ಭಾರತೀಯ ರಕ್ಷಣಾ ಸಚಿವಾಲಯ(ಡಿಆರ್‌ಡಿಒ) ತನ್ನ ಸಂಸ್ಥೆಯಲ್ಲಿ ಖಾಲಿಯಿರುವ 113 ವಿವಿಧ ಅಪ್ರೆಂಟಿಸ್ ಹಾಗೂ ಇತರ ಹಲವಾರು ಉದ್ಯೋಗಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಫೆಬ್ರವರಿ 6ರೊಳಗೆ ಅರ್ಜಿ ಸಲ್ಲಿಸಬೇಕಾಗಿ ಅಧಿಸೂಚನೆ ಹೊರಡಿಸಿದೆ.
ಭಾರತೀಯ ರಕ್ಷಣಾ ಸಚಿವಾಲಯ ಬಿಡುಗಡೆ ಮಾಡಿರುವ ಅಧಿಸೂಚನೆಯಲ್ಲಿ ವಿವಿಧ ಅಪ್ರೆಂಟಿಸ್ ಹಾಗೂ ಇತರ ಖಾಲಿಯಿರುವ ಹುದ್ದೆಗೆಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿವುದಾಗಿ ತಿಳಿಸಿದೆ. ಜನವರಿ 07ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಫೆಬ್ರವರಿ 06ರೊಳಗೆ ಅರ್ಜಿ ಸಲ್ಲಿಸುವಂತೆ ಅಧಿಸೂಚನೆಯಲ್ಲಿ ತಿಳಿಸಿದೆ.
ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು
ಶೈಕ್ಷಣಿಕ ಅರ್ಹತೆ: ಭಾರತೀಯ ರಕ್ಷಣಾ ಸಚಿವಾಲಯದಲ್ಲಿ ಖಾಲಿಯಿರುವ 113 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಪದವಿ ಪೂರ್ಣಗೊಳಿಸಿರಬೇಕು. ಜತೆಗೆ ಇತರ ವಿದ್ಯಾರ್ಹತೆ ಹೊಂದಿದವರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಹೆಚ್ಚಿನ ವಿವರಕ್ಕಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪರಿಶೀಲಿಸಬಹುದು.
ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ ಕನಿಷ್ಠ 18 ವರ್ಷ ಹಾಗೂ 27 ವರ್ಷದ ಒಳಗಿನ ವಯೋಮಾನದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಪಿಡಬ್ಲ್ಯೂಡಿ/ಮಾಜಿ ಸೈನಿಕರಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಉದ್ಯೋಗ ಮಾಹಿತಿ | ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ಹುದ್ದೆ; ಅರ್ಜಿ ಸಲ್ಲಿಕೆಗೆ ಫೆ.3 ಕೊನೆದಿನ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹18,000ದಿಂದ ಗರಿಷ್ಠ ₹92,000ದ ವರೆಗೆ ಹುದ್ದೆಗಳ ಅನುಗುಣವಾಗಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಅಥವಾ ಲಿಖಿತ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.
I am interested