ಕ್ರಿಕೆಟ್ ಅಂಗಳದಲ್ಲಿ ಪತ್ರಕರ್ತರ ಮೇಲುಗೈ: ಪೊಲೀಸರ ವಿರುದ್ಧ ಎರಡೂ ಪಂದ್ಯಗಳಲ್ಲೂ ಭರ್ಜರಿ ಜಯ

Date:

ದಿನನಿತ್ಯದ ಕೆಲಸದ ಒತ್ತಡದ ನಡುವೆಯೂ ಬಿಡುವು ಮಾಡಿಕೊಂಡು ಮೈಸೂರು ಪತ್ರಕರ್ತರು ಹಾಗೂ ಜಿಲ್ಲಾ ಪೊಲೀಸ್ ಸಿಬ್ಬಂದಿ ಶನಿವಾರ ಕ್ರಿಕೆಟ್ ಅಂಗಳದಲ್ಲಿ ಮುಖಾಮುಖಿಯಾದರು. ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಡಿಎಆರ್ ಮೈದಾನದಲ್ಲಿ ನಡೆದ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮೈಸೂರು ಪತ್ರಕರ್ತರ ತಂಡ ಎರಡೂ ಪಂದ್ಯಗಳನ್ನು ಗೆಲ್ಲುವ ಮೂಲಕ ಮೇಲುಗೈ ಸಾಧಿಸಿತು.

- Advertisement -

ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದ ಪೊಲೀಸ್ ತಂಡ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 8 ಓವರ್‌ಗಳಲ್ಲಿ 73 ರನ್‌ಗಳಿಸಿತು. ಗುರಿ ಬೆನ್ನಟ್ಟಿದ ಮೈಸೂರು ಪತ್ರಕರ್ತರ ತಂಡ ಸಂಘಟಿತ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 5 ಓವರ್‌ಗಳಲ್ಲಿಯೇ ಗುರಿ ತಲುಪುವ ಮೂಲಕ ಭರ್ಜರಿ ಜಯ ದಾಖಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಬಲಪಂಥೀಯ ರಾಜಕಾರಣದ ಗುಪ್ತ ಕಾರ್ಯಸೂಚಿ

ಕ್ಷೇತ್ರ ಮರುವಿಂಗಡಣೆ ಕೇವಲ ಲೋಕಸಭಾ ಸ್ಥಾನಗಳ ಹೆಚ್ಚಳವಲ್ಲ; ಅದು ದೇಶದ ರಾಜಕೀಯ ಅಧಿಕಾರದ ಹಂಚಿಕೆ, ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ನ್ಯಾಯದ ಭವಿಷ್ಯವನ್ನು ನಿರ್ಧರಿಸುವ ಪ್ರಕ್ರಿಯೆ. ಕ್ಷೇತ್ರಗಳ ಗಡಿ ಬದಲಾವಣೆಯಿಂದ ಅಹಿಂದ, ದಲಿತ,...

ಗುಳೇದಗುಡ್ಡ | ತಾಲೂಕಾಗಿ ಹತ್ತು ವರ್ಷ ಕಳೆದರೂ ಭೂ...

ಗುಳೇದಗುಡ್ಡ ತಾಲೂಕು ರಚೆನೆಯಾಗಿ ಹತ್ತು ವರ್ಷ ಕಳೆದಿದೆ. ತಾಲೂಕು ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳಿಗೆ ಸಂಬಂಧಿಸಿದ ಭೂದಾಖಲೆಗಳು ಬಾದಾಮಿ ತಹಸೀಲ್ದಾರ್ ಕಚೇರಿ ಮತ್ತು ಗದಗ ರಸ್ತೆಯ ಎಪಿಎಂಸಿ ಸಮೀಪದ ಕಚೇರಿಯಲ್ಲಿ ಸಂಗ್ರಹವಾಗಿವೆ....

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

ಎರಡನೇ ಪಂದ್ಯದಲ್ಲಿಯೂ ಪತ್ರಕರ್ತರ ತಂಡ ತನ್ನ ಗೆಲುವಿನ ಓಟ ಮುಂದುವರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಪತ್ರಕರ್ತರ ತಂಡ ಆರಂಭದಲ್ಲಿ ನಿಧಾನಗತಿಯ ಆಟವಾಡಿದರೂ ಕೊನೆಯ ಓವರ್‌ಗಳಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿ ನಿಗದಿತ 8 ಓವರ್‌ಗಳಲ್ಲಿ 77 ರನ್‌ಗಳ ಉತ್ತಮ ಮೊತ್ತ ಕಲೆಹಾಕಿತು.

