ಯಾದಗಿರಿ | ಕಾಕಲವಾರ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣ; ಪಿಡಿಒ ಅಮಾನತು

Date:

Advertisements

ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಮೇಲೆ ಕಾಕಲವಾರ ಗ್ರಾಮ ಪಂಚಾಯಿತಿ ಪಿಡಿಒ ಮಲ್ಲಾರೆಡ್ಡಿ ಅವರ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ, ಜಿಲ್ಲಾ ಪಂಚಾಯತ್ ಸಿಇಓ ಗರಿಮಾ ಪಂವಾರ್ ಶನಿವಾರ ತಡರಾತ್ರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಪಂಚಾಯತಿಯಿಂದ ಗ್ರಾಮಗಳಲ್ಲಿ ಚರಂಡಿ ಸೇರಿದಂತೆ ಸ್ವಚ್ಛತೆಗೆ ಕ್ರಮವಹಿಸಲು ಸೂಚಿಸಿದರೂ ನಿರ್ಲಕ್ಷಿಸಿದ್ದು ಹಾಗೂ ಗ್ರಾಮದಲ್ಲಿ ಅಗತ್ಯ ಜಾಗೃತಿ ಮೂಡಿಸದೆ ಕರ್ತವ ಲೋಪ ಎಸಗಿದ್ದರು.

ತಾಲೂಕು ಪಂಚಾಯತ್ ಇಒ ನೀಡಿದ ವರದಿಯಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಗ್ರಾಮದ ಮೂರು ಕೊಳವೆ ಬಾವಿಗಳ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಅವುಗಳಿಂದ ನೀರು ಸರಬರಾಜು ಮಾಡದಂತೆ ಮತ್ತು ಸೋರಿಕೆಯ ಪೈಪ್ಲೈನ್ ದುರಸ್ತಿಗೆ ಸೂಚಿಸಿದರೂ ಪಿಡಿಒ ಕ್ರಮ ವಹಿಸದೇ ಕರ್ತವ್ಯ ಲೋಪ ಎಸಗಿದ ಹಿನ್ನಲೆ ಪಿಡಿಒ ಮಲ್ಲಾರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾದಾಮಿ | ವಿದ್ಯಾರ್ಥಿಗಳು ಸಂವಿಧಾನವನ್ನು ಅರಿಯಬೇಕಾದ ಅಗತ್ಯವಿದೆ: ಪರಶುರಾಮ ಮಹಾರಾಜನವರ

ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಅರಿತಾಗ ಮಾತ್ರ ಸಂವಿಧಾನದ ತಿರುಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ....

ಹಾವೇರಿ | ಸೋಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಆಗಸ್ಟ್ 25ರಿಂದ ಸೆಪ್ಟೆಂಬರ್ 15ರವರೆಗೆ ಜಾಗೃತಿ ಅಭಿಯಾನ: ಜೇಬ್ರಿನ್ ಖಾನ್

"ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನವನ್ನು ಆಗಸ್ಟ್...

ಉತ್ತರ ಕನ್ನಡ | ಲಾಟರಿ, ಮಟ್ಕಾ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳಿಂದ ಸ್ಕ್ವಾಡ್ ರಚನೆ

ಕರ್ನಾಟಕ ರಾಜ್ಯ ಲಾಟರಿ ರೆಗ್ಯೂಲೇಶನ್ ಆ್ಯಕ್ಟ್ 1998 ಮತ್ತು ಸರ್ಕಾರದ ಆದೇಶದಂತೆ...

ಚಿಕ್ಕಬಳ್ಳಾಪುರ | ಒಳ ಮೀಸಲಾತಿ: ರಾಜ್ಯ ಸರ್ಕಾರದ ತೀರ್ಮಾನ ಸ್ವಾಗತಾರ್ಹ; ಪಟ್ರೇನಹಳ್ಳಿ ಕೃಷ್ಣ

ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಭಂದ ಬಲಗೈ ಹಾಗೂ ಎಡಗೈ...

Download Eedina App Android / iOS

X