ಕಲಬುರಗಿ | ಸಂವಿಧಾನ ಕುರಿತು ಅವಹೇಳನಾಕಾರಿ ಹೇಳಿಕೆ; ರಾಷ್ಟ್ರದ್ರೋಹ ಕೇಸ್ ದಾಖಲಿಸಲು ದಸಂಸ ಪ್ರತಿಭಟನೆ

Date:

ಪ್ರಜಾಪ್ರಭುತ್ವದ ಪಿತಾಮಹ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ ಹಾಗೂ ಸಂವಿಧಾನ ಕುರಿತು ಅವಹೇಳನ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ಭೀಮವಾದ) ಬೃಹತ್ ಪ್ರತಿಭಟನೆ ಮಾಡುವುದರ ಮೂಲಕ ಕಲಬುರಗಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು.

- Advertisement -

ಪ್ರತಿಭಟನೆ ಉದ್ದೇಶಿಸಿ ಕಾಶಿನಾಥ ಶೆಳಗಿ ಮಾತನಾಡಿ, “ಜ್ಞಾನವೇ ಅತ್ಯುತ್ತಮ ಸಂಪತ್ತು. ಮೌಢ್ಯವೇ ಕೆಟ್ಟ ಶತ್ರು. ನಿಮ್ಮ ಮಕ್ಕಳಲ್ಲಿ ಧಾರ್ಮಿಕತೆಯನ್ನು ಭೋದಿಸಬೇಡಿ. ಅವರು ಮೂಢನಂಬಿಕೆಯ ಗುಲಾಮರಾಗುತ್ತಾರೆ. ಅವರಿಗೆ ಶಿಕ್ಷಣ ಕೊಡಿ. ಗುಲಾಮಗಿರಿಯನ್ನು ಮೆಟ್ಟಿ ನಿಲ್ಲುತ್ತಾರೆ. ಎಂದು ಬಾಬಾಸಾಹೇಬರು ತಮ್ಮ ಜೀವಿತಾವಧಿಯ ಕಾಲದಲ್ಲಿ ಪದೇ ಪದೇ ಎಚ್ಚರಿಸುತ್ತಿದ್ದ ಮಾತುಗಳಿವು.
ಆದರೆ ಅದ್ಯಾವುದನ್ನು ಲೆಕ್ಕಿಸದೆ ನಾವುಗಳು ಅವರ ಮಾತುಗಳಿಗೆ ಬೆಲೆ ಕೊಡದೆ ಇಂದು ಮೌಢ್ಯದ ಗುಲಾಮರಾಗಿದ್ದೇವೆ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ತಳಸಮುದಾಯದವರು ಸಮಾಜದಲ್ಲಿ ನೆಮ್ಮದಿಯಿಂದ ಬದುಕುವಂತಾಗಬೇಕು ಎಂಬ ಕಾರಣಕ್ಕಾಗಿ ಹಗಲಿರುಳು ಶ್ರಮವಹಿಸಿ ಈ ದೇಶಕ್ಕೆ ಸಂವಿಧಾನವನ್ನು ಬರೆದು ಅರ್ಪಿಸಿದರು. ಆದರೆ ಅಂದು ಆರ್ ಎಸ್ ಎಸ್ ಸಂಘ ಪರಿವಾರ ತಮ್ಮ ಮುಖವಾಣಿ ಪತ್ರಿಕೆಯಲ್ಲಿ, ಅಂಬೇಡ್ಕರ್‌ರವರು ರಚಿಸಿರುವ ಸಂವಿಧಾನದಲ್ಲಿ ಭಾರತೀಯತೆ ಇಲ್ಲವಾಗಿದೆ. ಈ ದೇಶದ ನೆಲದ ಕಾನೂನಾದ ಮನುಸ್ಮೃತಿಯಿಂದ ಏನೂ ಪಡೆದಿಲ್ಲ. ಹಾಗಾಗಿ ಈ ಸಂವಿಧಾನ ನಮಗೆ ಒಪ್ಪಿತವಲ್ಲ ಎಂದು ಬರೆದಿತ್ತು. ಹಿಂದೂಗಳಿಗೆ ಪ್ರಜಾಪ್ರಭುತ್ವದ ತತ್ವಗಳು ಹೊರಗಿನವು. ಇಡೀ ಮನುಕುಲದ ಅತಿಶ್ರೇಷ್ಠ ಮತ್ತು ಮಹಾನ್ ಕಾನೂನು ರಚನೆಕಾರ ಮನು ಎಂದಿದ್ದರು, ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟೀಷರಿಗೆ ತಪ್ಪೊಪ್ಪಿಗೆ ಬರೆದುಕೊಟ್ಟಿದ್ದ ಸಾವರ್ಕರ್, ವೇದಗಳ ನಂತರ ಅತ್ಯಂತ ಪೂಜನೀಯ ಗ್ರಂಥ ಮನುಸ್ಮೃತಿ, ಈ ದೇಶವನ್ನು ಅದರ ಆಧಾರದಲ್ಲಿ ನಡೆಸಬೇಕು ಎಂದು ಹೇಳುತ್ತಾರೆ. ಆದರೆ ಅದೇ ವಂಶದ ಜಾತಿವಾದಿ ಮನಸ್ಥಿತಿಗಳು ಇಂದು ಇಡೀ ದೇಶದ ತುಂಬಾ ವ್ಯಾಪಿಸಿ ಡಾ. ಬಾಬಾಸಾಹೇಬರ ಬಗ್ಗೆ ಅಪಪ್ರಚಾರ ಮಾಡುತ್ತಾ ಈ ದೇಶದ ಸಂವಿಧಾನವನ್ನು ಬುಡಮೇಲು ಮಾಡಲು ಹೊರಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“2014 ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಂವಿಧಾನದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಅಥವಾ ಬಾಬಾಸಾಹೇಬರ ಬಗ್ಗೆ ಹಗುರವಾಗಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಇದನ್ನು ನೋಡಿದರೆ ಆರ್ ಎಸ್ ಎಸ್ ಅಜೆಂಡಾ ಹೇರಲು ಹೊರಟಿದ್ದಾರೆ ಎನ್ನಿಸದೇ ಇರಲಾರದು. ಬಡವರ ದಲಿತರ ಸ್ಥಿತಿಗತಿ ಬಗ್ಗೆ ಚಿಂತನೆ ಮಾಡುತ್ತಿಲ್ಲ. ನಾವು ಅಧಿಕಾರಕ್ಕೆ ಬಂದಿರುವುದೇ ಈ ದೇಶದ ಸಂವಿಧಾನ ಬದಲಾವಣೆ ಮಾಡಲು ಎಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಹಾಡುಹಗಲೇ ಸಂವಿಧಾನದ ಪ್ರತಿ ಸುಟ್ಟು ವಿಕೃತಿ ಮೆರೆದಿದ್ದಾರೆ. ದೇಶದ ಗೌರವಾನ್ವಿತ ಹುದ್ದೆಯನ್ನು ಅಲಂಕರಿಸಿರುವ ಮಾನ್ಯ ಗೃಹ ಸಚಿವ ಅಮಿತ್‌ ಶಾ ದೆಹಲಿಯ ಸಂಸತ್‌ನಲ್ಲಿ ಅಂಬೇಡ್ಕರ್‌ರವರಿಗೆ ಅಪಮಾನ ಮಾಡಿದ್ದಾರೆ. ಅವರ ದೇಶದ್ರೋಹಿ ಮಾತುಗಳನ್ನು ಖಂಡಿಸಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸಚಿವ ಸಹದ್ಯೋಗಿಗಳು ಆತನ ಬೆನ್ನಿಗೆ ನಿಂತಿದ್ದಾರೆ. ಇಂತಹವರಿಂದ ನಾವು ನ್ಯಾಯವನ್ನು ನಿರೀಕ್ಷಿಸಲು ಸಾಧ್ಯವಿಲ್ಲ” ಎಂದರು.

