರಾಯಚೂರು | ನವರಾತ್ರಿ ಹಬ್ಬದ ವೇಳೆ ದಲಿತರ ದೇವಾಲಯ ಪ್ರವೇಶ ತಡೆ – ಸ್ಥಳದಲ್ಲೇ ವಾಗ್ವಾದ

ಹಂತ-2: ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಿ. ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಛಾಯಾಚಿತ್ರ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಹಂತ-3: ಆನ್‌ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಿ
ಹಂತ-4: ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದರೆ ಮಾತ್ರ)
ಹಂತ-5: ಎಲ್ಲ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ
ಹಂತ-6: ಕೊನೆಯದಾಗಿ ಕೊನೆಯ ದಿನಾಂಕ ಸೆಪ್ಟೆಂಬರ್‌ 29ರ ಮದ್ಯಾಹ್ನ 12ರೊಳಗೆ ಮೊದಲು ಅಗತ್ಯವಿರುವ ಪೋಷಕ ದಾಖಲೆಗಳೊಂದಿಗೆ ಫಾರ್ಮ್‌ನಿಂದ ಅರ್ಜಿಯನ್ನು ಸಲ್ಲಿಸಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...