ಕಲಬುರಗಿ | ಸೊನ್ನ ಬ್ಯಾರೆಜ್‌ನಿಂದ ಘಾಣಗಾಪುರ ಬ್ಯಾರೆಜ್‌ವರೆಗೆ ನೀರು ಬಿಡುವಂತೆ ಆಗ್ರಹ; 20ನೇ ದಿನಕ್ಕೆ ಕಾಲಿಟ್ಟ ಆಹೋರಾತ್ರಿ ಧರಣಿ

Date:

ನಾರಾಯಣಪುರ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ ಮಾಡಿ ಕಲಬುರಗಿ ಜಿಲ್ಲೆಯ ಅಫಜಲಪುರ ಸೊನ್ನ ಬ್ಯಾರೆಜ್‌ನಿಂದ ಘಾಣಗಾಪುರ ಬ್ಯಾರೆಜ್‌ವರೆಗೆ ನೀರು ಬಿಡಬೇಕೆಂದು ಒತ್ತಾಯಿಸಿ ಗುಡ್ಡೆವಾಡಿ ಗ್ರಾಮದ ಭೀಮಾ ನದಿಯಲ್ಲಿ ಆರಂಭಿಸಿದ್ದ ಆಹೋರಾತ್ರಿ ಧರಣಿ ಇಂದಿಗೆ 20ನೇ ದಿನಕ್ಕೆ ಕಾಲಿಟ್ಟಿದ್ದು, ಅಫಜಲಪುರ ನಗರದ ಬಸವೇಶ್ವರ ಸರ್ಕಲ್‌ನಲ್ಲಿ ರಸ್ತೆ ತಡೆ ಚಳವಳಿ ನಡೆಸುವುದರ ಮೂಲಕ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

“ಅಫಜಲಪುರ ಭೀಮಾ ನದಿ ಬತ್ತಿ ಹೋಗಿದೆ. ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ. ಜನ ಜಾನುವಾರುಗಳು, ಪ್ರಾಣಿ-ಪಕ್ಷಿಗಳಿಗೆ ಕುಡಿಯುವ ನೀರಿಲ್ಲದೆ ಪರದಾಡುವಂತಾಗಿದೆ. ಸ್ಥಳೀಯರು ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಅಫಜಲಪುರ ತಾಲೂಕಿನ ಹಳ್ಳಿಗಳಲ್ಲಿ ಜನರು ಪ್ರಾಣದ ಹಂಗು ತೊರೆದು ಸಾವು ಬದುಕಿನ ಮಧ್ಯದಲ್ಲಿ ಬದುಕು ನಡೆಸುತ್ತಿದ್ದಾರೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಬೀಗರು, ನೆಂಟರು, ಸಂಬಂಧಿಕರು ಬೇರೆ ಊರಿನಿಂದ ಯಾರೂ ಕೂಡಾ ಬರಲಾರದಂತಾಗಿದೆ. ಮದುವೆಯಂತಹ ಕಾರ್ಯಕ್ರಮಗಳನ್ನು ನಡೆಸುವುದು ತುಂಬಾ ಸಂಕಷ್ಟಮಯವಾಗಿದ್ದು, ಜನರು ಚಿಂತಾಜನಕರಾಗಿದ್ದಾರೆ. ಇದಕ್ಕೆ ಮುಂದಾಲೋಚನೆಯಾಗಿ ಅಫಜಲಪುರ ತಾಲೂಕಿನ ಹಳ್ಳಿಗಳಲ್ಲಿ ಮತ್ತು ಜೇವರ್ಗಿ ತಾಲೂಕಿನ ಹಳ್ಳಿಗಳಲ್ಲಿ ಹಾಗೂ ಆಲಮೇಲ ತಾಲೂಕಿನ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಬೆಂಗಳೂರಿಗೆ ಹೋಗಿ ನೀರಾವರಿ ಸಚಿವರಿಗೆ, ಮುಖ್ಯಮಂತ್ರಿಯವರಿಗೆ ಮತ್ತು ಸಾರ್ವಜನಿಕರ ಕುಂದು ಕೊರತೆ ಆಲಿಸುವ ಸ್ಥಳಕ್ಕೆ ಹೋಗಿ ಜಿಲ್ಲಾ ಉಸ್ತುವಾರಿ ಸಚಿವರಿಗೂ ಮನವಿ ಸಲ್ಲಿಸಿದ್ದೆವು ಹಾಗೂ ಹಲವು ಬಾರಿ ಜಿಲ್ಲಾಧಿಕಾರಿ ಗಮನಕ್ಕೂ ತರಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ” ಎಂದು ಆರೋಪಿಸಿದರು.

