ಕಲಬುರಗಿ | ಐದು ತಿಂಗಳಿನಲ್ಲಿ 13 ಕಡೆ ಕಳ್ಳತನ; ಕಳ್ಳರ ಜಾಡು ಹಿಡಿಯುವಲ್ಲಿ ವಿಫಲವಾದ ಪೊಲೀಸರು

Date:

ಐದು ತಿಂಗಳಿನಲ್ಲಿ 13ಕಡೆ ಕಳ್ಳತನವಾಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾದರೂ ಈವರೆಗೆ ಕಳ್ಳರ ಪತ್ತೆಯಾಗಿಲ್ಲ. ಕಳ್ಳರ ದಂಡು ಪಟ್ಟಣದಲ್ಲಿ ಬೀಡು ಬಿಟ್ಟಿದೆಯೇ ಎಂಬುದು ಸ್ಥಳೀಯರ ಪ್ರಶ್ನೆಯಾಗಿದೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿ ಕಳೆದ ಆರು ತಿಂಗಳಲ್ಲಿ ಸತತವಾಗಿ ಒಂದರಿಂದ ನಾಲ್ಕು ಅಂಗಡಿ ಮುಗ್ಗಟ್ಟುಗಳಲ್ಲಿ ಕಳ್ಳತನವಾಗಿದೆ. ಅದರಲ್ಲಿಯೂ ಬೈಕ್‌ ಕಳ್ಳತನ, ಒಡವೆ ಕಳ್ಳತನ, ಕಾರು ಕಳ್ಳತನ ಸೇರಿದಂತೆ ಮೊಬೈಲ್ ಅಂಗಡಿಗಳು, ಕಿರಣಾ ಅಂಗಡಿ, ಜನರಲ್ ಸ್ಟೋರ್ ಸೇರಿದಂತೆ ಹಲವು ಅಂಗಡಿಗಳಲ್ಲಿ ಸಿಸಿಟಿವಿ ಅಳವಡಿಸಿದ್ದರೂ ಯಾವುದೇ ಭಯವಿಲ್ಲದೆ ದುರುಳರು ಕಳ್ಳತನ ಮಾಡುತ್ತಿರುವುದರಿಂದ ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಪಟ್ಟಣದಲ್ಲಿ 2024 ಜನವರಿಯಿಂದ ಹಿಡಿದು ಮೇ ತಿಂಗಳವರೆಗೆ ಸುಮಾರು 12 ಕಡೆಗಳಲ್ಲಿ ಕಳ್ಳತನವಾಗಿರುವ ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿ ಇದ್ದು, ಇನ್ನು ಕೆಲವು ಕಳ್ಳತನದ ಪ್ರಕರಣಗಳು ದಾಖಲಿಸಲು ವ್ಯಾಪಾರಸ್ತರು ಮುಂದಾಗಿಲ್ಲ ಎಂಬುದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಈವರೆಗೆ ಅಂಗಡಿ ಮುಂಗಟ್ಟುಗಳು ಕಳ್ಳತನವಾದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾದರೂ ಕೂಡಾ ಪೊಲೀಸ್ ಇಲಾಖೆಯವರು ಕಳ್ಳರ ಕೈಗಳಿಗೆ ಬೇಡಿ ಹಾಕಲು ವಿಫಲವಾಗಿರುವುದು ಎದ್ದು ಕಾಣುತ್ತಿದೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ಪಟ್ಟಣಕ್ಕೆ ಪ್ರವೇಶ ಪಡೆಯುವ ಮುಖ್ಯರಸ್ತೆ, ಲಾಡ್ಜಿಂಗ್ ಕ್ರಾಸ್ ಹತ್ತಿರ ನಿರಂತರವಾಗಿ ವಾಹನಗಳ ಸಂಚಾರವಿರುತ್ತದೆ. ಆದರೂ ಕಳ್ಳರು ಯಾರದೇ ಭಯವಿಲ್ಲದೇ ಮುಖ್ಯ ರಸ್ತೆಯ ಬದಿಯಲ್ಲಿರುವ ಅಂಗಡಿಗಳ ಶೆಟರ್ ಮುರಿದು ಕಳ್ಳತನ ಮಾಡುತ್ತಿರುವುದನ್ನು ನೋಡಿದರೆ ಕಳ್ಳತನ ಮಾಡುವವರಿಗೆ ಪೊಲೀಸ್ ಇಲಾಖೆಯ ಬಗ್ಗೆ ಕಿಂಚಿತ್ತೂ ಭಯವಿಲ್ಲದಂತಾಗಿದೆ. ವಾಸ್ತವವೆಂದರೆ ಕಳ್ಳತನ ಆಗಿರುವ ಎಲ್ಲ ಅಂಗಡಿಗಳಲ್ಲಿ ಸಿಸಿಟಿವಿಗಳಿದ್ದು, ಕಳ್ಳತನ ಮಾಡಿರುವ ಕುರಿತ ಚಿತ್ರಗಳು ಸೆರೆಯಾಗಿವೆ. ಇಷ್ಟಾದರೂ ಕೂಡಾ ಕಳ್ಳರನ್ನು ಹಿಡಿಯಲು ಸಾಧ್ಯವಾಗುತ್ತಿಲ್ಲದಿರುವುದರಿಂದ ಪೊಲೀಸ್ ಇಲಾಖೆಯ ಕಾರ್ಯವೈಖರಿಯಲ್ಲಿ ವೈಫಲ್ಯವಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ” ಎಂದು ಸಾರ್ವಜನಿಕ ವಲಯದಲ್ಲಿ ಮಾತನಾಡುತ್ತಿದ್ದಾರೆ.

