ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಯುವಕನೊಬ್ಬ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಕಲಬುರಗಿ ತಾಲ್ಲೂಕಿನ ಹತಗುಂದಾ ಗ್ರಾಮದಲ್ಲಿ ನಡೆದಿದೆ.
ಯಳವಂತಗಿ (ಕೆ) ಗ್ರಾಮದ ನಿವಾಸಿ ಸಚಿನ್ ಪರಮೇಶ್ವರ ಮಾನೆ (22) ಮೃತ ಯುವಕ.
ಹತಗುಂದಾ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಸ್ನೇಹಿತರಾದ ಕಾರ್ತಿಕ್, ಅಭಿಷೇಕ್ ಅವರೊಂದಿಗೆ ಸಚಿನ್ ಡ್ಯಾನ್ಸ್ ಮಾಡುತ್ತಿದ್ದರು. ಏಕಾಏಕಿ ಕುಸಿದು ಬಿದ್ದರು. ಕೂಡಲೇ ಅವರನ್ನು ಜಿಮ್ಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.