ಕಲಬುರಗಿ | ನಾಗಾವಿ ಐತಿಹಾಸಿಕ ಸ್ಥಳದ ಅಭಿವೃದ್ದಿಗೆ ಕಾರ್ಯ ಯೋಜನೆ: ಸಚಿವ ಪ್ರಿಯಾಂಕ್‌ ಖರ್ಗೆ ಪರಿಶೀಲನೆ

Date:

Advertisements

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿರುವ ನಾಗಾವಿ ಐತಿಹಾಸಿಕ ಸ್ಥಳವನ್ನು ಅಭಿವೃದ್ಧಿ ಪಡಿಸಲು ಕಾರ್ಯಯೋಜನೆ ರೂಪಿಸಲಾಗಿದ್ದು, ಅದರಂತೆ ಸ್ಮಾರಕಗಳನ್ನು ಉಳಿಸಿಕೊಂಡು ಸುಂದರ ಪ್ರವಾಸಿ ತಾಣವಾಗಿ ರೂಪಿಸಲು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ನಾಗಾವಿಯಲ್ಲಿ 10-13 ಶತಮಾನಗಳ ನಡುವೆ ಘಟಿಕಾಸ್ಥಾನವಿದ್ದು, 400ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಪಾಠ-ಪ್ರವಚನಗಳಲ್ಲಿ ನಿರತರಾಗಿದ್ದರು. ಅವರಿಗೆ ಉಳಿದುಕೊಳ್ಳಲು ವಸತಿ ನಿಲಯಗಳ ವ್ಯವಸ್ಥೆಯಿದ್ದು, ಅತ್ಯುತ್ತಮ ಗ್ರಂಥಾಲಯವನ್ನೂ ಹೊಂದಿತ್ತು ಎಂಬ ಐತಿಹ್ಯಗಳಿವೆ. ಇಂತಹ ಇತಿಹಾಸವನ್ನು ಹೊಂದಿರುವ ಈ ಸ್ಥಳವನ್ನು ಉಳಿಸಿಕೊಂಡು, ಸ್ಮಾರಕಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿರುವುದರಿಂದ ನಾಗಾವಿ ದೇಗುಲಗಳು, ಶಾಸನ ಹಾಗೂ ಸ್ಮಾರಕಗಳನ್ನು ಒಳಗೊಂಡ ಸಂಕೀರ್ಣವನ್ನು ರೂಪಿಸಲಾಗುವುದು ಎಂದು ಸಚಿವರು ಹೇಳಿದರು.

WhatsApp Image 2024 09 10 at 5.59.56 PM

ಪ್ರವಾಸಿಗರಿಗೆ ವಾಹನ ತಂಗುದಾಣ, ವಿಶ್ರಾಂತಿ ಕೊಠಡಿ, ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗುವುದು ಎಂದೂ ತಿಳಿಸಿದರು.

Advertisements

ಯಲ್ಲಮ್ಮ ದೇಗುಲ, ನಂದೀಶ್ವರ ದೇಗುಲ, ರಾಮೇಶ್ವರ ಹಾಗೂ ರಾವಣೇಶ್ವರ ದೇಗುಲಗಳು, ಕಡ್ಲೆ ಬಸವಣ್ಣ, ಹನುಮಾನ್‌ ಹಾಗೂ ವೀರಪ್ಪಯ್ಯ ದೇಗುಲಗಳು, ಮಧುಸೂಧನಾಲಯ, ಮಲ್ಲಯ್ಯನ ಹಾಗೂ ಈಶ್ವರನ ದೇಗುಲಗಳು, ಎರಡು ಮಸೀದಿಗಳು, ಒಂದು ಜೈನ ಬಸದಿಯನ್ನು ಒಳಗೊಂಡಂತೆ ನಾಗಾವಿ ಸಂಕೀರ್ಣವನ್ನು ರೂಪಿಸಲಾಗುವುದೆಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದರು.

ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ.ಫಾಹಿಮ್, ಪುರಾತತ್ವ ಇಲಾಖೆಯ ನಿರ್ದೇಶಕರಾದ ಸ್ಮಿತಾ ರೆಡ್ಡಿ ಸಭೆಯಲ್ಲಿ ಹಾಜರಿದ್ದರು.

WhatsApp Image 2024 09 10 at 5.59.19 PM 1
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X