ಕಲಬುರಗಿ | ಭಗತ್ ಸಿಂಗ್‌ 94ನೇ ಹುತಾತ್ಮ ದಿನ ಆಚರಣೆ

Date:

ಇಂದಿನ ವಿದ್ಯಾರ್ಥಿಗಳು ಸಿನಿಮಾ ಹಾಗೂ ಕ್ರಿಕೆಟ್ ತಾರೆಯರನ್ನು ತಮ್ಮ ಆದರ್ಶವನ್ನಾಗಿ ಮಾಡಿಕೊಳ್ಳದೆ ಭಗತ್ ಸಿಂಗ್‌ರವರಂತಹ ಕ್ರಾಂತಿಕಾರಿಗಳನ್ನು ಆದರ್ಶವನ್ನಾಗಿ ತೆಗೆದುಕೊಳ್ಳಬೇಕು ಹಾಗೂ ಸಾಮಾಜಿಕ ಹೋರಾಟಕ್ಕೆ ಕಾಣಿಕೆಯನ್ನು ನೀಡಬೇಕು ಎಂದು ಹಿರಿಯ ಪತ್ರಕರ್ತರಾದ ಪ್ರಭಾಕರ್ ಜೋಶಿ ಹೇಳಿದರು.

- Advertisement -

ಕಲಬುರಗಿಯಲ್ಲಿ ಧೀರ ಹುತಾತ್ಮ ಭಗತ್ ಸಿಂಗ್‌ರವರ 94ನೇ ಹುತಾತ್ಮ ದಿನದ ಅಂಗವಾಗಿ ಎಐಡಿಎಸ್‌ಒ, ಎಐಡಿವಾಯ್‌ಒ, ಎಐಎಂಎಸ್‌ಎಸ್‌ ಸಂಘಟನೆಗಳು ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರ್ಗಿಯ ಕನ್ನಡ ವಿಭಾಗದ ಮುಖ್ಯಸ್ಥ ಹಾಗೂ ಪ್ರಾಧ್ಯಾಪಕ ಡಾ. ಶಿವಗಂಗಾರುಮ್ಮ ರವರು ಮಾತನಾಡುತ್ತ, ಭಗತ್ ಸಿಂಗ್‌ರವರು ತಮ್ಮ ಚಿಕ್ಕವಯಸ್ಸಿನಿಂದಲೇ ವೈಚಾರಿಕ ಸ್ಪಷ್ಟತೆಯೊಂದಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿದರು. ಅವರು ಎತ್ತಿ ಹಿಡಿದ ಸಮಾಜವಾದಿ ಭಾರತದ ಕನಸನ್ನು ಜನಮಾನಸದಲ್ಲಿ ಮೂಡಿಸಲು ಪ್ರಯತ್ನಿಸಿದರು. ಅವರು ಜೈಲಿನಲ್ಲಿ ಬರೆದಂತಹ ‘ನಾನೇಕೆ ನಾಸ್ತಿಕ’ ಎಂಬ ಗ್ರಂಥದಲ್ಲಿ ತೀಕ್ಷ್ಣವಾದ ವೈಚಾರಿಕ ತಳಹದಿಯನ್ನು ಅವರು ವ್ಯಕ್ತಪಡಿಸಿದ್ದಾರೆ ಎಂದರು.

ಹೇಗೆ ಮಾನವನಿಂದ ಮಾನವನ ಶೋಷಣೆಯನ್ನು ತಡೆಗಟ್ಟಲು ನಾವು ಶ್ರಮಿಸಬೇಕು, ಹಳೆ ವಿಚಾರ ಸಂಪ್ರದಾಯಗಳನ್ನು ಮುರಿದು ವೈಜ್ಞಾನಿಕ ಆಲೋಚನಾ ತಳಹದಿಯನ್ನು ಪಡೆದುಕೊಳ್ಳಬೇಕು ಎಂಬ ತಮ್ಮ ಹರಿತವಾದ ಬರಹದಿಂದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಮೇಲೆ ತುಂಬಾ ಗಾಢವಾದ ಪರಿಣಾಮವನ್ನು ಬೀರಿದ್ದಾರೆ. ಇಂದಿನ ಯುವಜನರು ಅವರ ‘ನಾನೇಕೆ ನಾಸ್ತಿಕ’ ಎಂಬ ಗ್ರಂಥವನ್ನು ತಪ್ಪದೆ ಓದಿ ಯುವಜನರು ವೈಚಾರಿಕವಾಗಿ ರಾಜಕೀಯವಾಗಿ ಪ್ರಭುದ್ಧರಾಗಬೇಕೆಂದು ಅವರು ಕರೆ ನೀಡಿದರು.

ಈ ಕಾರ್ಯಕ್ರಮಕ್ಕೆ ಭಾಷಣಕಾರರಾಗಿ ಎಐಡಿವೈಒನ ಜಿಲ್ಲಾಧ್ಯಕ್ಷರಾದ ಜಗನ್ನಾಥ್ ಎಸ್.ಎಚ್‌ರವರು ಆಗಮಿಸಿ ಮಾತನಾಡಿದರು ಹಾಗೂ ಪ್ರಾಸ್ತವಿಕವಾಗಿ ಎಐಡಿ ಎಸ್‌ಓ ಜಿಲ್ಲಾ ಕಾರ್ಯದರ್ಶಿಗಳಾದ, ತುಳಜಾರಾಮ್ ಏನ್.ಕೆ ರವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಐಎಂಎಸ್‌ಎಸ್ ಕಲಬುರಗಿ ಜಿಲ್ಲಾಧ್ಯಕ್ಷ ಗುಂಡಮ್ಮ ಮಡಿವಾಳರವರು ವಹಿಸಿದ್ದರು.

ಕಲಬುರಗಿ ಜಿಲ್ಲೆಯ ಹಲವು ಭಾಗಗಳಿಂದ ವಿದ್ಯಾರ್ಥಿಗಳು ಯುವಜನತೆ ಹಾಗೂ ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಇದಾದ ನಂತರ ಜಿಲ್ಲೆಯ ಬೇರೆ ಬೇರೆ ಕಡೆಗಳಿಂದ ಬಂದಿರುವ ಕಲಾವಿದರಿಂದ ನಾಟಕ, ಡೊಳ್ಳಿನ ಕುಣಿತ, ಲಾವಣಿ, ಗುಂಪು ಗಾಯನ ಇಂತಹ ಸಂಸ್ಕೃತಿಕ ಚಟುವಟಿಕೆಗಳು ಜರುಗಿದವು. ನೂರಾರು ಸಂಖ್ಯೆಯಲ್ಲಿ ಸೇರಿರುವ ಸಭಿಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...