ಈ ಹಿನ್ನೆಲೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಸಮಿತಿಯ ಆದೇಶದ ಮೇರೆಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರವರನ್ನು ಹಾಗೂ ಇಡೀ ದೇಶದ ಶೋಷಿತ ಸಮುದಾಯವನ್ನು ಅವಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಿ ದೇಶದ ಜನರ ಕ್ಷಮೆಯಾಚಿಸಬೇಕು. ಅವರ ವಿರುದ್ಧ ದೇಶ ದ್ರೋಹ ಪ್ರಕರಣ ದಾಖಲಿಸಿ ಅವರನ್ನು ಗೂಂಡಾ ಕಾಯಿದೆಯಡಿ ಗಡಿಪಾರು ಮಾಡಬೇಕು. ದಲಿತರ ಮೇಲೆ ದೌರ್ಜನ್ಯ ನಡೆದರೆ ಆಯಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ?: ಕಲಬುರಗಿ | ಭಾರತೀಯ ಸಂಸ್ಕೃತಿ ಉತ್ಸವ ವಿರೋಧಿಸಿ ದಲಿತ ಸಂಘಟನೆಗಳ ಬೃಹತ್‌ ಪ್ರತಿಭಟನೆ

    ಈ ವೇಳೆ ಕಾಶಿನಾಥ ಶೆಳಗಿ, ‎ಗಣೇಶ ಕಾಂಬಳೆ, ದಿಲೀಪ ಕುಮಾರ, ಕಿರಸವಾಳಗಿ, ಮಲ್ಲಿಕಾರ್ಜುನ ಹಿಪ್ಪರಗಿ, ಅಶ್ವಿನಿ ಬಾರಿಗಿಡ, ಬಸವರಾಜ ಮೇಗಲಕೇರಿ, ಸಂಗೀತಾ ಕೊಂಬಿನ್, ಮಾರುತಿ ತೇಗಲತಿಪ್ಪಿ, ಶರಣು ರಾವೂರಕರ, ಮಲ್ಲಿಕಾರ್ಜುನ ಕಾಂಬಳೆ, ಬಸವರಾಜ,
    ಅಂಬರೇಶ ಶ್ಯಾಮಸುಂದರ, ಶಿವರಾಜ ವಾಲಿ, ನಾಗೇಂದ್ರ ಇನ್ನಿತರರು ಉಪಸ್ಥಿತರಿದ್ದರು.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

    ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

    ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

    ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

    ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

    ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

    ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

    ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...