ಕಲಬುರಗಿ | ಪತಿ ಕಿರುಕುಳ ಆರೋಪ: ಕೊಡಲಿಯಿಂದ ಹೊಡೆದು ಪತಿಯ ಕೊಲೆ

Date:

ನಿರಂತರ ಪತಿಯ ಕಿರುಕುಳ ತಾಳಲಾರದೆ ಪತ್ನಿಯೇ ಕೊಡಲಿಯಿಂದ ಹೊಡೆದು ಪತಿಯನ್ನು ಕೊಲೆ ಮಾಡಿರುವ ಘಟನೆ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

- Advertisement -

ಕೊಲೆಯಾದ ವ್ಯಕ್ತಿಯನ್ನು ಸೇಡಂ ತಾಲೂಕಿನ ಹೆಡ್ಡಳ್ಳಿ ಗ್ರಾಮದ ನಾಗೇಂದ್ರ ಕಾಶಪ್ಪ ಮುಧೋಳ (32) ಎಂದು ಗುರುತಿಸಲಾಗಿದೆ. ಕೊಲೆ ಆರೋಪದಡಿ ಆತನ ಪತ್ನಿ ಸುಧಾರಾಣಿ ನಾಗೇಂದ್ರ ಮುಧೋಳ (27) ಅವರನ್ನು ರಟಕಲ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕುರಿ ಮೇಯಿಸುವ ಕೆಲಸದ ಹಿನ್ನೆಲೆಯಲ್ಲಿ ನಾಗೇಂದ್ರ ತನ್ನ ಪತ್ನಿಯ ತವರುಮನೆಯಾದ ಕೋಡ್ಲಿ ಗ್ರಾಮದಲ್ಲಿ ಕುಟುಂಬ ಸಮೇತ ವಾಸವಾಗಿದ್ದ. ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.

ಭಾನುವಾರ ತಡರಾತ್ರಿ ಪತ್ನಿಯೊಂದಿಗೆ ನಾಗೇಂದ್ರ ಜಗಳ ತೆಗೆದಿದ್ದು, ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿದೆ. ಆಗ ಸುಧಾರಾಣಿ ಕೊಡಲಿಯಿಂದ ನಾಗೇಂದ್ರನಿಗೆ ಹೊಡೆದಿದ್ದು, ತೀವ್ರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಳಿಕ ರಾತ್ರಿ ಗಸ್ತಿನಲ್ಲಿದ್ದ ರಟಕಲ್ ಠಾಣೆ ಪೊಲೀಸರ ಮುಂದೆ ಸುಧಾರಾಣಿ ಹಾಜರಾಗಿ, ತಾನೇ ಪತಿಯನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಸೋಮವಾರ ಕಾಳಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡಿರು ಶ್ರೀನಿವಾಸಲು, ಚಿಂಚೋಳಿ ಡಿವೈಎಸ್‌ಪಿ ಸಂಗಮೇಶ ಹಿರೇಮಠ, ಸುಲೇಪೇಟ ಸಿಪಿಐ ಕೃಷ್ಣಕುಮಾರ ಪಾಟೀಲ ಹಾಗೂ ಪಿಎಸ್‌ಐ ಶೀಲಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಕೆಪಿಎಸ್‌ಸಿ ನೇಮಕ ಅಕ್ರಮ ಆರೋಪ: ಕಲಬುರಗಿಯಲ್ಲಿ ಇ.ಡಿ ದಾಳಿ

ಈ ಕುರಿತು ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...