ಕಲಬುರಗಿ | ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿತ್ತು: ಮಾಲೀಕಯ್ಯ ಗುತ್ತೇದಾರ

Date:

2018ರಲ್ಲಿ ಕಾರಣಾಂತರಗಳಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರ್ಪಡೆಯಾದೆ. ಪಕ್ಷದಲ್ಲಿ ಶಿಸ್ತಿನ ಸಿಪಾಯಿ ಆಗಿ ಕೆಲಸ ಮಾಡಿದರೂ ನನಗೆ ಯಾವ ಗೌರವವು ಸಿಕ್ಕಿಲ್ಲ. ನಾನು ತತ್ವ, ಸಿದ್ಧಾಂತ, ಸಾಮಾಜಿಕ ನ್ಯಾಯದ ಬುನಾದಿಯಲ್ಲಿ ಬೆಳೆದು ಬಂದವನ್ನು. ಆದರೆ, ಬಿಜೆಪಿ ಪಕ್ಷದ ಕಾನೂನುಗಳಿಂದ ಬಿಜೆಪಿಯಲ್ಲಿ ಉಸಿರು ಗಟ್ಟುವ ವಾತಾವರಣ ನಿರ್ಮಾಣವಾಗಿತ್ತು ಸೆಕ್ಯುಲರ್ ಪಾರ್ಟಿ, ದೇಶಕ್ಕೆ ಸ್ವಾತಂತ್ರ ಕೊಡಿಸಿದ ಪಾರ್ಟಿ ಕಾಂಗ್ರೆಸ್‌ಗೆ ಮರಳಿ ಸೇರಿಕೊಂಡಿರುವುದು ನನ್ನ ಮನೆಗೆ, ಮರಳಿ ಕುಟುಂಬ ಸದಸ್ಯರೊಂದಿಗೆ ಸೇರಿಕೊಂಡಿದ್ದು ತುಂಬಾ ಖುಷಿಯಾಗಿದೆ ಎಂದು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಲೀಕಯ್ಯ ಗುತ್ತೇದಾರ ಹೇಳಿದರು.

- Advertisement -

ಮಾಲೀಕಯ್ಯ ಗುತ್ತೇದಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಮೊದಲ ಬಾರಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಪ್ರಯುಕ್ತ, ಕಚೇರಿಯಲ್ಲಿ ಪತ್ರಿಕಾಗೋಷ್ಠಿನಡೆಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಾಂಗ್ರೆಸ್ ಪಕ್ಷದಿಂದ ನನಗೆ ಯಾವ ನಿರೀಕ್ಷೆ ಇಲ್ಲ. ಎಲ್ಲರಂತೆ ನಾನು ಈ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯಲು ಬಂದಿರುವೆ. ಉಮೇಶ್ ಜಾದವ್‌ರನ್ನ ಖಂಡಿತ ಸೋಲಿಸುತ್ತೇವೆ ಅದರಲ್ಲಿ ಎರಡು ಮಾತಿಲ್ಲ ಎಂದರು.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರ ಒಗ್ಗಟ್ಟು ಬಿಜೆಪಿ ಒಳ ಜಗ, ಮಾಡಿರುವ ನೂನ್ಯತೆಗಳಿಂದ, ಅವರ ವಿಫಲತೆಯಿಂದ ಕಾಂಗ್ರೆಸ್ ಪಕ್ಷ 20-25 ಸ್ಥಳಗಳಲ್ಲಿ ಗೆಲ್ಲುವುದು ಖಚಿತ ಎಂದರು.

ಈ ವೇಳೆ ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಮಾತನಾಡಿ, ನಾನು ಮತ್ತೆ ಮಾಲೀಕಯ್ಯ ಗುತ್ತೇದಾರ ರಾಜಕೀಯವಾಗಿ ಎದುರಾಳಿಗಳಾಗಿದ್ದೇವು. ಆದರೆ, ನಮ್ಮಲ್ಲಿ ವಯಕ್ತಿಕ ಭಿನ್ನಾಭಿಪ್ರಾಯಗಳು ಇರಲಿಲ್ಲ ಪರಸ್ಪರ ಸಹೋದರರಂತೆ ಇದ್ದೇವು. ಮುಂದೆ ಕೂಡ ಹಾಗೇ ಇರುತ್ತೇವೆ ಅವರು ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಇದ್ದವರು ಮತ್ತೆ ಮರಳಿ ಮನೆಗೆ ಬಂದಿದ್ದು ಖುಷಿಯಾಗಿದೆ. ಮುಂದಿನ ದಿನಗಳಲ್ಲಿ ಅವರು ನಮ್ಮ ಪಕ್ಷಕ್ಕೆ ಶಕ್ತಿ ತುಂಬಬೇಕು. ಅವರಿಗೆ ತುಂಬು ಹೃದಯದಿಂದ ಸ್ವಾಗತಿಸುತ್ತೇವೆ ಎಂದರು.

ಮಾಲೀಕಯ್ಯ ಗುತ್ತೇದಾರ ಅವರು ಕಾಂಗ್ರೆಸ್ ಸೇರಿದು ನಮಗೆ ಬಲಬಂದಂತಾಗಿದೆ. ಕಲಬುರಗಿಯಲ್ಲಿ ದೊಡ್ಡ ಶಕ್ತಿ ಜೊತೆಗೂಡಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೀಶ್ ಗುತ್ತೇದಾರ ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್, ಮಹಾಂತೇಶ್ ಕವಲಾಗಿ, ರೇಣುಕಾ ಸಿಂಧೆ, ಮಹಾಂತಪ್ಪ ಸಂಗಾವಿ, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಸದಸ್ಯರು ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಬಂಜಾರ ಸಮುದಾಯ ಒಗ್ಗಟಾದರೆ ನಮ್ಮ ಹಕ್ಕು ಪಡೆಯಲು ಸಾಧ್ಯ: ವಿಜಯ ಜಾಧವ

"ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಏಕೈಕ ಗಟ್ಟಿಯಾದ ಸಂಘಟನೆ ಇದಾಗಿದೆ....

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...

ಹಾಸನ | ಚನ್ನಕೇಶವ ದೇಗುಲದ ಸುತ್ತ ತಳ್ಳುಗಾಡಿ ತೆರವಿಗೆ ಸಾರ್ವಜನಿಕರ ಒತ್ತಾಯ 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ...

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100...