ಕಲಬುರಗಿ | ಹಾಡಹಗಲೇ 3 ಕೆಜಿ ಚಿನ್ನಾಭರಣ ದರೋಡೆ: ಮಾಲೀಕನಿಗೆ ಗನ್ ತೋರಿಸಿ ಆರೋಪಿಗಳು ಪರಾರಿ

Date:

Advertisements

ಕಲಬುರಗಿ ನಗರದ ಸರಾಫ್ ಬಜಾರ್‌ನ ಚಿನ್ನಾಭರಣ ಮಳಿಗೆಯೊಂದಕ್ಕೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮಳಿಗೆಯ ಮಾಲೀಕನಿಗೆ ಗನ್ ತೋರಿಸಿ, ಕೈ ಕಾಲು ಕಟ್ಟಿ ಹಾಕಿ ಸುಮಾರು 3 ಕೆಜಿ ಚಿನ್ನಾಭರಣವನ್ನು ದರೋಡೆ ಮಾಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ನಗರದ ಸರಾಫ್ ಬಜಾರ್‌ನಲ್ಲಿನ ಮಾಲಿಕ್ ಜ್ಯುವೆಲ್ಲರ್ಸ್ ಎಂಬ ಚಿನ್ನದ ಮಳಿಗೆಯಲ್ಲಿ ಶುಕ್ರವಾರ ಮಧ್ಯಾಹ್ನ 11:50ರ ಸಉಮಾರಿಗೆ ಈ ದರೋಡೆ ನಡೆದಿದ್ದು, ಸಿನಿಮೀಯ ರೀತಿಯಲ್ಲಿ ಚಿನ್ನಾಭರಣ ದೋಚಿರುವ ಆರೋಪಿಗಳು ಪರಾರಿಯಾಗಿದ್ದಾರೆ.

“ಜನನಿಬಿಡ ಪ್ರದೇಶವಾಗಿರುವ ಸೂಪರ್ ಮಾರ್ಕೆಟ್‌ನಲ್ಲಿ ಈ ರೀತಿ ಹಾಡಹಗಲೇ ದರೋಡೆ ನಡೆದಿರುವುದು ಜನತೆಯನ್ನು ಬೆಚ್ಚಿ ಬೀಳಿಸಿದೆ. ದರೋಡೆಕೋರರ ಕೃತ್ಯ ಅಲ್ಲಿನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಇದನ್ನು ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ” ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

Advertisements

ಚಿನ್ನಾಭರಣ ಮಳಿಗೆಯಿಂದ ಲೂಟಿ ನಡೆದಿರುವ ವಿಷಯ ಬಹಿರಂಗವಾಗುತ್ತಲೇ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್ ಡಿ, ಡಿಸಿಪಿ ಕನಿಕಾ ಸಿಕ್ರಿವಾಲ್, ಎಸಿಪಿ, ಪಿಐ ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಂದ ರಸ್ತೆತಡೆ ಪ್ರತಿಭಟನೆ

ಇತ್ತೀಚೆಗೆ ನಗರದ ಪೂಜಾರಿ ಚೌಕ್ ಸಮೀಪದಲ್ಲಿ ಎಟಿಎಂನಲ್ಲಿದ್ದ ಕೋಟ್ಯಂತರ ರೂಪಾಯಿಯನ್ನು ದರೋಡೆ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ಇದೀಗ ನಗರದಲ್ಲಿ ಮತ್ತೊಂದು ದರೋಡೆ ನಡೆದಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X