“ಪೊಲೀಸ್ ಇಲಾಖೆಯವರು ಸಾರ್ವಜನಿಕ ರಕ್ಷಣೆ ಹೇಗೆ ಮಾಡುತ್ತಾರೆ ಎನ್ನುವ ಪ್ರಶ್ನೆ ಕಾಡುತ್ತಿದೆ. ಒಟ್ಟಾರೆಯಾಗಿ ಈವರೆಗೆ ಕಳ್ಳತನ ಮಾಡಿರುವ ಕಳ್ಳರನ್ನು ಅತಿ ಬೇಗನೆ ಹಿಡಿದು ಸಾರ್ವಜನಿಕರಲ್ಲಿರುವ ಭಯದ ವಾತಾವರಣ ಹೋಗಲಾಡಿಸಬೇಕು ಮತ್ತು ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದ್ದರೂ ಇಲ್ಲದಂತಾದ ಸಿಸಿ ಟಿವಿಗಳು

ಪಟ್ಟಣದಲ್ಲಿ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಪಟ್ಟಣದ ಪ್ರವೇಶ ಪಡೆಯುವ ಲಾಡ್ಜಿಂಗ್ ಕ್ರಾಸ್ ಮುಖ್ಯ ರಸ್ತೆಯ ವೃತ್ತದಲ್ಲಿ ಮೂರು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮಾರುಕಟ್ಟೆಯ ಜನತಾ ವೃತ್ತದಲ್ಲಿ ಮೂರು ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದ್ದು, ಕೇವಲ ಒಂದೆರಡು ತಿಂಗಳು ಮಾತ್ರ ಚಾಲ್ತಿಯಲ್ಲಿದ್ದು ಕಳೆದ ಐದಾರು ತಿಂಗಳಿನಿಂದ ಬಂದ್ ಆಗಿರುವುದರಿಂದ ಸಿಸಿಟಿವಿ ಕ್ಯಾಮೆರಾಗಳು ಇದ್ದು ಇಲ್ಲದಂತಾಗಿವೆ. ಇದರಿಂದ ಅನೇಕ ಕಡೆಗಳಲ್ಲಿ ಆಗಿರುವ ಕಳ್ಳತನ ಪ್ರಕರಣಗಳು ತನಿಖೆಗೆ ತೊಡಕಾಗಿದೆ ಎನ್ನುವುದು ಸಾರ್ವಜನಿಕರ ವಲಯದಲ್ಲಿ ಪೋಲಿಸ್ ಇಲಾಖೆಯ ವಿರುದ್ಧ ದೊಡ್ಡ ಆರೋಪವಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬೆಂಕಿ ಅವಘಡ ; ಹೊತ್ತಿ ಉರಿದ ಜೆಸ್ಕಾಂ ಕಚೇರಿ

