ಮೈಸೂರು | ಕನ್ನಡ ಶಾಲೆಗಳ ಉಳಿವಿಗೆ ಉದ್ಯೋಗ ಮೀಸಲಾತಿ ಅಗತ್ಯ: ಕೊಟ್ರೇಶ್ ಎಸ್. ಉಪ್ಪಾರ್

Date:

ಸರ್ಕಾರಿ ಕನ್ನಡ ಶಾಲೆಗಳು ಉಳಿಯಬೇಕಾದರೆ ಕನ್ನಡ ‘ಅನ್ನದ ಭಾಷೆ’ಯಾಗಬೇಕು. ಕನ್ನಡ ಶಾಲೆಗಳ ಉಳಿವಿನ ಬಗ್ಗೆ ಕೇವಲ ಮೊಸಳೆ ಕಣ್ಣೀರು ಹಾಕುವುದರಿಂದ ಪ್ರಯೋಜನವಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ನೇಮಕಾತಿಯಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ಶೇ.25 ಮೀಸಲಾತಿ ಕಲ್ಪಿಸುವ ಕಾನೂನು ಜಾರಿಗೆ ಬರಬೇಕಾಗಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ರಾಜ್ಯಾಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ಅಭಿಪ್ರಾಯಪಟ್ಟರು.

- Advertisement -

ಮೈಸೂರು ನಗರದ ಎನ್.ಆರ್. ಮೊಹಲ್ಲಾದ ರಾಜೇಂದ್ರನಗರದಲ್ಲಿರುವ ಛಾಯಾದೇವಿ ಶಿಕ್ಷಣ ಮಹಾವಿದ್ಯಾಲಯದ ಛಾಯಾ ರಂಗಮಂಟಪದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಜಿಲ್ಲಾ ಘಟಕದಿಂದ ಆಯೋಜಿಸಿದ್ದ ‘ಕುವೆಂಪು ಶೈಕ್ಷಣಿಕ ಚಿಂತನೆಗಳು’ ಕುರಿತ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಕರ್ನಾಟಕದಲ್ಲಿ ಕನ್ನಡ ಉಳಿಯಬೇಕಾದರೆ ಮೊದಲು ಕನ್ನಡ ಶಾಲೆಗಳು ಉಳಿಯಬೇಕು. ಕನ್ನಡ ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಉದ್ಯೋಗ ಖಾತ್ರಿ ದೊರೆತರೆ ಜನರು ಸಹಜವಾಗಿಯೇ ಕನ್ನಡ ಶಾಲೆಗಳತ್ತ ಮುಖ ಮಾಡುತ್ತಾರೆ. ಇದರಿಂದ ಕನ್ನಡ ಶಾಲೆಗಳ ಸಬಲೀಕರಣ ಸಾಧ್ಯವಾಗುತ್ತದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಇತಿಹಾಸದಲ್ಲಿ ಬಸವಣ್ಣನವರ ನಂತರ ವಿಶ್ವಮಾನವ ಸಾಹಿತ್ಯ ನೀಡಿದವರಲ್ಲಿ ಕುವೆಂಪು ಅಗ್ರಗಣ್ಯರು. ಆಧುನಿಕ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ ಮೊದಲ ಯುಗಪ್ರವರ್ತಕ ಕವಿ ಕುವೆಂಪು. ಆದ್ದರಿಂದಲೇ ಅವರನ್ನು ಜಗದ ಕವಿ, ಯುಗದ ಕವಿ ಹಾಗೂ ರಸಋಷಿ ಎಂದು ಕರೆಯಲಾಗುತ್ತದೆ. ಕುವೆಂಪು ಕೇವಲ ಸಾಹಿತ್ಯ ಲೋಕದ ಧ್ರುವತಾರೆ ಮಾತ್ರವಲ್ಲ, ಶ್ರೇಷ್ಠ ಶಿಕ್ಷಣ ತಜ್ಞರೂ ಆಗಿದ್ದರು ಎಂದು ತಿಳಿಸಿದರು.

ಧರ್ಮ, ಜಾತಿ, ಲಿಂಗ ತಾರತಮ್ಯವಿಲ್ಲದ ಸಮಸಮಾಜದ ಕನಸನ್ನು ನನಸು ಮಾಡುವ ಶಿಕ್ಷಣವನ್ನು ಕುವೆಂಪು ಪ್ರತಿಪಾದಿಸಿದ್ದರು. ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಪ್ರಥಮ ಸ್ಥಾನ ದೊರಕಲಿ ಎಂದಾಕ್ಷಣ ಇತರರಿಗೆ ಸ್ಥಾನವೇ ಇಲ್ಲವೆಂದಲ್ಲ. ‘ಬೇರೆಯವರು ನಮ್ಮಲ್ಲಿಗೆ ಅತಿಥಿಗಳಾಗಿ ಬರಲಿ, ಯಜಮಾನರಾಗಿ ಅಲ್ಲ’ ಎಂಬ ಕುವೆಂಪು ಅವರ ಮಾತುಗಳನ್ನು ಉಪ್ಪಾರ್ ಸ್ಮರಿಸಿದರು.

