ಉದ್ಯೋಗ ಮಾಹಿತಿ | ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ಹುದ್ದೆ; ಅರ್ಜಿ ಸಲ್ಲಿಕೆಗೆ ಫೆ.3 ಕೊನೆದಿನ

Date:

ಕರ್ನಾಟಕ ಲೋಕೋಪಯೋಗಿ ಇಲಾಖೆ(ಕೆಪಿಎಸ್‌ಸಿ)ಯಲ್ಲಿ ಖಾಲಿಯಿರುವ ಸಹಾಯಕ ಕಾರ್ಯಪಾಲಕ ಎಂಜಿನಿಯರ್(ಗ್ರೇಡ್‌-1) ಗ್ರೂಪ್‌-ಎ ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನಿಸಿದ್ದು, 2024ರ ಸೆಪ್ಟೆಂಬರ್‌ 18ರಂದು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿಗಳನ್ನು ಸ್ವೀಕಾರ ಮಾಡಲಾಗಿತ್ತು. ಆದರೆ ಇದೀಗ ಇದೇ ಉದ್ಯೋಗಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಮತ್ತೆ ಅರ್ಜಿಗಳನ್ನು ಆಹ್ವಾನ ಮಾಡಿದೆ.

- Advertisement -

ಕೆಪಿಎಸ್‌ಸಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್(ಗ್ರೇಡ್‌-1) ಗ್ರೂಪ್‌-ಎ 30 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಇದರಲ್ಲಿ 29 ಹುದ್ದೆಗಳು ಮುಕ್ತ ಸ್ಪರ್ಧೆ ಅಭ್ಯರ್ಥಿಗಳು ಹಾಗೂ 01 ಕೆಲಸಕ್ಕೆ ಸೇವಾನಿರತ(ಈಗಾಗಲೇ ಕೆಲಸದಲ್ಲಿ ಇರುವವರು) ಸ್ಪರ್ಧೆ ಅಭ್ಯರ್ಥಿಯನ್ನು ಭರ್ತಿ ಮಾಡಲಾಗುತ್ತಿದೆ. ಈ ಉದ್ಯೋಗಗಳನ್ನು ವರ್ಗೀಕರಣ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಹುದ್ದೆಗಳ ವರ್ಗೀಕರಣ

ಸಾಮಾನ್ಯ ವರ್ಗ- 13
ಪರಿಶಿಷ್ಟ ಜಾತಿ- 05
ಪರಿಶಿಷ್ಟ ಪಂಗಡ- 02
ಪ್ರವರ್ಗ1- 01
ಪ್ರವರ್ಗ-2ಎ- 05
ಪ್ರವರ್ಗ-2ಬಿ- 01
ಪ್ರವರ್ಗ-3ಎ- 01
ಪ್ರವರ್ಗ-3ಬಿ- 01
ಸೇವಾನಿರತ (ಎಸ್​ಸಿ)- 01
ಒಟ್ಟು- ಉದ್ಯೋಗಗಳು- 30

ವಿದ್ಯಾರ್ಹತೆ : ಎಂಜಿನಿಯರಿಂಗ್ ಪದವಿ-ಸಿವಿಲ್ ಎಂಜಿನಿಯರ್, ಕನ್​ಸ್ಟ್ರಕ್ಷನ್ ಟೆಕ್ನಲಾಜಿ, ಬಿಲ್ಡಿಂಗ್ ಅಂಡ್ ಕನ್‌ಸ್ಟ್ರಕ್ಷನ್ ಟೆಕ್ನಾಲಜಿ, ಸಿವಿಲ್ ಟೆಕ್ನಾಲಜಿ ಕನ್‌ಸ್ಟ್ರಕ್ಷನ್ ಟೆಕ್ನಾಲಜಿ, ಕನ್‌ಸ್ಟ್ರಕ್ಷನ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಜಿಯೋಮೆಕಾನಿಕ್ಸ್‌ ಮತ್ತು ಸ್ಟ್ರಕ್ಚರ್ಸ್‌, ಸ್ಟ್ರಕ್ಚರಲ್ ಅಂಡ್ ಫೌಂಡೇಷನ್ ಎಂಜಿನಿಯರಿಂಗ್, ಸ್ಟ್ರಕ್ಚರಲ್ ಎಂಜಿನಿಯರಿಂಗ್ ಹಾಗೂ ಕನ್‌ಸ್ಟ್ರಕ್ಷನ್ ಪದವಿ ಸೇರಿದಂತೆ ಇವುಗಳಲ್ಲಿ ಯಾವುದಾದರೂ ಒಂದನ್ನು ಪೂರ್ಣಗೊಳಿಸಿರಬೇಕು.

ಮಾಸಿಕ ವೇತನ ಶ್ರೇಣಿ- ₹83,700 ದಿಂದ ₹1,55,200

ಇತರೆ ಅರ್ಹತೆ :

ಈ ಸುದ್ದಿ ಓದಿದ್ದೀರಾ? ಗದಗ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿವಿಧ ಹುದ್ದೆಗಳು: ಜನೆವರಿ 27 ರಂದು ನೇರ ಸಂದರ್ಶನ

ಸೇವಾನಿರತ ಹುದ್ದೆ: ಸೇವಾನಿರತ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್(ಗ್ರೇಡ್-1) ಅಥವಾ ಸಹಾಯಕ ಎಂಜಿನಿಯರ್(ಗ್ರೇಡ್‌-2) ಅಥವಾ ಕಿರಿಯ ಎಂಜಿನಿಯರ್ ಆಗಿರಬೇಕು. ಯಾವುದೇ ಕೇಡರ್‌ನಲ್ಲಿ ಕನಿಷ್ಠ 5 ವರ್ಷ ಕೆಲಸ ಮಾಡಿರಬೇಕು. ಇಲಾಖೆ ವಯಸ್ಸು ನಿಗದಿಪಡಿಸಿಲ್ಲ. ಸೇವಾನಿರತ ಅಭ್ಯರ್ಥಿ, ಸಹ ಮುಕ್ತ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಇರುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ₹600, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹300, ಎಸ್​ಸಿ/ಎಸ್​ಟಿ, ಪ್ರ-01, ಮಾಜಿ ಸೈನಿಕ, ವಿಶೇಷ ಚೇತನರಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ

2025ರ ಜನವರಿ 20ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಫೆಬ್ರವರಿ 3 ರೊಳಗೆ ಅರ್ಜಿ ಸಲ್ಲಿಸಬೇಕಾಗಿ ಲೋಕೋಪಯೋಗಿ ಇಲಾಖೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉದ್ಯೋಗ ಮಾಹಿತಿ | ರೈಲ್ವೆಯಲ್ಲಿ 590 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ವಿಭಾಗದ...

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...