ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಜು.18ರಂದು ಪ್ರತಿಭಟನೆ: ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ

Date:

Advertisements

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ, ರೈತರ ಆತ್ಮಹತ್ಯೆ ತಡೆಗಟ್ಟಲು ಆಗ್ರಹಿಸಿ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜು.18ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.

ಮೈಸೂರಿನ ಜಲದರ್ಶಿನಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ರಾಜ್ಯದ ಜನತೆ ಬಹಳ ನಿರೀಕ್ಷೆಯೊಂದಿಗೆ ಕೋಮುವಾದಿ, ಪ್ರಜಾಪ್ರಭುತ್ವ ವಿರೋಧಿ, ಭ್ರಷ್ಟಾಚಾರದಲ್ಲಿ ಮುಳುಗಿದ್ದ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದರು. ವಿಧಾನಸೌಧದಲ್ಲಿ ಪಕ್ಷದ ಆಡಳಿತ ಬದಲಾಗಿದೆ. ಅಧಿಕಾರ ನಡೆಸುತ್ತಿರುವವರ ಮುಖಗಳು ಬದಲಾಗಿವೆ. ಆದರೆ ಯಥಾಸ್ಥಿತಿ ಆಡಳಿತ ಮುಂದುವರೆಯುತ್ತಿದೆ” ಎಂದು ಕಿಡಿಕಾರಿದರು.

ರೈತ ಸಂಘ 1 3

“ಈ ಸರ್ಕಾರ ಬಂದು ಒಂದು ವರ್ಷದ ಅವಧಿಯಲ್ಲೇ ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟಿದ್ದ 187 ಕೋಟಿ ಹಣ ದುರುಪಯೋಗದ ಹಗರಣದ ಆರೋಪಕ್ಕೆ ಒಳಗಾಗಿದೆ. ಎಲ್ಲ ಸರ್ಕಾರಿ ಕಛೇರಿಗಳಲ್ಲಿ ಲಂಗು ಲಗಾಮಿಲ್ಲದೆ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಭೂ ಮಾಫಿಯಗಳ ಅಕ್ರಮಗಳು ನಿರಂತರವಾಗಿ ಸಾಗುತ್ತಲೆ ಇವೆ. ರೈತರ ಆತ್ಮಹತ್ಯೆ ಸರಣಿ ಮುಂದುವರೆಯುತ್ತಲೆ ಇದೆ” ಎಂದು ಬಡಗಲಪುರ ನಾಗೇಂದ್ರ ತಿಳಿಸಿದರು.

Advertisements

ರೈತಪರ ನೀತಿಗಳನ್ನು ರೂಪಿಸಲು, ರೈತರ ಆತ್ಮಹತ್ಯೆ ತಡೆಗಟ್ಟಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಜುಲೈ 18ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಂಡಿದೆ. ರೈತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಹೊಸೂರು ಕುಮಾರ್, ಹೊಸಕೋಟೆ ಬಸವರಾಜು,ಪ್ರಸನ್ನ ಏನ್ ಗೌಡ,ನೇತ್ರಾವತಿ ಉಪಸ್ಥಿತರಿದ್ದರು.

ಹಕ್ಕೊತ್ತಾಯಗಳು:

  1. ರೈತರು ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್ ಸಂಪರ್ಕ ಪಡೆಯಲು ಸರ್ಕಾರ ವೆಚ್ಚವನ್ನು ಭರಿಸಬೇಕು.
  2. ಕರ ನಿರಾಕರಣೆ ಚಳುವಳಿಯಲ್ಲಿ ರೈತ ಕುಟುಂಬದವರು ಉಳಿಸಿಕೊಂಡಿರುವ ಗೃಹ ವಿದ್ಯುತ್ ಬಾಕಿಯನ್ನು ಮನ್ನಾ ಮಾಡಬೇಕು.
  3. ಕಳೆದ ವರ್ಷ ಏಪ್ರಿಲ್ ನಿಂದ ಇದುವರೆಗೆ 1182 ರೈತರು ಆತ್ಮಹತ್ಯೆಗೆ ಒಳಗಾಗಿದ್ದಾರೆ. ಈ ಆತ್ಮಹತ್ಯೆಗಳಲ್ಲಿ ಯುವಕರು ಹೆಚ್ಚು ಒಳಗಾಗಿರುವುದು ಆತಂಕಕ್ಕೀಡು ಮಾಡಿದೆ. ಸರ್ಕಾರ ರೈತರ ಆತ್ಮಹತ್ಯೆ ತಡೆಗಟ್ಟಲು ರೈತಪರ ಕಾರ್ಯಕ್ರಮಗಳನ್ನು ರೂಪಿಸಿ, ರೈತ ಸಮುದಾಯಕ್ಕೆ ಅತ್ಮಸ್ಥೆರ್ಯ ತುಂಬಬೇಕು. ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಕೃಷಿ ಬೆಲೆ ಆಯೋಗವನ್ನು ಸಬಲೀಕರಣಗೊಳಿಸಬೇಕು. ರಾಜ್ಯ ಸರ್ಕಾರವೇ ಕೃಷಿ ಉತ್ಪನ್ನಗಳಿಗೆ ಎಂಎಸ್ಪಿ ನಿಗಧಿ ಮಾಡಿ ಖರೀದಿಸಬೇಕು. ಹಿಂದೆಂದೂ ಕಂಡರಿಯದ ಬರಗಾಲವನ್ನು ರಾಜ್ಯ ಎದುರಿಸಿದೆ. ಇಂತಹ ಸಂದರ್ಭದಲ್ಲೂ ಬ್ಯಾಂಕುಗಳು ಸಾಲ ಬಾಕಿ ವಸೂಲಿಗಾಗಿ ರೈತರಿಗೆ ಕಿರುಕುಳ ನೀಡುತ್ತಿವೆ. ಇದನ್ನು ತಪ್ಪಿಸಿ ರೈತರ ರಕ್ಷಣೆಗೆ ಬರಬೇಕು.
  4. ರೈತರ ಎಲ್ಲಾ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆಯನ್ನು ಗ್ರಾಮ ಮಟ್ಟದಲ್ಲಿ ಬೆಳೆಹಾನಿ ನಿರ್ಧರಿಸಬೇಕು. ವಿಮಾ ಕಂಪನಿಗಳು ಉಳಿಸಿಕೊಂಡಿರುವ ಬಾಕಿಯನ್ನು ರೈತರ ಖಾತೆ ಕೂಡಲೇ ಹಾಕಬೇಕು.
  5. ಫಸಲು ಪಹಣಿ ದುರಸ್ಥಿ, ಪಕ್ಕಾ ಪೋಡು,ಹದ್ದುಬಸ್ತು ಶುಲ್ಕ ದುಬಾರಿಯಾಗಿದ್ದು, ಅದನ್ನು ಕೂಡಲೆ ಇಳಿಸಬೇಕು.
  6. ರೈತರಿಂದ ಖರೀದಿ ಕೇಂದ್ರದ ಮೂಲಕ ಜೋಳ, ರಾಗಿ ಇತ್ಯಾದಿ ಉತ್ಪನ್ನಗಳನ್ನು ಖರೀದಿ ಮಾಡಿದ್ದು, ಇನ್ನೂ ರೈತರಿಗೆ ಹಣ ಪಾವತಿಯಾಗಿಲ್ಲ ಕೂಡಲೇ ಈ ಹಣವನ್ನು ರೈತರ ಖಾತೆಗೆ ಜಮಾ ಮಾಡಬೇಕು.
  7. ಬರ ಪರಿಹಾರದ ಹಣ, ವಿಮಾ ಪರಿಹಾರದ ಹಣವನ್ನೂ ಸಹ ಬ್ಯಾಂಕ್‌ನವರು ಸಾಲಕ್ಕಾಗಿ ಜಮಾ ಮಾಡಿಕೊಳ್ಳುತ್ತಿದ್ದಾರೆ. ಬ್ಯಾಂಕ್‌ನವರಿಗೆ ಸೂಕ್ತ ನಿರ್ದೇಶನಗಳನ್ನು ನೀಡಿ ಇದನ್ನು ತಪ್ಪಿಸಬೇಕು.