ಈ ಗುರಿ ಬೆನ್ನಟ್ಟಿದ ಜಿಲ್ಲಾ ಪೊಲೀಸ್ ತಂಡ ಪತ್ರಕರ್ತರ ಚಾಣಾಕ್ಷ ಬೌಲಿಂಗ್ ಎದುರು ರನ್ ಗಳಿಸಲು ಪರದಾಡಿತು. ನಿಗದಿತ 8 ಓವರ್‌ಗಳಲ್ಲಿ 40 ರನ್‌ಗಳಿಗೆ ಸೀಮಿತವಾಗಿ ಸೋಲೊಪ್ಪಿಕೊಂಡಿತು. ಈ ಮೂಲಕ ಮೈಸೂರು ಪತ್ರಕರ್ತರ ತಂಡ ಸತತ ಎರಡು ಪಂದ್ಯಗಳಲ್ಲೂ ಗೆಲುವು ಸಾಧಿಸಿ ಸಂಭ್ರಮಿಸಿತು.

ಈ ವಿಶೇಷ ವರದಿ ಓದಿದ್ದೀರಾ? ಕಾಡಿನ ಮಕ್ಕಳೇ ವನ್ಯಜೀವಿಗಳ ನಿಜವಾದ ಬಂಧುಗಳು: ಆದಿವಾಸಿಗಳ ಜ್ಞಾನ, ಸಹಬಾಳ್ವೆ-ಅರಣ್ಯ ಸಂರಕ್ಷಣೆಯ ಭವಿಷ್ಯ

ಜಿಲ್ಲಾ ಪೊಲೀಸ್ ತಂಡವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮುನ್ನಡೆಸಿದರೆ, ಮೈಸೂರು ಜಿಲ್ಲಾ ಪತ್ರಕರ್ತರ ತಂಡಕ್ಕೆ ಕೆ.ಪಿ. ನಾಗರಾಜ್ ನಾಯಕತ್ವ ವಹಿಸಿದ್ದರು. ಎರಡೂ ತಂಡಗಳ ಆಟಗಾರರು ಕ್ರೀಡಾಸ್ಫೂರ್ತಿಯಿಂದ ಪಂದ್ಯಗಳಲ್ಲಿ ಪಾಲ್ಗೊಂಡರು.

ಈ ವಿಶೇಷ ವರದಿ ಓದಿದ್ದೀರಾ? ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ ಹೊಸ ಹಿತಾಸಕ್ತಿಗಳಿಗೆ ಅವಕಾಶವೇ?

ದಿನನಿತ್ಯದ ವೃತ್ತಿಜೀವನದಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಪೊಲೀಸರು ಮತ್ತು ಪತ್ರಕರ್ತರ ನಡುವೆ ಸ್ನೇಹ, ಸೌಹಾರ್ದತೆ ಹಾಗೂ ಪರಸ್ಪರ ಬಾಂಧವ್ಯ ಬೆಸೆಯಲು ಈ ಕ್ರೀಡಾಕೂಟ ವೇದಿಕೆಯಾಯಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಚಿನ್ನಾಭರಣ ಕಳವು : ಕಳ್ಳನ ಬಂಧನ

ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಕಳ್ಳತನ ಮಾಡುತ್ತಿದ್ದ 23 ವರ್ಷದ ಯುವಕನನ್ನು...

ಬಾಗಲಕೋಟೆ | ಸರ್ವರ್‌ ಸಮಸ್ಯೆ : ಪಡಿತರಕ್ಕಾಗಿ ನಡುರಾತ್ರಿವರೆಗೂ ಕಾದ ಗ್ರಾಮಸ್ಥರು

ಬಡ ಕುಟುಂಬಗಳಿಗೆ ಸಿಗಬೇಕಾದ ಪಡಿತರ ಪಡೆಯುವುದೇ ಗ್ರಾಮಸ್ಥರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ....

ಬಾಗಲಕೋಟೆ | ರಸ್ತೆ ಅಪಘಾತ : ಗಾಯಗೊಂಡಿದ್ದ ಯುವಕ ಸಾವು

ರಬಕವಿ-ಬನಹಟ್ಟಿ: ಮಹಾಲಿಂಗಪುರ–ರಬಕವಿ ಮಧ್ಯೆ ಕವಟಿ ಅವರ ತೋಟದ ಸಮೀಪ ಸಂಭವಿಸಿದ ರಸ್ತೆ...

ಬಾಗಲಕೋಟೆ | ರೈತರು ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ – ಗುರುಪಾದ ಶ್ರೀಗಳು

ಕೃಷಿ ಕ್ಷೇತ್ರದಲ್ಲಿ ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ರೈತರು ಹೊಂದಿಕೊಳ್ಳುವುದರ ಜೊತೆಗೆ ಸುಧಾರಿತ ತಳಿಗಳ...