ಯುವಕನ ಕಿರುಕುಳಕ್ಕೆ ಬೇಸತ್ತು ಕುರಿಕೋಟಾ ಹೊಸ ಸೇತುವೆಯಿಂದ ಬೆಣ್ಣೆತೋರಾ ಜಲಾಶಯದ ಹಿನ್ನೀರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಮಲಾಪುರ ತಾಲೂಕಿನ ಕುರಿಕೋಟಾ ಗ್ರಾಮದ ಸಮೀಪ ಸೋಮವಾರ ನಡೆದಿದೆ.
ಕಮಲಾಪುರ ತಾಲೂಕಿನ ಭೂಸಣಗಿ ಗ್ರಾಮದ ಯುವತಿ ಸಾಕ್ಷಿ ಮನೋಜ ಉಪ್ಪಾರ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಅದೇ ತಾಲ್ಲೂಕಿನ ರಾಜನಾಳ ಗ್ರಾಮದ ಅಭಿಷೇಕ್ ನಾಮದೇವ ಮಾಳಗೆ ಎಂಬ ಯುವಕ ನಿರಂತರ ಕಿರುಕುಳ ಕೊಡುತ್ತಿದ್ದ ಕಾರಣ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಪೋಷಕರ ದೂರಿನ ಮೇರೆಗೆ ಮಹಾಗಾಂವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,
ಯುವಕ ದುಬೈನಲ್ಲಿರುವ ಯುವಕ ಅಭಿಷೇಕ ಯುವತಿ ಜೊತೆಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಈ ಬಗ್ಗೆ ಪೊಲೀಸರಿಗೆ ಪೋಷಕರು ದೂರು ನೀಡಿದ್ದರೂ ಪದೇ ಪದೇ ಪೋಟೊ ಹರಿಬಿಡುತ್ತಿದ್ದ. ಇದರಿಂದ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಇದನ್ನೂ ಓದಿ : ಬೀದರ್ | ಜಿಲ್ಲಾ ಬೆಳೆ ಸಮೀಕ್ಷೆದಾರರ ಸಂಘ ಉದ್ಘಾಟನೆ
ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಶೋಧ ಕಾರ್ಯ ನಡೆಸಿದರೂ ಯುವತಿ ಪತ್ತೆಯಾಗಲಿಲ್ಲ. ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು.