ಬೆಂಗಳೂರು | ಒಂದೇ ದಿನ ಮೆಟ್ರೋದಲ್ಲಿ 9 ಲಕ್ಷ ಜನ ಪ್ರಯಾಣ!

Date:

ನಿನ್ನೆ (ಜೂ.4) ವಿಧಾನ ಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಹಿನ್ನೆಲೆ ಲಕ್ಷಾಂತರ ಮಂದಿ ಕ್ರೀಡಾಂಗಣ, ವಿಧಾನ ಸೌಧದ ಬಳಿ ಜಮಾಯಿಸಿದ್ದರು. ಕಾರ್ಯಕ್ರಮಕ್ಕೆ ತೆರಳಲು ಹಾಗೂ ಕಾರ್ಯಕ್ರಮ ಮುಗಿಯುತ್ತಿದ್ದಂತೆ ವಾಪಸ್‌ ತೆರಳಲು ಬಹುತೇಕರು ಮೆಟ್ರೋವನ್ನೇ ಬಳಸಿದ್ದು, ಒಟ್ಟು 9,66,732 ಜನ ಪ್ರಯಾಣ ಮಾಡಿದ್ದಾರೆ ಎಂದು ಬಿಎಂಆರ್‌ಸಿಎಲ್‌ ಹೇಳಿದೆ.

- Advertisement -

ಕಬ್ಬನ್ ಪಾರ್ಕ್, ವಿಧಾನಸೌಧ, ಎಂಜಿ ರಸ್ತೆ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಸೇರಿದಂತೆ ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ (ಸಿಬಿಡಿ) ನಿಲ್ದಾಣಗಳಲ್ಲಿ ಅತಿ ಹೆಚ್ಚು ಪ್ರಯಾಣಿಕರು ಸಂಚರಿಸಿದ್ದಾರೆ. ಮಾರ್ಗ 1 ರಲ್ಲಿ 4,78,334, ಮಾರ್ಗ 2 ರಲ್ಲಿ 2,84,674 ಹಾಗೂ ಕೆಂಪೇಗೌಡ (ಕೆಜಿಡಬ್ಲ್ಯೂಎ) ದಲ್ಲಿನ ಇಂಟರ್‌ಚೇಂಜ್‌ನಲ್ಲಿ 2,03,724 ಪ್ರಯಾಣಿಕರು ಪ್ರಯಾಣಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇದನ್ನೂ ಓದಿ: ಬೆಂಗಳೂರು | ನಟ ಕಮಲ್‌ ಹಾಸನ್‌ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ; ಇಬ್ಬರ ವಿರುದ್ಧ ಎಫ್‌ಐಆರ್‌

ನಗರದ ಹಲವು ರಸ್ತೆಗಳು ಬಂದ್‌ ಆಗಿದ್ದರಿಂದ ಮತ್ತು ವಾಹನ ಸಂಚಾರ ಸ್ಥಗಿತಗೊಂಡಿದ್ದರಿಂದ ಅನಿವಾರ್ಯವಾಗಿ ಬೃಹತ್ ಪ್ರಮಾಣದಲ್ಲಿ ಮೆಟ್ರೋ ಅವಲಂಬಿಸಿದ್ದಾರೆ. ಅಂಧಾಭಿಮಾನಿಗಳ ಅತಿರೇಕ, ಕ್ರಿಕೆಟ್‌ ಅಸೋಸಿಯೇಷನ್‌ ಹಾಗೂ ಸರ್ಕಾರದ ಭದ್ರತಾ ವೈಫಲ್ಯ, ಆಯೋಜನೆಯ ಅವ್ಯವಸ್ಥೆಗಳಿಂದ ಕಾರ್ಯಕ್ರಮದ ವೇಳೆ ಜನಸಂದಣಿ ಉಂಟಾಗಿ ಕಾಲ್ತುಳಿತ ದುರಂತ ಸಂಭವಿಸಿದೆ. 11 ಮಂದಿ ದುರ್ಮರಣ ಹೊಂದಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿದ್ದವರ ಕುಟುಂಬಗಳಿಗೆ ಸರ್ಕಾರ ಪರಿಹಾರವನ್ನೇನೋ ಘೋಷಿಸಿದೆ. ಆದರೆ, ಕಾರ್ಯಕ್ರಮ ಆಯೋಜನೆಗೆ ಮುಂಚೆ ಇದೇ ಬದ್ಧತೆ, ಕೊಂಚ ತಾಳ್ಮೆ ವಹಿಸಿದ್ದರೆ ಈ ಘೋರ ಘಟಿಸುತ್ತಿರಲಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರ್ಮಿಕರ ಉಳಿತಾಯಕ್ಕೆ ಕನ್ನ ಹಾಕಿದ ಕೇಂದ್ರದ ಹೊಸ ಪಿಎಫ್ ನೀತಿ: ರಾಜ್ಯಾದ್ಯಂತ ಭುಗಿಲೆದ್ದ ಆಕ್ರೋಶ

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ನೂತನ ಭವಿಷ್ಯ ನಿಧಿ (ಪಿಎಫ್) ಹಿಂಪಡೆಯುವಿಕೆಯ...

ಹುಬ್ಬಳ್ಳಿ | ಹೊರಗುತ್ತಿಗೆ ನೌಕರರಿಗೂ ಸೇವಾ ಭದ್ರತೆ ನೀಡಿ: ಜಗದೀಶ ಶೆಟ್ಟರ್

ಸರ್ಕಾರದ ವಿವಿಧ ಇಲಾಖೆಗಳಲ್ಲಿ ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ಹಾಗೂ ಗುತ್ತಿಗೆ ನೌಕರರಿಗೆ...

ಬರದಿಂದ ಕಂಗೆಟ್ಟ ರೈತರಿಗೆ ನೆರವಾಗಿ: ಕೇಂದ್ರಕ್ಕೆ ಕಾಶಪ್ಪನವರ ಒತ್ತಾಯ

ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿರುವ ಸಂದರ್ಭದಲ್ಲಿ ರೈತರಿಗೆ ಅಗತ್ಯ...

ಮತದಾರರೇ ಎಚ್ಚರ, ನಿಮ್ಮ ಬೂತ್‌ನಲ್ಲಿ ಫಾರ್ಮ್-7 ಅರ್ಜಿ ಸಲ್ಲಿಕೆಯಾಗಿದೆಯೇ ಪರಿಶೀಲಿಸಿ: ಸಿಎಂ ಡಿಕೆಶಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಲು ಸಲ್ಲಿಕೆಯಾಗಿರುವ ಫಾರ್ಮ್-7 ಅರ್ಜಿಗಳ ಕುರಿತು ಎಚ್ಚರಿಕೆ...