ಜನವರಿ ತಿಂಗಳಲ್ಲಿ ಮೊಬೈಲ್ ಅಂಗಡಿಯಲ್ಲಿ ಕಳ್ಳತನವಾಗಿದ್ದು, ₹2.50 ಲಕ್ಷ ನಷ್ಟವಾಗಿದೆ. ಫೆಬ್ರವರಿಯಲ್ಲಿ ನಾಲ್ಕು ಅಂಗಡಿಗಳಲ್ಲಿ ಕಳ್ಳತನವಾಗಿದೆ. ಮಾರ್ಚ್ ತಿಂಗಳು ಬಸ್ ನಿಲ್ದಾಣದಲ್ಲಿ ಬೈಕ್ ಮತ್ತು ಒಡವೆ ಕಳ್ಳತನವಾಗಿದೆ. ಏಪ್ರಿಲ್ ತಿಂಗಳಲ್ಲಿ ಗೋಡೌನಲ್ಲಿ ಕಳ್ಳತನವಾಗಿದ್ದರೂ ಪ್ರಕರಣ ದಾಖಲಾಗಿಲ್ಲ. ಮೇ ತಿಂಗಳಲ್ಲಿ ಕಾರು ಕಳ್ಳತನಕ್ಕೆ ಯತ್ನ ನಡೆದಿದೆ. ಮೇ ತಿಂಗಳ 23ರಂದು ನಾಲ್ಕು ಅಂಗಡಿಗಳಲ್ಲಿ ಕಳ್ಳತನವಾಗಿದೆ ಎನ್ನಲಾಗಿದೆ.

ವರದಿ: ಸಿಟಿಜನ್ ಜರ್ನಲಿಸ್ಟ್- ಅನಂತನಾಗ ದೇಶಪಾಂಡೆ 

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೃದ್ಧರು ಹಾಗೂ ವಿಕಲಚೇತನರ ಬೆಂಬಲ ಸಭೆ

ಪಿಂಚಣಿ ಕಡಿತ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಮತ್ತು ವಿಕಲಚೇತನರಿಗೆ ಉಂಟಾಗುತ್ತಿರುವ...

ಕೋಲಾರ | ಜಡತ್ವಕ್ಕೆ ವಿವೇಕ ನೀಡಿದ ಕುಸ್‌ ಕುಸ್ ದಿಲ್ ಕುಶ್ ನಾಟಕ

ಯಾವುದು ಸ್ಥಿರವಲ್ಲ. ಗಳಿಗೆ ಗಳಿಗೆಯೂ ಬದಲಾಗುತ್ತಿರುತ್ತದೆ. ಸ್ಥಿರವೆಂದು ಭಾವಿಸಿದವನಿಗೆ ಅವನ ತಲೆಯೇ...

ರಾಯಚೂರು | ಮದುವೆಗೆ ಪ್ರಿಯಕರನ ಮನೆಯವರ ವಿರೋಧ : ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ

ಪ್ರೀತಿಸಿದ ಯುವಕನ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಯುವತಿ ಮಹಿಳಾ...

ದಕ್ಷಿಣ ಕನ್ನಡ | ಭಾರೀ ಮಳೆ; ಕಲ್ಲಡ್ಕದಲ್ಲಿ ರಸ್ತೆಯೇ ಮಾಯವಾದ ದೃಶ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಭಾರೀ ಮಳೆ ಸುರಿಯಿತು....