ಕಲಬುರಗಿ | ಐರಾವತ, ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಚಾಲಕರು ಸ್ಥಳದಲ್ಲಿಯೇ ಸಾವು!

Date:

ಕಮಲಾಪುರ ತಾಲೂಕಿನ ಡೊಂಗರಗಾಂವ ಕ್ರಾಸ್ ಸಮೀಪ ಶನಿವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐರಾವತ ಹಾಗೂ ಕೆಎಸ್ಸಾರ್ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಚಾಲಕರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

- Advertisement -

ಮೃತರನ್ನು ಕೆಎಸ್ಸಾರ್ಟಿಸಿ ಬಸ್ ಚಾಲಕ ತುಕಾರಾಮ ಹಾಗೂ ಐರಾವತ ಬಸ್ ಚಾಲಕ ಶಿವಾನಂದ ರೆಡ್ಡಿ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಮಾಹಿತಿಯ ಪ್ರಕಾರ, ಬೀದರ್‌ನಿಂದ ದಾವಣಗೆರೆ ಕಡೆಗೆ ಪ್ರಯಾಣಿಸುತ್ತಿದ್ದ ಐರಾವತ ಬಸ್ ಹಾಗೂ ಕಲಬುರಗಿಯಿಂದ ಬೀದರ್ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಡೊಂಗರಗಾಂವ ಕ್ರಾಸ್ ಬಳಿ ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದಿವೆ. ಡಿಕ್ಕಿಯ ತೀವ್ರತೆಗೆ ಎರಡೂ ಬಸ್‌ಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕೆಎಸ್ಸಾರ್ಟಿಸಿ ಬಸ್ ಚಾಲಕ ತುಕಾರಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಐರಾವತ ಬಸ್ ಚಾಲಕ ಶಿವಾನಂದ ರೆಡ್ಡಿ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ.

ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಗೊಂಡ ಪ್ರಯಾಣಿಕರನ್ನು ಬಸ್‌ಗಳಿಂದ ಹೊರತೆಗೆದು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿದರು. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ಕೆಲವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಕಮಲಾಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸಂಚಾರವನ್ನು ಸುಗಮಗೊಳಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಕುಣಿ ಅಗೆಯಲು ನಿರಾಕರಣೆ: ದಲಿತರ ಮೇಲೆ ಹಲ್ಲೆ, ಗ್ರಾಮ ಬಹಿಷ್ಕಾರದ ಬೆದರಿಕೆ ಆರೋಪ

ಈ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...