ಜೋಯಿಡಾ | ಪನ್ಸೋಲಿ ಆನೆ ಬಿಡಾರಕ್ಕೆ ತಾತ್ಕಾಲಿಕ ನಿರ್ಬಂಧ: ಸಾರ್ವಜನಿಕ ಪ್ರವೇಶ, ಆನೆ ವೀಕ್ಷಣೆ ಸ್ಥಗಿತ

Date:

ಕೊಡಗು ಜಿಲ್ಲೆಯ ದುಬಾರೆ ಆನೆ ಬಿಡಾರದಲ್ಲಿ ಸಂಭವಿಸಿದ ದುರಂತದ ಹಿನ್ನೆಲೆವಾಗಿ, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪನ್ಸೋಲಿ ಆನೆ ಬಿಡಾರಕ್ಕೆ ಸಾರ್ವಜನಿಕ ಪ್ರವೇಶ ಹಾಗೂ ಆನೆ ವೀಕ್ಷಣೆಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

- Advertisement -

ಕಾಳಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಇರುವ ಈ ಪನ್ಸೋಲಿ ಆನೆ ಬಿಡಾರದಲ್ಲಿ ಇತ್ತೀಚಿನ ಘಟನೆಗಳ ಹಿನ್ನೆಲೆ ಸುರಕ್ಷತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ ಆದೇಶ ಬರುವವರೆಗೆ ಪ್ರವಾಸಿಗರಿಗೆ ಆನೆಗಳನ್ನು ವೀಕ್ಷಿಸುವ ಅವಕಾಶ ಇರುವುದಿಲ್ಲ ಎಂದು ಸಂಬಂಧಿತ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಕುರಿತು ಕಾಳಿ ಹುಲಿ ಸಂರಕ್ಷಿತ ಪ್ರದೇಶದ ವಲಯ ಅರಣ್ಯಾಧಿಕಾರಿ (ಆರ್.ಎಫ್.ಓ) ರವಿ ಮಾಹಿತಿ ನೀಡಿ, ಸಾರ್ವಜನಿಕರ ಸುರಕ್ಷತೆ ಹಾಗೂ ಆನೆಗಳ ನಿರ್ವಹಣಾ ಹಿತದೃಷ್ಟಿಯಿಂದ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದ್ದಾರೆ. ಪನ್ಸೋಲಿ ಆನೆ ಬಿಡಾರದಲ್ಲಿ ಪ್ರಸ್ತುತ ಐದು ಆನೆಗಳು ಇದ್ದು, ಪ್ರವಾಸಿಗರಿಗೆ ಆನೆ ವೀಕ್ಷಣೆಯ ಜೊತೆಗೆ ಆನೆಗಳ ಪಾಲನೆ, ಚಿಕಿತ್ಸೆ ಹಾಗೂ ತರಬೇತಿ ಸಂಬಂಧಿತ ಚಟುವಟಿಕೆಗಳನ್ನು ಪರಿಚಯಿಸಲಾಗುತ್ತಿತ್ತು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಬುಡಕಟ್ಟು ಜನರ ಮನೆಬಾಗಿಲಿಗೆ ಸರ್ಕಾರದ ಸೌಲಭ್ಯ; ಜನ್ ಭಾಗೀದಾರ್ ಅಭಿಯಾನ ಆರಂಭ

ಇತ್ತೀಚಿನ ದಿನಗಳಲ್ಲಿ ಈ ಪ್ರದೇಶ ಪ್ರವಾಸಿಗರ ಮೆಚ್ಚಿನ ತಾಣವಾಗಿ ಗುರುತಿಸಿಕೊಂಡಿತ್ತು. ಇದೀಗ ಭದ್ರತಾ ಕ್ರಮದ ಭಾಗವಾಗಿ ತಾತ್ಕಾಲಿಕವಾಗಿ ಪ್ರವೇಶ ನಿರ್ಬಂಧ ಹೇರಲಾಗಿದ್ದು, ಪರಿಸ್ಥಿತಿ ಸಮೀಕ್ಷೆ ನಡೆಸಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...