  8. ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆ ಕಿರುಕುಳ ತಪ್ಪಿಸಿ ಸಾಗುವಳಿ ಮಾಡುತ್ತಿರುವ ಎಲ್ಲಾ ರೈತರಿಗು ಪಟ್ಟಾ ನೀಡಬೇಕು.
  9. ಕಾಡು ಪ್ರಾಣಿಗಳಿಂದ ಹಾಳಾದ ಅಸ್ತಿ, ಪ್ರಾಣ ಹಾನಿ, ನಷ್ಟವಾದ ಬೆಳೆಗಳಿಗೆ ವೈಜ್ಞಾನಿಕ ನಷ್ಟ ಪರಿಹಾರವನ್ನು ತುಂಬಿಕೊಡಬೇಕು ಮತ್ತು ರೈತರ ಜಮೀನಿನಲ್ಲಿ ಬೆಳೆಯುವ ಸಾಗುವನಿ ಕಡಿತ ಮತ್ತು ಸಾಗಾಣಿಕೆ ಪ್ರಕ್ರಿಯೆಯನ್ನು ಸರಳಗೊಳಿಸಬೇಕು.
  10. ಕಬ್ಬು ಬೆಳೆಗಾರರಿಗೆ ಕಾರ್ಖಾನೆಗಳು ಟನ್ ಒಂದಕ್ಕೆ 150 ರೂ ಪಾವತಿಸಬೇಕೆಂದು ಹಿಂದಿನ ಸರ್ಕಾರ ತೀರ್ಮಾನಿಸಿದ್ದು, ಇದಕ್ಕಿರುವ ತಾಂತ್ರಿಕ ತೊಂದರೆಗಳನ್ನು ಕೂಡಲೆ ನಿವಾರಿಸಿ ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರ ಎಸ್ಎಪಿ ಘೋಷಿಸಬೇಕು.
  11. ಸರ್ಕಾರ ಮಾತಿನಂತೆ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಮತ್ತು ಗೋಹತ್ಯೆ ನಿಷೇಧ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು.
  12. ಕಂದಾಯಬೀಳು, ಕ್ರಯದಬೀಳು ರೇಸ್ಟೋರ್ ಗೆ ಅವಕಾಶ ಕಲ್ಪಿಸಬೇಕು.
  13. ಕೆ ಆರ್ ಎಸ್ ಬಳಿ ಟ್ರಯಲ್ ಬ್ಲಾಸ್ಟ್ ಮಾಡಬಾರದು. ಜಲಾಶಯದ ಸುತ್ತಾಮುತ್ತಾ ಗಣಿಗಾರಿಕೆ ನಿಷೇಧಿಸಿ ಅಣೆಕಟ್ಟನ್ನು ರಕ್ಷಿಸಬೇಕು.
  14. ಮುಡಾ ಹಗರಣಕ್ಕೆ ಸೂಕ್ತ ಕ್ರಮವಹಿಸಿ ತಪಿತಸ್ಥರು ಯಾರು ಭಾಗಿಯಾಗಿದ್ದರೂ ಅವರ ವಿರುದ್ಧ ನಿಷ್ಪಕ್ಷವಾಗಿ ಕ್ರಮ ಕೈಗೊಳ್ಳಬೇಕು.
  15. ಕಾವೇರಿ ಜಲಾಶಯದಲ್ಲಿ ನೀರಿನ ಶೇಖರಣೆ ಕಡಿಮೆ ಇರುವುದರಿಂದ ನೀರು ಹರಿಸಬಾರದು.
  16. ಮೈಸೂರು ತಾ ಕೋಚನಹಳ್ಳಿ ರೈತರಿಗೆ ಮೋಸ ಮಾಡಿರುವ ಭೂಮಾಫಿಯ ಕುಳಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಿ ರೈತರಿಗೆ ನ್ಯಾಯ ದೊರಕಿಸಬೇಕು.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X