ಕನ್ನಡ ಉಪನ್ಯಾಸಕ ಡಾ. ಉಮೇಶ್ ಬೇವಿನಹಳ್ಳಿ ಮಾತನಾಡಿ, “ವಿಶ್ವಜ್ಞಾನ, ವಿಶ್ವಪ್ರಜ್ಞೆ, ವಿಶ್ವಮೈತ್ರಿ ಹಾಗೂ ವಿಶ್ವಮಾನವ ಗುಣವನ್ನು ಕಲಿಸುವುದೇ ನಿಜವಾದ ಶಿಕ್ಷಣ ಎಂದು ಕುವೆಂಪು ಪ್ರತಿಪಾದಿಸಿದ್ದರು. ಅವರ ಶೈಕ್ಷಣಿಕ ಚಿಂತನೆಗಳ ದರ್ಶನವಾಗಬೇಕಾದರೆ ಒಮ್ಮೆ ಮಾನಸ ಗಂಗೋತ್ರಿಗೆ ಭೇಟಿ ನೀಡಬೇಕು” ಎಂದರು.

ಯಾವುದೇ ಕಲಿಕೆ ಮಗುವಿಗೆ ಭಾರವಾಗಬಾರದು. ಮಗು ಬಯಸುವ ಶಿಕ್ಷಣ ದೊರಕಬೇಕು. ಸರ್ಕಾರ ಮತ್ತು ಶಿಕ್ಷಣ ಸಂಸ್ಥೆಗಳು ಇಂಗ್ಲಿಷ್ ಹಾಗೂ ಹಿಂದಿ ಕಲಿಯುವಂತೆ ಮಕ್ಕಳ ಮೇಲೆ ಒತ್ತಡ ಹೇರುವ ಬದಲು, ಕನ್ನಡ ಮಾಧ್ಯಮದಲ್ಲಿಯೇ ಕಲಿಯುವ ವಾತಾವರಣ ನಿರ್ಮಿಸಬೇಕು ಎಂಬುದು ಕುವೆಂಪು ಅವರ ಆಶಯವಾಗಿತ್ತು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಶಿಕ್ಷಣ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಅಪಾರ: ಡಾ. ಸುಜಾತ ಅಕ್ಕಿ

ಇಂದು ಶಿಕ್ಷಣ ಕ್ಷೇತ್ರ ಹಲವು ಸಂಕಷ್ಟಗಳ ಸುಳಿಯಲ್ಲಿ ಸಿಲುಕಿದೆ. ಇಂತಹ ಸಂದರ್ಭದಲ್ಲಿ ಶಿಕ್ಷಣ ವ್ಯವಸ್ಥೆಯ ಬಗ್ಗೆ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಇಚ್ಛಾಶಕ್ತಿ ತೋರಬೇಕಾಗಿದೆ. “ನಮ್ಮ ಮಕ್ಕಳು ಕನ್ನಡ ಮಾಧ್ಯಮದಲ್ಲಿಯೇ ಕಲಿಯಲಿ, ಕನ್ನಡದಲ್ಲಿ ಕಲೆ ಮತ್ತು ವಿಜ್ಞಾನ ಕಲಿತು ಆತ್ಮಗೌರವ ಹಾಗೂ ವೈಚಾರಿಕತೆ ಬೆಳೆಸಿಕೊಳ್ಳಲಿ” ಎಂದು ಸಾರಿದ ಮಹಾಚೇತನ ಕುವೆಂಪು ಎಂದು ಬೇವಿನಹಳ್ಳಿ ಅಭಿಪ್ರಾಯಪಟ್ಟರು.

ಈ ವಿಶೇಷ ಸುದ್ದಿ ಓದಿದ್ದೀರಾ?ಶೋಷಿತರ ಗಟ್ಟಿ ಧ್ವನಿ ಎನ್ ರಾಚಯ್ಯ ‘ಸಮಾನತೆಯ ಸಮಾಜʼದ ಕನಸುಗಾರ….

ಹಿರಿಯ ಪತ್ರಕರ್ತ ಕೆ. ನರಸಿಂಹಮೂರ್ತಿ ವಿಚಾರಗೋಷ್ಠಿಯನ್ನು ಉದ್ಘಾಟಿಸಿದರು. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ರಾಜ್ಯ ಉಪಾಧ್ಯಕ್ಷ ಟಿ. ಸತೀಶ್ ಜವರೇಗೌಡ ಆಶಯ ನುಡಿಗಳನ್ನಾಡಿದರು. ಛಾಯಾದೇವಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಅಂತೋಣಿ ಪೌಲ್ ರಾಜ್, ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ವಾಸು ಸಮುದ್ರವಳ್ಳಿ, ಜಿಲ್ಲಾ ಘಟಕದ ಅಧ್ಯಕ್ಷ ಬಸಪ್ಪ ಸಿ. ಸಾಲುಂಡಿ, ರಂಗಕರ್ಮಿ ಚಂದ್ರು ಮಂಡ್ಯ, ಯುವ ಕವಿ ಜಿ. ರವೀಂದ್ರ ಕುಮಾರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...