ಕಲಬುರಗಿ | ಮುಚ್ಚಿರುವ ಕೂಸಿನ ಮನೆಗಳನ್ನು ಕೂಡಲೇ ಪುನರಾರಂಭಿಸಲು ಎಐಎಂಎಸ್‌ಎಸ್ ಒತ್ತಾಯ

Date:

ನರೇಗಾ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳ ಆರೈಕೆಗಾಗಿ ಗ್ರಾಮ ಪಂಚಾಯಿತಿಗಳಲ್ಲಿ ಆರಂಭಿಸಲಾಗಿರುವ ಕೂಸಿನ ಮನೆಗಳನ್ನು ಅನುದಾನದ ಕೊರತೆಯ ನೆಪದಲ್ಲಿ ಮುಚ್ಚುತ್ತಿರುವ ಕ್ರಮವನ್ನು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್) ತೀವ್ರವಾಗಿ ಖಂಡಿಸಿದೆ.

- Advertisement -

ಈ ಕುರಿತು ಪ್ರಕಟಣೆ ಹೊರಡಿಸಿರುವ ಎಐಎಂಎಸ್‌ಎಸ್ ಜಿಲ್ಲಾ ಕಾರ್ಯದರ್ಶಿ ಡಾ. ಸೀಮಾ ದೇಶಪಾಂಡೆ, ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಒಟ್ಟು 538 ಕೂಸಿನ ಮನೆಗಳಿಗೆ ಬೀಗ ಹಾಕಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

‘ಬಳ್ಳಾರಿ 51, ಬೀದರ್‌ 77, ಕಲಬುರಗಿ 127, ಕೊಪ್ಪಳ 177, ರಾಯಚೂರು 63, ವಿಜಯನಗರ 40 ಹಾಗೂ ಯಾದಗಿರಿ 63 ಕೂಸಿನ ಮನೆಗಳು ಸ್ಥಗಿತಗೊಂಡಿವೆ. ಕೇಂದ್ರ ಸರ್ಕಾರ ಜುಲೈ 1ರಿಂದ ‘ವಿಬಿ ಜಿ ರಾಮ ಜಿ’ ಯೋಜನೆ ಜಾರಿಗೆ ತಂದಿದ್ದು, ಇದರಡಿ ಕೂಸಿನ ಮನೆಗಳ ಆರೈಕೆದಾರರಿಗೆ ಕೂಲಿ ಪಾವತಿಸಲು ತಾಂತ್ರಿಕವಾಗಿ ಸಾಧ್ಯವಾಗುತ್ತಿಲ್ಲ ಎಂಬ ಕಾರಣ ನೀಡಲಾಗುತ್ತಿದೆ’ ಎಂದು ಅವರು ತಿಳಿಸಿದ್ದಾರೆ.

‘ಜನಕಲ್ಯಾಣ ಯೋಜನೆಗಳನ್ನು ಅನುದಾನದ ಕೊರತೆಯಂತಹ ಕಾರಣಗಳನ್ನು ಮುಂದಿಟ್ಟುಕೊಂಡು ಹಂತಹಂತವಾಗಿ ಸ್ಥಗಿತಗೊಳಿಸುತ್ತಿರುವ ಸರ್ಕಾರದ ಕ್ರಮ ಮಹಿಳಾ ಕಾರ್ಮಿಕ ವಿರೋಧಿ ಧೋರಣೆಯನ್ನು ಸ್ಪಷ್ಟಪಡಿಸುತ್ತದೆ’ ಎಂದು ಅವರು ಆರೋಪಿಸಿದ್ದಾರೆ.

‘ಮಹಿಳೆಯರು ಪುರುಷರಿಗೆ ಸಮಾನವಾಗಿ ಸಾಮಾಜಿಕ ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳಲು ಮಕ್ಕಳ ಆರೈಕೆ ಕೇಂದ್ರಗಳು ಅತ್ಯಂತ ಅಗತ್ಯವಾಗಿವೆ. ಇಂತಹ ಯೋಜನೆಗಳನ್ನು ಸ್ಥಗಿತಗೊಳಿಸುವುದರಿಂದ ಮಕ್ಕಳ ಪಾಲನೆ–ಪೋಷಣೆಯ ಜವಾಬ್ದಾರಿಯಿಂದಾಗಿ ಮಹಿಳೆಯರು ಮತ್ತೆ ಮನೆಗೆ ಸೀಮಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಲಿದೆ’ ಎಂದು ಅವರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ಜಿ.ಪಂ ಉಪ ಕಾರ್ಯದರ್ಶಿಗಳ ಕಿರುಕುಳ ಖಂಡಿಸಿ ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ

ಕೇಂದ್ರ ಸರ್ಕಾರವು ಕಲ್ಯಾಣ ಕರ್ನಾಟಕದಲ್ಲಿ ಮುಚ್ಚಿರುವ ಎಲ್ಲ ಕೂಸಿನ ಮನೆಗಳನ್ನು ಕೂಡಲೇ ಪುನರಾರಂಭಿಸಬೇಕು. ಕೂಸಿನ ಮನೆಗಳ ಆರೈಕೆದಾರರಿಗೆ ಬಾಕಿ ಇರುವ ಗೌರವಧನ ಬಿಡುಗಡೆ ಮಾಡಬೇಕು ಹಾಗೂ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕೂಸಿನ ಮನೆಗಳನ್ನು ತೆರೆಯಬೇಕು ಎಂದು ಎಐಎಂಎಸ್‌ಎಸ್ ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...