ಕಲಬುರಗಿ | ಬಿಸಿ ನೀರಿದ್ದ ಬಕೆಟ್‌‌ಗೆ ಬಿದ್ದು ಐದು ವರ್ಷದ ಬಾಲಕಿ ಸಾವು

Date:

ಬಿಸಿ ನೀರು ತುಂಬಿಸಿಟ್ಟಿದ್ದ ಬಕೆಟ್‌ಗೆ ಬಿದ್ದು ಐದು ವರ್ಷದ ಬಾಲಕಿ ಬಿದ್ದು ಮೃತಪಟ್ಟಿರುವ ಘಟನೆ ಕಲಬುರಗಿಯ ತಾಜ್ ನಗರದಲ್ಲಿ ಘಟನೆ ನಡೆದಿದೆ.

- Advertisement -

ತಾಜ್ ನಗರದ ಮುಹಮ್ಮದ್ ಗೌಸ್ ಮತ್ತು ತಾಹೇರ ಬಾನು ದಂಪತಿಯ ಪುತ್ರಿ ಆಫ್ರೀನಾ ಬಾನು (5) ಮೃತ ಬಾಲಕಿ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ನ.12ರಂದು ಸಂಜೆ ಸ್ನಾನ ಮಾಡಲು ಮೃತ ಬಾಲಕಿಯ ತಾಯಿ ಬಕೆಟ್‌ನಲ್ಲಿ ವಾಟರ್‌ ಹೀಟರ್‌ ಹಾಕಿ ನೀರು ಬಿಸಿ ಮಾಡಿದ್ದರು. ನೀರು ಬಿಸಿಯಾದ ನಂತರ ವಾಟರ್ ಹೀಟರ್ ಆಫ್‌ ಮಾಡಿದ್ದರು. ಈ ಸಂದರ್ಭದಲ್ಲಿ ಮೂವರೂ ಮಕ್ಕಳು ಅದೇ ಸ್ಥಳದಲ್ಲೇ ಆಟವಾಡುತ್ತಿದ್ದರು. ಒಳಗೆ ಹೋಗಿ ಬಟ್ಟೆ ತರುವ ವೇಳೆಗೆ ಅಫ್ರೀನಾ ಬಾನು ಬಿಸಿ ನೀರಿನ ಬಕೆಟ್‌ಗೆ ಬಿದ್ದಿದ್ದಳು. ದೇಹದಲ್ಲಿ ಭಾಗಶಃ ಸುಟ್ಟ ಗಾಯಗಳಾಗಿದ್ದರಿಂದ ಕುಟುಂಬಸ್ಥರು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಬಳಿಕ ಬಾಲಕಿ ಗುಣಮುಖ ಆಗಿದ್ದಾಳೆ ಎಂದು ಪೋಷಕರು ನ.17 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಕೊಂಡು ಬಂದಿದ್ದರು. ಬಳಿಕ ಪದೇ ಪದೇ ವಾಂತಿ-ಭೇದಿ ಮಾಡಿಕೊಂಡಿದ್ದಳು. ಬಳಿಕ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ವಿದಾಯ | ರಾಫಾ… ರಾಫಾ… ರಾಫಾ… ಅಭಿಮಾನಿಗಳ ಕೂಗಿಗೆ ಕಣ್ಣೀರಾದ ನಡಾಲ್

ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...