ಕಲಬುರಗಿ | 55 ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ: ನಿರ್ಲಕ್ಷ್ಯಕ್ಕೆ ಇಬ್ಬರು ಅಧಿಕಾರಿಗಳ ಅಮಾನತು

Date:

ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿದ ಬಳಿಕ 55 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಪ್ರಾಂಶುಪಾಲ ಶರಣಬಸಪ್ಪ ಪಾಟೀಲ್ ಮತ್ತು ವಾರ್ಡನ್ ರವಿ ವಾಲಿ ಅವರನ್ನು ಅಮಾನತುಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಆದೇಶ ಹೊರಡಿಸಿದೆ.

- Advertisement -

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಶಿವಸ್ವಾಮಿ ಬಿ. (ಕೆಎಎಸ್) ಈ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಸಂಬಂಧಿಸಿದ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬ ಪ್ರಾಥಮಿಕ ಪರಿಶೀಲನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ವಿದ್ಯಾರ್ಥಿಗಳಿಗೆ ನೀಡುವ ಆಹಾರದ ಗುಣಮಟ್ಟವನ್ನು ಖಚಿತಪಡಿಸುವುದು ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಸಂಬಂಧಿತ ಅಧಿಕಾರಿಗಳ ಜವಾಬ್ದಾರಿಯಾಗಿತ್ತು. ಆದರೆ ಈ ಜವಾಬ್ದಾರಿಯಲ್ಲಿ ನಿರ್ಲಕ್ಷ್ಯ ತೋರಿದ ಪರಿಣಾಮ ಒಂದೇ ವೇಳೆ 55 ವಿದ್ಯಾರ್ಥಿಗಳು ಅಸ್ವಸ್ಥರಾಗುವಂತಹ ಗಂಭೀರ ಘಟನೆ ಸಂಭವಿಸಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಕರ್ತವ್ಯಲೋಪದ ಲಕ್ಷಣಗಳು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಇಲಾಖಾ ಶಿಸ್ತು ವಿಚಾರಣೆ ಪೂರ್ಣಗೊಳ್ಳುವವರೆಗೆ ಇಬ್ಬರನ್ನೂ ಸೇವೆಯಿಂದ ಅಮಾನತುಗೊಳಿಸಲಾಗಿದೆ. ತನಿಖೆಯ ಅಂತಿಮ ವರದಿ ಆಧರಿಸಿ ಮುಂದಿನ ಆಡಳಿತಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಐರಾವತ, ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಚಾಲಕರು ಸ್ಥಳದಲ್ಲಿಯೇ ಸಾವು!

ಈ ಆದೇಶವನ್ನು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿ–1957ರ ನಿಯಮ 10(1)(ಡಿ) ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ತಿದ್ದುಪಡಿ ವಿನಿಯಮಗಳು–2025ರ ಅನ್ವಯ ಜಾರಿಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...