ಕಲಬುರಗಿ | ರಾಜ್ಯದಿಂದ 4 ಲಕ್ಷ ಕೋಟಿ ಐಟಿ‌ ಸೇವೆ ರಫ್ತು: ಸಚಿವ ಪ್ರಿಯಾಂಕ್ ಖರ್ಗೆ

Date:

ಕಲಬುರಗಿ ನಗರದ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ರಾಜೀವ್ ಗಾಂಧಿ ಅವರ ಜಯಂತಿಯ ಅಂಗವಾಗಿ ರಾಜೀವಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿಗಳಾದ ಡಿ. ಕೆ ಶಿವಕುಮಾರ್ ಅವರೊಂದಿಗೆ ಉದ್ಘಾಟಿಸಿ, ವಿವಿಧ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಯಿತು.

- Advertisement -

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದ ಮಟ್ಟಿಗೆ ಇಂದು ಐತಿಹಾಸಿಕ ದಿನವಾಗಿದೆ. ದೇಶ ಕಂಡ ಮಹಾನ್ ನಾಯಕರಾದ ರಾಜೀವ್ ಗಾಂಧಿ ಹಾಗೂ‌ ದೇವರಾಜ್ ಅರಸು ಅವರ ಜಯಂತಿ ಆಚರಿಸಲಾಗುತ್ತಿದೆ. ಅರಸು ಅವರು ಹಲವಾರು ಧೀಮಂತ ನಾಯಕರನ್ನು ಬೆಳೆಸಿ ಈ ನಾಡಿಗೆ ಕೊಡುಗೆಯಾಗಿ ನೀಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ರವರು ಇಂದು ರಾಷ್ಟ್ರಮಟ್ಟದಲ್ಲಿ ಬೆಳೆಯುವುದಕ್ಕೆ ಅರಸು ಅವರ ಆಶೀರ್ವಾದವೂ ಕಾರಣವಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

1992 ರಲ್ಲಿ ಪಂಚಾಯತ್ ರಾಜ್ ಕಾಯಿದೆಗೆ 73 ನೇ ತಿದ್ದುಪಡಿ ತರುವ ಮೂಲಕ ಮೀಸಲಾತಿ ಜಾರಿಗೊಳಿಸಿ ಹಿಂದುಳಿದವರು ಹಾಗೂ ಸಮಾಜದಲ್ಲಿ ತಳ ಸಮುದಾಯದ ಜನರು ಕೂಡಾ ಪಂಚಾಯತ್ ಅಧ್ಯಕ್ಷರಾಗಲು ಅನುಕೂಲವಾಗಿದೆ. ಗಾಂಧೀಜಿಯವರ ಗ್ರಾಮ ಸ್ವರಾಜ್ ಕನಸನ್ನು ಈ ತಿದ್ದುಪಡಿಯ ಮೂಲಕ ರಾಜೀವ್ ಗಾಂಧಿ ಅವರು ನನಸು ಮಾಡಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆಯಿಂದ ಬಹಳಷ್ಟು‌ ಜನರು ನಾಯಕರಾಗಿ ಬೆಳೆದಿದ್ದಾರೆ. ಹಾಗಾಗಿ‌, ಪಂಚಾಯತ್ ರಾಜ್‌ ನಾಯಕರನ್ನು ಬೆಳೆಸುವ ಕಾರ್ಖಾನೆಯಾಗಿದೆ ಎಂದರು.

ಈ ಮಹತ್ವದ ದಿನದಂದು ಪಂಚಾಯತ್ ರಾಜ್ ರಾಜೀವ್ ಗಾಂಧಿ ಫೆಲೋಶಿಪ್ ಕಾರ್ಯಕ್ರಮ ಜಾರಿಗೊಳಿಸುವ ಮೂಲಕ ಇಬ್ಬರು ಮಹನೀಯರ ಆಶಯದಂತೆ ಸಮಾಜದ ಕಟ್ಟಕಡೆಯ ಸಾಮಾನ್ಯ ನಾಗರಿಕರಿಗೆ ಸೌಲಭ್ಯ ಒಗದಗಿಸುತ್ತಿದ್ದೇವೆ. ಇದು ಹೆಮ್ಮೆಯ ಸಂಗತಿಯಾಗಿದೆ. ರಾಜೀವ್ ಗಾಂಧಿ ಅವರ ದೂರದೃಷ್ಟಿಯಿಂದಾಗಿ ರಾಜ್ಯ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿ ಇಂದು ಮಾಹಿತಿ ತಂತ್ರಜ್ಞಾನ ಕ್ರಾಂತಿ‌ಯಾಗಿದೆ. ಇದರ ಪರಿಣಾಮವಾಗಿ 4 ಲಕ್ಷ ಕೋಟಿ ಐಟಿ‌ ಸೇವೆ ರಫ್ತಾಗಿದ್ದು ರಾಜ್ಯವು ವಿಶ್ವದ ನಾಲ್ಕನೆಯ ಅತಿದೊಡ್ಡ ಕ್ಲಸ್ಟರ್ ಆಗಿ ಹೊರಹೊಮ್ಮಿದೆ ಎಂದು ತಿಳಿಸಿದರು.

ಸಮೃದ್ದ, ಸಶಕ್ತ ಹಾಗೂ ಪ್ರಬುದ್ಧ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ನಿರ್ಮಾಣ ಮಾಡಲು ನೀವೆಲ್ಲ ನಮ್ಮೊಂದಿಗೆ ಕೈಜೋಡಿಸಿ ಎಂದು ಮನವಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...