ಜೋಯಿಡಾ | ಚಾಪೋಲಿ ಘಟ್ಟದಲ್ಲಿ ಎರಡು ಸಾರಿಗೆ ಬಸ್‌ಗಳ ಮುಖಾಮುಖಿ ಡಿಕ್ಕಿ; 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Date:

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪೋಲಿ ಘಟ್ಟದ ಬಳಿ ಕಾರವಾರ–ಜೋಯಿಡಾ ರಸ್ತೆಯಲ್ಲಿ ಎರಡು ರಾಜ್ಯ ಸಾರಿಗೆ ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

- Advertisement -

ಮಾಹಿತಿಯ ಪ್ರಕಾರ, ಬೆಳಗಾವಿಯಿಂದ ಅಂಕೋಲಾ ಕಡೆಗೆ ಸಂಚರಿಸುತ್ತಿದ್ದ ಬಸ್ ಹಾಗೂ ಉಳವಿಯಿಂದ ಇಚಲಕರಂಜಿ ಕಡೆಗೆ ತೆರಳುತ್ತಿದ್ದ ಮತ್ತೊಂದು ಬಸ್ ಚಾಪೋಲಿ ಘಟ್ಟ ಪ್ರದೇಶದಲ್ಲಿ ಪರಸ್ಪರ ಡಿಕ್ಕಿ ಹೊಡೆದಿವೆ. ಅಪಘಾತದ ವೇಳೆ ಎರಡೂ ಬಸ್‌ಗಳಲ್ಲಿ ಒಟ್ಟು 150ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಗಾಯಗೊಂಡವರಲ್ಲಿ ಜೋಯಿಡಾದ ಬಿಜಿವಿಎಸ್ ಪಿಯು ಕಾಲೇಜು ಹಾಗೂ ದಾಂಡೇಲಿ ಭಾಗದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳೂ ಸೇರಿದ್ದಾರೆ ಎನ್ನಲಾಗಿದೆ. ಅಪಘಾತದ ತಕ್ಷಣ ಸ್ಥಳೀಯರು ಹಾಗೂ ಅಧಿಕಾರಿಗಳು ರಕ್ಷಣಾ ಕಾರ್ಯ ಕೈಗೊಂಡು ಗಾಯಾಳುಗಳನ್ನು ಜೋಯಿಡಾ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಚಿವರ ಹೆಜ್ಜೆ ಗುರುತು ಕಾಣದ ಉತ್ತರ ಕನ್ನಡ: ಆಡಳಿತದ ಅಂತರವೇ ಅಭಿವೃದ್ಧಿಗೆ ಅಡ್ಡಿ

Advertisements

ಗಂಭೀರವಾಗಿ ಗಾಯಗೊಂಡ ಕೆಲವರನ್ನು ಹೆಚ್ಚಿನ ಚಿಕಿತ್ಸೆಗೆ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಹಾಗೂ ಧಾರವಾಡದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮಂಜುನಾಥ ಮುನ್ನೊಳ್ಳಿ, ಪೊಲೀಸ್ ಉಪನಿರೀಕ್ಷಕ ಜಗದೀಶ ಎನ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭೇಟಿ ನೀಡಿ ನಂತರ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ

ಈ ಕುರಿತು ಜೋಯಿಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರವಾದ ಕಾರಣ ಏನು ಎಂಬುದು ತನಿಖೆ ನಂತರ ತಿಳಿದು ಬರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...