ಕಲಬುರಗಿ | ಗಾಂಜಾ ಸೇವನೆ ಆರೋಪ: 19 ವರ್ಷದ ಯುವಕನ ಬಂಧನ

Date:

ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪಾಕೀಜಾ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ 19 ವರ್ಷದ ಯುವಕನನ್ನು ಪೊಲೀಸರು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಯ ವರದಿ ಆಧರಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

- Advertisement -

ಸೋನಿಯಾ ಕಾಲೊನಿಯ ನಿವಾಸಿ ಮಹ್ಮದ್ ಸರ್ಫರಾಜ್ (19) ಬಂಧಿತ ಆರೋಪಿ. ಅಕ್ಟೋಬರ್ 21ರಂದು ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದರು. ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರ ನಿರ್ದೇಶನದಂತೆ, ಉಪ ಪೊಲೀಸ್ ಆಯುಕ್ತರಾದ ಪ್ರವೀಣ್ ಎಚ್. ನಾಯಕ್ ಮತ್ತು ಶಾಲೂ ಐಪಿಎಸ್ ಹಾಗೂ ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶಿವನಗೌಡ ಪಾಟೀಲ ಅವರ ಮಾರ್ಗದರ್ಶನದಲ್ಲಿ ರೋಜಾ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ದಿಲೀಪಕುಮಾರ ಸಾಗರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು. ಸಿಬ್ಬಂದಿ ಯಲ್ಲಪ್ಪ ಸಿ. ಅವರೂ ತಂಡದಲ್ಲಿದ್ದರು.

ಇದನ್ನು ಓದಿದ್ದೀರಾ? ಕಲಬುರಗಿ | 20 ಪ್ರಕರಣಗಳ ಆರೋಪಿಗೆ ಗುಂಡಾ ಕಾಯ್ದೆ ಅಡಿ ಬಂಧನ

ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬಸ್‌ನಲ್ಲಿ ಮರೆತು ಹೋಗಿದ್ದ ಚಿನ್ನಾಭರಣ ಮರಳಿಸಿದ ಚಾಲಕ, ನಿರ್ವಾಹಕ

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಬೆಳ್ಳಿ...

ವಿಜಯಪುರ | ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆ ಉದ್ಯೋಗ ನೀಡಿ: ವಿನೋದ ಖೇಡ

ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯಲ್ಲಿ...

ಬಾಗಲಕೋಟೆ | ಬಡವರ ಅನ್ನಕ್ಕೂ ಕನ್ನ! ಅಹಮದಾಬಾದ್‌ಗೆ ಅನ್ನಭಾಗ್ಯದ ಅಕ್ಕಿ ಸಾಗಾಟ; 34 ಟನ್ ಅಕ್ಕಿ ತುಂಬಿದ ಲಾರಿ ಜಪ್ತಿ

ಬಡವರು ಹಸಿವಿನಿಂದ ಬಳಲಬಾರದು, ಪ್ರತಿಯೊಂದು ಕುಟುಂಬಕ್ಕೂ ಆಹಾರ ಭದ್ರತೆ ದೊರೆಯಬೇಕು ಎಂಬ...

ಬಳ್ಳಾರಿ | ಆಂಧ್ರದ ಮಲ್ಲಯ್ಯನ ಜಾತ್ರೆಯಲ್ಲಿ ಬಡಿಗೆ ಕಾಳಗ: ಓರ್ವ ಸಾವು, 80 ಮಂದಿಗೆ ಗಾಯ

ಆಂಧ್ರದ ಆಲೂರು ಮಂಡಲದ ನೇರಣಿಕೆ ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ನಡೆಯುವ ಬಡಿಗೆ...