ಆಕಳು ಸಾವು

“ಸಾರ್ವಜನಿಕರ ಹಿತದೃಷ್ಟಿಯಿಂದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹರಿಸಬೆಕಾಗಿತ್ತು. ಆದರೆ ಈವರೆಗೆ ಸಮಸ್ಯೆ ಬಗೆ ಹರಿಸುವ ಕುರಿತು ಯಾವುದೇ ಕ್ರಮ ಆಗಿಲ್ಲದಿರುವುದನ್ನು ನೋಡಿದರೆ ತುಂಬಾ ಖೇದಕರ ಸಂಗತಿಯಾಗಿದೆ. ಅಫಜಲಪುರ ತಾಲೂಕಿನ ಗುಡ್ಡೆವಾಡಿ ಗ್ರಾಮದಲ್ಲಿ ಈಗಾಗಲೇ ಕುಡಿಯುವ ನೀರಿಲ್ಲದೆ ಉಸುಕಿನಲ್ಲಿ ಕಾಲು ತಿಕ್ಕಿ ಒದ್ದಾಡಿ ಆಕಳು ಸತ್ತು ಹೋಗಿದೆ. ಕುಡಿಯುವ ನೀರಿಲ್ಲದೆ ಜಾನುವಾರುಗಳು ಸಾಯುತ್ತಿವೆ. ಜನರ ಗೋಳಾಟ ಮುಗಿಲು ಮುಟ್ಟಿದೆ. ಮನೆಯಲ್ಲಿರುವ ದನಕರುಗಳು, ಎತ್ತುಗಳು, ಎಮ್ಮೆಗಳು, ಕುರಿಗಳನ್ನು ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರ ಒಕ್ಕಲುತನ ಬೀದಿಪಾಲಾಗುತ್ತಿದೆ. ಕನಿಷ್ಟ ಸೌಜನ್ಯಕ್ಕಾದರೂ ಕರುಣೆ ತೋರದೆ, ಮಾನವೀಯತೆ ಇಲ್ಲದೆ ಇರುವುದು ತುಂಬಾ ದುಃಖಕರ ಸಂಗತಿಯಾಗಿದೆ. ಈಗಲಾದರು ಎಚ್ಚೆತ್ತುಕೊಂಡು ಸೊನ್ನ ಬ್ಯಾರೆಜ್‌ನಿಂದ ಘಾಣಗಾಪುರದವರೆಗೆ ಕುಡಿಯುವ ನೀರು ಬಿಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಏ. 6; ಪ್ರಣಾಳಿಕೆಯಲ್ಲಿ ಪರಿಸರಕ್ಕಾಗಿ ಆದ್ಯತೆ ನೀಡಲು ‘ಪರಿಸರ ಪ್ರಣಾಳಿಕೆ’ ಬಿಡುಗಡೆ

ಈ ಸಂದರ್ಭದಲ್ಲಿ ಸಿದ್ದರಾಮ ದಣ್ಣುರು, ರಮೇಶ್ ಹೂಗಾರ, ಅಶೋಕ ಹೂಗಾರ, ಶರಣಬಸಪ್ಪಾ ಮಮಶೆಟ್ಟಿ, ಬೊಜಪ್ಪಾ ಕೊಳ್ಳುರು, ಲಕ್ಷ್ಮಿ ಕಾಂತ ಕುಮುಸಗಿ, ಸಿಪ್ಪಣ್ಣ ಚಿಲ್ಕವಳಗಿ ಎಲ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಕಲಬುರಗಿ | ₹3 ಸಾವಿರ ಲಂಚ ಸ್ವೀಕಾರ: ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...