ಬೀದರ್‌ | ಕ.ಕ. ವಿಮೋಚನೆಗೆ ಹೋರಾಡಿದ ಸೇನಾನಿಗಳ ಸ್ಮಾರಕ ನಿರ್ಮಿಸಿ: ಗುರುನಾಥ ವಡ್ಡೆ

Date:

Advertisements
  • ಹೈ-ಕ ಪ್ರದೇಶ 1948 ಸೆಪ್ಟೆಂಬರ್‌ 17 ರಂದು ನಿಜಾಂ ಆಡಳಿತದಿಂದ ವಿಮೋಚನೆ
  • ಸಿಎಂ ಸಿದ್ದರಾಮಯ್ಯ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಅವರಿಗೆ ಮನವಿ

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಸಂದರ್ಭದಲ್ಲಿ ಹೈದ್ರಾಬಾದ-ಕರ್ನಾಟಕ (ಕಲ್ಯಾಣ ಕರ್ನಾಟಕ) ವಿಮೋಚನೆಗಾಗಿ ಹೋರಾಡಿದ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಸ್ವತಂತ್ರ ಸೇನಾನಿಗಳ ಸ್ಮಾರಕಗಳನ್ನು ನಿರ್ಮಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಆಗ್ರಹಿಸಿದ್ದಾರೆ.

ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಹಾಗೂ ಮಂಡಳಿ ಕಾರ್ಯದರ್ಶಿಗಳಿಗೆ ಹಕ್ಕೊತ್ತಾಯ ಪತ್ರ ಬರೆದಿದ್ದಾರೆ.

“ಭಾರತ ದೇಶವು 15ನೇ ಆಗಸ್ಟ್ 1947 ಕ್ಕೆ ಸ್ವತಂತ್ರಗೊಂಡರೂ ನಿಜಾಮನ ಆಳ್ವಿಕೆಯಲ್ಲಿದ್ದ ಹೈದ್ರಾಬಾದ-ಕರ್ನಾಟಕ ಪ್ರದೇಶವು 1948 ಸೆಪ್ಟೆಂಬರ್‌ 17 ರಂದು ವಿಮೋಚನೆಗೊಂಡಿತ್ತು. ಈ ವಿಮೋಚನಾ ಸಂಗ್ರಾಮದಲ್ಲಿ ಈ ಭಾಗದ ಅನೇಕರು ನಿಜಾಮನ ವಿರುದ್ಧ ಹೋರಾಡಿದರು, ಅನೇಕರು ಹುತಾತ್ಮರಾದರು, ಹಲವರು ಜೈಲು ಪಾಲಾದರು. ಈ ಭಾಗದ ಸ್ವತಂತ್ರಕ್ಕೆ ಹೋರಾಡಿದ ಎಲ್ಲಾ ಸ್ವತಂತ್ರ ಹೋರಾಟಗಾರರ ಚರಿತ್ರೆ ಪುಸ್ತಕವನ್ನು ಪ್ರಕಟಿಸುವುದು ಹಾಗೂ ಸ್ವತಂತ್ರ ಸೇನಾನಿಗಳ ಸ್ವಂತ ಗ್ರಾಮದಲ್ಲಿ ಸ್ಮಾರಕಗಳನ್ನು ನಿರ್ಮಿಸುವುದು ಅವಶ್ಯಕವಾಗಿದೆ” ಎಂದು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ರೈತರ ಸಮಸ್ಯೆಗಳಿಗೆ ಸರ್ಕಾರ ಯುದ್ಧೋಪಾದಿಯಲ್ಲಿ ಕ್ರಮಕೈಗೊಳ್ಳಲಿ

“ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಕಲಬುರಗಿಯಿಂದ ಈ ವರ್ಷ ಪೂರ್ತಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಈ ಭಾಗದ ವಿಮೋಚನೆಗಾಗಿ ಹೋರಾಡಿದ ಎಲ್ಲಾ ಹೋರಾಟಗಾರರ ಚರಿತ್ರೆ ಪ್ರಕಟಿಸಬೇಕು ಹಾಗೂ ಅವರ ಸ್ಮಾರಕಗಳನ್ನು ನಿರ್ಮಿಸಬೇಕೆಂದು” ವಡ್ಡೆ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X