ಕಲಬುರಗಿ | ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸುವಂತೆ ಆದರ್ಶ ಗ್ರಾಮ ಸಮಿತಿ ಅಗ್ರಹ

Date:

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಎಲ್ಲ ಗ್ರಾಮಗಳಿಗೆ ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಯಾಳವಾರ ಆದರ್ಶ ಗ್ರಾಮ ಸಮಿತಿಯ ಮುಖಂಡರು ಸಾರಿಗೆ ನಿಗಮದ ಜೇವರ್ಗಿ ಘಟಕದ ವ್ಯವಸ್ಥಾಪಕರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

- Advertisement -

ಹಕ್ಕೊತ್ತಾಯ ಪತ್ರ ಸಲ್ಲಿಸಿ ಮಾತನಾಡಿದ ಇಬ್ರಾಹಿಂ ಪಟೀಲ ಯಾಳವಾರ, “ಜೀವರ್ಗಿ ತಾಲೂಕಿನಲ್ಲಿ ಪ್ರಸ್ತುತ ಶೈಕ್ಷಣಿಕ ಸಾಲಿನ ಶಾಲಾ ಕಾಲೇಜುಗಳು ಪ್ರಾರಂಭಗೊಂಡಿವೆ. ಆದರೆ, ಗ್ರಾಮಗಳಿಗೆ ಬಸ್‌ ಸೌಕರ್ಯ ಕಡಿಮೆಯಾಗಿದ್ದು, ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜು ತಲುಪತು ಸಾಧ್ಯವಾಗುತ್ತಿಲ್ಲ. ಅವರ ವಿದ್ಯಾಭ್ಯಾಸ ಕುಂಠಿತಗೊಳ್ಳುತ್ತಿದೆ. ಅಲ್ಲದೆ, ಕೆಲವೊಂದು ಮಾರ್ಗಗಳಲ್ಲಿ ಬಸ್ಸುಗಳು ತುಂಬಿರುತ್ತವೆ. ಹೀಗಾಗಿ, ಕೆಲವೆಡೆ ಬಸ್‌ ಚಾಲಕರು-ನಿರ್ವಾಹಕರು ಬಸ್‌ ನಿಲ್ಲಿಸದೇ ವಿದ್ಯಾರ್ಥಿಗಳನ್ನು ಬಿಟ್ಟುಹೋಗುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಜಾಸ್ತಿಯಾಗಿ, ಬಸ್‌ನ ಟಾಪ್‌ನಲ್ಲಿ ಕುಳಿತು ಪ್ರಯಾಣ ಮಾಡುವಂತಾಗಿದೆ. ಇಂತಹ ಸಮಯದಲ್ಲಿ ಅಪಘಾತ ಸಂಭವಿಸಿದರೆ, ಅದಕ್ಕೆ ಸಾರಿಗೆ ಇಲಾಖೆಯೇ ಹೊಣೆಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ವಿದ್ಯಾರ್ಥಿಗಳಿಗೆ ಯಾವುದೆ ತೊಂದರೆಯಾಗದ ರೀತಿಯಲ್ಲಿ ಎಲ್ಲ ಹಳ್ಳಿಗಳಿಗೂ ಸಮರ್ಪಕ ಬಸ್‌ ಸೌಲಭ್ಯ ಒದಗಿಸಬೇಕು. ಸಮಯಕ್ಕೆ ಸರಿಯಾಗಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ತಮ್ಮ ಸ್ಥಳಗಳಿಗೆ ತಲುಪಲು ಅನುಕೂಲ ಮಾಡಿಕೊಡಬೇಕು. ಅದರಂತೆ, ಜೇವರ್ಗಿಯಿಂದ ಯಡ್ರಾಮಿಗೆ ಚಿಗರಳ್ಳಿ ಮಾರ್ಗವಾಗಿ ಹೋಗುವ ಎಲ್ಲ ಬಸ್‌ಗಳು ಯಾಳವಾರ ಕ್ರಾಸ್‌ನಲ್ಲಿ ನಿಲುಗಡೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ ಪಟೇಲ್, ಪೊಲೀಸ್ ಪಾಟೀಲ್, ಬಿ.ಎಚ್ ಮಾದಿ ಪಾಟೀಲ್, ನಾಗರಾಜ್ ಸಜ್ಜನ್, ಅಜೀಸ್ ಪಟೇಲ್, ದೇವು, ದೊರೆ, ವಜೀರ್ ಪಟೇಲ್, ಫತ್ರು ಪಟೇಲ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...