ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆಳಂದ ತಾಲೂಕಿನ ನರೋಣಾ ಗ್ರಾಮದಲ್ಲಿ ನಡೆದಿದೆ. ಮಹಿಳೆಯ ಸಾವಿನ ಹಿಂದೆ ಹತ್ಯೆಯ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಷ್ಟಗಾ ಗ್ರಾಮದ ನಾಗಮ್ಮ (35) ಮೃತ ಮಹಿಳೆ. ನರೋಣಾ ಗ್ರಾಮದಲ್ಲಿ ವಾಸವಾಗಿದ್ದ ಅವರು ಅಲ್ಲಿನ ಶಾರದಾ ಖಾಸಗಿ ಶಾಲೆಯಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ನಾಗಮ್ಮ ಅವರು ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಆದರೆ ಘಟನೆ ನಡೆದಿರುವುದು ತಡವಾಗಿ, ಸುಮಾರು ಎರಡು ದಿನಗಳ ಬಳಿಕ ಬೆಳಕಿಗೆ ಬಂದಿದೆ. ಮಹಿಳೆಯ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನೂ ಬಹಿರಂಗವಾಗಿಲ್ಲ.
ಮಾಹಿತಿ ದೊರೆತ ಕೂಡಲೇ ನರೋಣಾ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಲ್ಲಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ಇಂದಿರಾ ಕ್ಯಾಂಟೀನ್‌ಗೆ ಡಿಸಿ ದಿಢೀರ್ ಭೇಟಿ: ಆಹಾರ ಗುಣಮಟ್ಟ ತಪಾಸಣೆ
ಮಹಿಳೆಯ ಸಾವಿನ ಹಿಂದಿನ ಕಾರಣ ಹಾಗೂ ಘಟನೆಗೆ ಸಂಬಂಧಿಸಿದವರ ಪತ್ತೆಗಾಗಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.





